RTE Application 2024: ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಈ ದಿನಾಂಕದಿಂದಲೇ ಅರ್ಜಿ ಪ್ರಾರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ.!

 

WhatsApp Group Join Now
Telegram Group Join Now

ಕೇಂದ್ರ ಸರ್ಕಾರ ಜಾರಿಗೆ ತಂದ ಶಿಕ್ಷಣ ಹಕ್ಕು (RTE) ಕಾಯಿದೆ ಸರ್ವರಿಗೂ ಸಮ ಶಿಕ್ಷಣವನ್ನು ಪತಿಪಾದಿಸುತ್ತದೆ. ಸರ್ಕಾರದ ಈ ನೂತನ ಶಿಕ್ಷಣ ನೀತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳು ಉಚಿತವಾಗಿ ಅಗತ್ಯವಿರುವ ಶಿಕ್ಷಣವನ್ನು ತಮ್ಮ ಹತ್ತಿರದ ಸ್ಥಳದಲ್ಲಿಯೇ ಪಡೆಯಬಹುದು.

RTE ಕಾಯ್ದೆಯನ್ನು ಕರ್ನಾಟಕವು ಕೂಡ ಅಳವಡಿಸಿಕೊಂಡಿದೆ ಮತ್ತು ಈ ಕಾಯ್ದೆಯ ಗುರಿಯಂತೆ 6 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸುತ್ತದೆ. RTE ಕಾಯ್ದೆ ಪ್ರಕಾರ ಎಲ್ಲಾ ಖಾಸಗಿ ಶಾಲೆಗಳಲ್ಲಿ 25%ರಷ್ಟು ಸೀಟುಗಳನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಮಕ್ಕಳಿಗೆ ಮೀಸಲಿಡಬೇಕು, ಅದಕ್ಕೆ ತಗಲುವ ವೆಚ್ಚಕ್ಕೆ ಸರ್ಕಾರದಿಂದ ಆರ್ಥಿಕ ಸಹಾಯವನ್ನು ಪಡೆಯಬಹುದು.

ಈ ಸುದ್ದಿ ಓದಿ:- ಚಿನ್ನಾಭರಣಗಳನ್ನು ಖರೀದಿಸುವ ಮುನ್ನ ಈ ಸಂಗತಿಗಳನ್ನು ತಿಳಿದುಕೊಂಡಿರಬೇಕು, ಇಲ್ಲದಿದ್ರೆ ಮೋಸ ಹೋಗೋದು ಗ್ಯಾರಂಟಿ.!

ಅಂತೆಯೇ 2024-2025 ಶೈಕ್ಷಣಿಕ ಸಾಲಿನ RTE ಸೀಟ್ ಗಾಗಿ ಅರ್ಜಿ ಸಲ್ಲಿಸಲು ಸರ್ಕಾರ ವೇಳಾಪಟ್ಟಿ ಬಿಡುಗಡೆಗೊಳಿಸಿದೆ. ಈ ಉಚಿತ ಶಿಕ್ಷಣ ಅನುಕೂಲತೆಯನ್ನು ಪಡೆಯಲು ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಆಯ್ಕೆ ಪ್ರಕ್ರಿಯೆ ಹೇಗೆ? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಿಕೊಡುತ್ತಿದ್ದೇವೆ.

ಅರ್ಹತೆಗಳು:-

* ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
* ಒಂದನೇ ತರಗತಿಗೆ ಪ್ರವೇಶಕ್ಕಾಗಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
* ವಿದ್ಯಾರ್ಥಿಗಳು 1/6/2016 ರಿಂದ 1/1/2018 ರ ಒಳಗಡೆ ಜನಿಸಿರಬೇಕು.
* ಕುಟುಂಬದ ಒಟ್ಟು ವಾರ್ಷಿಕ ಆದಾಯವು ರೂ.3.5 ಲಕ್ಷ ಮೀರಿರಬಾರದು.
* ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗಗಳಿಗೆ ಸೇರಿದ ಮಕ್ಕಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು:-

* ಮಗುವಿನ ಆಧಾರ್ ಕಾರ್ಡ್
* ಮಗುವಿನ ಜನನ ಪ್ರಮಾಣ ಪತ್ರ
* ಮಗುವಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಪೋಷಕರ ಆಧಾರ್ ಕಾರ್ಡ್

ಅರ್ಜಿಯನ್ನು ಸಲ್ಲಿಸುವ ವಿಧಾನ :-

* ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಉಚಿತವಾಗಿ ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
* ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :-

* ಗಣಕೀಕೃತ ವ್ಯವಸ್ಥೆಯನ್ನು ಬಳಸಿಕೊಂಡು ಲಾಟರಿ ಮೂಲಕ ಅರ್ಜಿದಾರರ ಹೆಸರನ್ನು ಆಯ್ಕೆ ಮಾಡಲಾಗುತ್ತದೆ.
* ನಂತರ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೀಟುಗಳ ಲಭ್ಯತೆಯನ್ನು ಆಧರಿಸಿದೆ ಮತ್ತು ಆಯ್ಕೆಮಾಡಿದ ವಿದ್ಯಾರ್ಥಿಗಳನ್ನು ಆ ಸಂಸ್ಥೆಗಳಿಗೆ ನಿಯೋಜಿಸಲಾಗುತ್ತದೆ.

RTE ತಾತ್ಕಾಳಿಕ ವೇಳಾಪಟ್ಟಿ:-

* 2024-25ನೇ ಸಾಲಿನ RTE ಪ್ರವೇಶಾತಿಗೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟಣೆ – 07 ಫೆಬ್ರವರಿ, 2024
* ಶಾಲೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವುದು – 23 ಫೆಬ್ರವರಿ, 2024
* ನೆರೆಹೊರೆ ಶಾಲೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ – 28 ಫೆಬ್ರವರಿ, 2024.

ಈ ಸುದ್ದಿ ಓದಿ:- ರೈತರಿಗೆ ಬರ ಪರಿಹಾರ ಹಣ ಜಮೆ.! ನಿಮ್ಮ ಬ್ಯಾಂಕ್‌ ಖಾತೆ ಪರೀಕ್ಷಿಸಿಕೊಳ್ಳಿ, ಹಣ ಬಾರದೇ ಇದ್ದರೆ ಹೀಗೆ ಮಾಡಿ.!

* 25% ಸೀಟುಗಳು ಲಭ್ಯವಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಹಾಗೂ ಕಚೇರಿ ಸೂಚನಾಲಕದಲ್ಲಿ ಪ್ರಕಟಿಸುವುದು – 04 ಮಾರ್ಚ್, 2024.
* ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಕೆ ಆರಂಭ – ಮಾರ್ಚ್ 20 & 21, 2024.
* ಅರ್ಜಿ ಸಲ್ಲಿಸಲು ಅವಕಾಶ – 22 ಮಾರ್ಚ್ 2024 ರಿಂದ 22 ಮಾರ್ಚ್ 2024.
* ಮೊದಲ ಸುತ್ತಿನ ಸೀಟು ಹಂಚಿಕೆ – 30 ಏಪ್ರಿಲ್, 2024.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now