6-10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ 10,000/- ಪ್ರೋತ್ಸಾಹ ಧನ. ಆಗಸ್ಟ್ 31 ಕಡೆ ದಿನಾಂಕ ಆಸಕ್ತ ಪೋಷಕರು ಕೂಡಲೇ ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವ ಜನಜನಿತ ಮಾತಿನ ಬಗ್ಗೆ ಎಲ್ಲರೂ ಕೇಳಿದ್ದೇವೆ. ಮಕ್ಕಳ ಭವಿಷ್ಯ ನಿರ್ಧಾರ ಹಾಕುವುದು ಶಾಲೆಯ ತರಗತಿಗಳಲ್ಲಿ ಎನ್ನುವುದು ಕೂಡ ಅಷ್ಟೇ ಸತ್ಯವಾದ ಮಾತು. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸುವುದಕ್ಕಾಗಿ ಹಲವು ಯೋಜನೆಗಳನ್ನು ಕೈಗೊಂಡಿವೆ.

ಕಡ್ಡಾಯ ಶಿಕ್ಷಣ ನೀತಿ, ಉಚಿತ ಶಿಕ್ಷಣದಂತಹ ಯೋಜನೆಗಳ ಜೊತೆಗೆ ಉಚಿತವಾಗಿ ಶಿಕ್ಷಣದ ಪರಿಕರಗಳನ್ನು, ಪಠ್ಯಪುಸ್ತಕಗಳನ್ನು, ಸಮವಸ್ತ್ರಗಳನ್ನು ವಿತರಣೆ ಮಾಡಿ ಪೋಷಕಾಂಶಯುಕ್ತ ಆಹಾರ ಕೂಡ ನೀಡುವ ಬಿಸಿ ಊಟದಂತಹ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಇಷ್ಟೆಲ್ಲ ಸೌಲಭ್ಯಗಳ ಜೊತೆಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟು ಪ್ರೋತ್ಸಾಹಿಸುತ್ತಿದೆ.

ಮೀನು ಸಾಗಾಣಿಕೆಗೆ ಸರ್ಕಾರದಿಂದ ಸಿಗಲಿದೆ 60% ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ.!

ರಾಜ್ಯದಲ್ಲಿ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನಗಳನ್ನು ಕೂಡ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, NGO ಗಳು ಮತ್ತು ಖಾಸಗಿ ಸಂಸ್ಥೆಗಳು ಕೂಡ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹ ಧನವನ್ನು ನೀಡುತ್ತಿವೆ. ಇಂದು ಈ ಅಂಕಣದಲ್ಲಿ ಇದೇ ರೀತಿ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನದ (Scholorship) ಯೋಜನೆಯೊಂದರ ಬಗ್ಗೆ ತಿಳಿಸುತ್ತಿದ್ದೇವೆ.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವಾಲಯ ( Science and technology department) ಇನ್ಸ್ಪೈರ್ ಅವಾರ್ಡ್ ಮನಕ್ ಯೋಜನೆ (Inspire award MANAK Scheme) ಮೂಲಕ ಕಲಿಯುವ ಮಕ್ಕಳಿಗೆ ಧನಸಹಾಯ ನೀಡುತ್ತಿದೆ. ಈ ಯೋಜನೆಗೆ ಯಾವ ತರಗತಿಯ ಮಕ್ಕಳು ಅರ್ಜಿ ಸಲ್ಲಿಸಬಹುದು, ಎಷ್ಟು ನೆರವು ಸಿಗುತ್ತದೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವುದನ್ನು ತಿಳಿದುಕೊಳ್ಳಲು ಈ ಅಂಕಣವನ್ನು ಪೂರ್ತಿಯಾಗಿ ನೋಡಿ ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಳ್ಳಿ.

ಬ್ಯಾಂಕಿನಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟಿರುವವರಿಗೆ ಹೊಸ ರೂಲ್ಸ್ ಜಾರಿಗೆ ತಂದ RBI…! ತಪ್ಪದೆ ಈ ವಿಚಾರ ತಿಳಿದುಕೊಳ್ಳಿ

ಪ್ರೋತ್ಸಾಹಧನ ಪಡೆಯಲು ಯಾರು ಅರ್ಹರು:-

● 10 – 15 ವರ್ಷ ವಯಸ್ಸಿನ 6ನೇ ತರಗತಿಯಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
● ದೇಶದಲ್ಲಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
● ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಶಾಲೆಗಳು, ಸ್ಥಳೀಯ ಮತ್ತು NGO ಗಳು ನಡೆಸುತ್ತಿರುವ ಶಾಲೆಗಳು, ಅನುದಾನ ಸಹಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ವ್ಯಾಪ್ತಿಗೆ ಬರುತ್ತಾರೆ.

ಆರ್ಥಿಕ ನೆರವು:-

● ಇನ್ಸ್ಪೈರ್ ಅವಾರ್ಡ್ ಮನಕ್ ಯೋಜನೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಒಂದು ಶೈಕ್ಷಣಿಕ ವರ್ಷದಲ್ಲಿ ಒಂದೇ ಬಾರಿಗೆ 10,000 ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.
● ಈ ಹಣವು ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ DBT ಮೂಲಕ ವರ್ಗಾವಣೆ ಆಗುತ್ತದೆ.

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆ ಕಳೆದು ಹೋದರೆ ಹೊಸ ನಂಬರ್ ಸೇರಿಸುವುದು ಹೇಗೆ.? ನಿಮ್ಮ ಮೊಬೈಲ್ ಮೂಲಕವೇ ನಂಬರ್ ಬದಲಾವಣೆ ಮಾಡುವ ವಿಧಾನ.!

ಬೇಕಾಗುವ ದಾಖಲೆಗಳು:-

● ವಿದ್ಯಾರ್ಥಿಯ ಆಧಾರ್ ಕಾರ್ಡ್
● ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರ
● ಕಳೆದ ವರ್ಷದ ಅಂಕಪಟ್ಟಿ
● ಶಾಲೆಯಿಂದ ವಿದ್ಯಾಭ್ಯಾಸ ದೃಢೀಕರಣ ಪ್ರಮಾಣ ಪತ್ರ
● ಇನ್ನಿತರ ಪ್ರಮುಖ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:-

● ಈ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು ಆಯಾ ಜಿಲ್ಲೆ ಅಥವಾ ರಾಜ್ಯ ಶಿಕ್ಷಣ ಪ್ರಾಧಿಕಾರದ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
● ಆನ್ಲೈನಲ್ಲಿ ಅಜ್ಜಿ ಫಾರಂ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಕೆ ಪೂರ್ತಿ ಮಾಡಬಹುದು.

ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಉಚಿತವಾಗಿ ಸಿಗಲಿದೆ ಹೊಸ ಸೈಕಲ್, ಇದೊಂದು ದಾಖಲೆ ಜೊತೆ ಅರ್ಜಿ ಸಲ್ಲಿಸಿ ಸಾಕು.!

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ:-
02764 – 261139, 09638418605

ವೆಬ್ಸೈಟ್ ವಿಳಾಸ:-
inspire@nifindia.org

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- ಈಗಾಗಲೇ ಆರಂಭಗೊಂಡಿದೆ.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಆಗಸ್ಟ್ 31, 2023.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now