ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದ ಜನರಿಗಾಗಿ ಎಲ್ಲಾ ವರ್ಗವನ್ನು ಕೂಡ ಪರಿಗಣನೆಗೆ ತೆಗೆದುಕೊಂಡು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಂತೆಯೇ ಕಳೆದ ವರ್ಷ ದೇಶದ ಮಟ್ಟದಲ್ಲಿ ವಿಶೇಷವಾಗಿ ವಿಶ್ವಕರ್ಮ ದಿನಾಚರಣೆ ಆಚರಿಸಿ ಪಿಎಂ ವಿಶ್ವಕರ್ಮ ಯೋಜನೆಯ ( PM Vishvakarma Scheme ) ಮೂಲಕ ಕುಶಲಕರ್ಮಿಗಳ ಬದುಕನ್ನು ಬೆಳಗುವಂತಹ ಅನೇಕ ಯೋಜನೆಗಳನ್ನು ಘೋಷಿಸಿದೆ.
ದೇಶದಾದ್ಯಂತೆ ಇರುವ 18ಕ್ಕೂ ಹೆಚ್ಚು ಈ ರೀತಿ ಕುಶಲಗಾರಿಕೆ ಕಸುಬುಗಳಲ್ಲಿ ತೊಡಗಿಕೊಂಡಿರುವವರಿಗೆ ಅವರ ಕೌಶಲ್ಯವನ್ನು (Skill) ಅಭಿವೃದ್ಧಿಪಡಿಸಲು ಶಿಷ್ಯ ವೇತನ ಸಮೇತ ತರಬೇತಿ ಏರ್ಪಡಿಸಿ ಆ ಕ್ಷೇತ್ರದಲ್ಲಿ ಸ್ವಾವಲಂಬಿಗಳನ್ನಾಗಿಸಲು ಸ್ವ ಉದ್ಯಮದಲ್ಲಿ ತೊಡಗಿರುವವರಿಗೆ 3 ಲಕ್ಷದವರೆಗೆ ಸಾಲವನ್ನು ( Loan ) ನೀಡಲು ಮುಂದಾಗಿದೆ. ಇದರ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಈ ಸುದ್ದಿ ಓದಿ :- ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ.!
ಪಿಎಂ ವಿಶ್ವಕರ್ಮ ಯೋಜನೆಯ ಗುರಿ:-
* ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡಿ ಕುಶಲಕರ್ಮಿಗಳಿಗೆ ಏಳಿಗೆಗೆ ನೆರವಾಗುವುದು.
* ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ಒದಗಿಸುವುದು ಮಾತ್ರವಲ್ಲದೆ ಅವರು ತಯಾರಿಸುವ ಉತ್ಪನ್ನಗಳಿಗೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು.
ಈ ಯೋಜನೆಯ ಪ್ರಯೋಜನಗಳು:-
* ಅಕ್ಕಸಾಲಿಗ, ಕಮ್ಮಾರ, ಕ್ಷೌರಿಕ ಮತ್ತು ಚಮ್ಮಾರ ಮುಂತಾದ 18 ಬಗೆಯ ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರು 3 ಲಕ್ಷದವರೆಗೆ ಯಾವುದೇ ಆಧಾರವಿಲ್ಲದೆ ಸಾಲವನ್ನು ಪಡೆರಬಹುದು,
* ವಾರ್ಷಿಕವಾಗಿ 5% ಬಡ್ಡಿ ದರದಲ್ಲಿ ಎರಡು ಕಂತುಗಳಲ್ಲಿ ಈ ಸಾಲಸೌಲಭ್ಯ ಸಿಗುತ್ತದೆ.
ಈ ಸುದ್ದಿ ಓದಿ :- ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆ.! 26,000 ಮಹಿಳೆಯರಿಗೆ ಸಿಗಲ್ಲ 6ನೇ ಕಂತಿನ ಹಣ.!
ಬೇಕಾಗಿರುವ ಅರ್ಹತೆ :-
* ಅರ್ಜಿ ಸಲ್ಲಿಸಲು ಬಯಸುವವರು ಸಾಂಪ್ರದಾಯಿಕ ಕಸಬುಗಳು ಎಂದು ಘೋಷಿತವಾಗಿರುವ 18 ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿರಬೇಕು.
* 18 ವರ್ಷ ಮೇಲ್ಪಟ್ಟವರಾಗಿರಬೇಕು.
* ಒಂದು ಕುಟುಂಬದಿಂದ ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರಾಗಿರುತ್ತಾರೆ.
* ಅರ್ಜಿ ಸಲ್ಲಿಸಿ ನೊಂದಹಿಸಿಕೊಳ್ಳುವ ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು.
* ಕಳೆದ 5 ವರ್ಷಗಳಲ್ಲಿ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ಸಾಲಗಳನ್ನು ಪಡೆದಿರಬಾರದು.
* ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ್ದರೆ ಅರ್ಹರಾಗಿರುತ್ತಾರೆ.
ಬೇಕಾಗುವ ದಾಖಲೆಗಳು:-
* ಆಧಾರ್ ಕಾರ್ಡ್
* ವೋಟರ್ ಐಡಿ
* ಪ್ಯಾನ್ ಕಾರ್ಡ್
* ನಿವಾಸದ ಪ್ರಮಾಣ ಪತ್ರ
* ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಕೆಲಸಕ್ಕೆ ಸಂಬಂಧಿಸಿದ ದಾಖಲೆಗಳು (ಗ್ರಾಮ ಪಂಚಾಯಿತಿಯಿಂದ ದೃಢೀಕರಿಸಿದ್ದು)
* ಆದಾಯ ಮತ್ತು ಜಾತಿ ಪ್ರಮಾಣ ಪತ್ರ
* ಬ್ಯಾಂಕ್ ಖಾತೆ ವಿವರಗಳು
ಈ ಸುದ್ದಿ ಓದಿ :- ಆಡು, ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ರೈತರಿಗೆ PMEGP ಯೋಜನೆಯಡಿ 20 ದಿನಗಳಲ್ಲಿ ಸಿಗಲಿದೆ 20 ಲಕ್ಷ ಲೋನ್ 7 ಲಕ್ಷ ಸಬ್ಸಿಡಿ ಸಿಗುತ್ತೆ.!
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
* ಪ್ರತೀ ಗ್ರಾಮಗಳಲ್ಲಿರುವ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೇ ಅರ್ಜಿ ಸಲ್ಲಿಸಬಹುದು.
* https://pmvishwakarma.gov.in ವೆಬ್ಸೈಟ್ ಗೆ ಭೇಟಿ ನೀಡಿ ಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಅಲ್ಲೇ ಅರ್ಜಿ ಸಲ್ಲಿಸುವ ಲಿಂಕ್ ಇರುತ್ತದೆ, ಅದನ್ನು ಕ್ಲಿಕ್ ಮಾಡುವ ಮೂಲಕ ಮುಂದುವರಿಯಬಹುದು.
* ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು, ಮುಂದೆ ಹಲವಾರು ಹಂತಗಳಲ್ಲಿ ಈ ರೆಫರೆನ್ಸ್ ನಂಬರ್ ಬೇಕಾಗುತ್ತದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿಗಾಗಿ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಹತ್ತಿರದಲ್ಲಿರುವ ಕಾಮನ್ ಸೇವಾ ಸೆಂಟರ್ (CSC Centre) ಪ್ರತಿನಿಧಿಯನ್ನು ಕೇಳಿ ಮಾಹಿತಿ ಪಡೆಯಿರಿ.