ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, 9000 ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸಮಾಚಾರವೊಂದನ್ನು ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸಾವಿರಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತವೆ. SSLC ಉತ್ತೀರ್ಣರಾದವರಿಂದ ಹಿಡಿದು ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳವರೆಗೆ ಪ್ರತಿಯೊಬ್ಬರಿಗೂ ತಾವು ಕೂಡ ಯಾವುದಾದರೂ ಒಂದು ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವ ಇಚ್ಛೆ ಇರುತ್ತದೆ, ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿರುತ್ತಾರೆ.

ಈ ಸುದ್ದಿ ಓದಿ:- RTE Application 2024: ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಈ ದಿನಾಂಕದಿಂದಲೇ ಅರ್ಜಿ ಪ್ರಾರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ.!

ಈಗ ಈ ರೀತಿ ಆಕಾಂಕ್ಷಿಗಳಿಗೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಮತ್ತೊಂದು ಅವಕಾಶ ಸಿಗುತ್ತಿದೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗಾಗಿ (RRB Recruitment) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲ ದಾಖಲೆ ನೀಡಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಎಷ್ಟು ವೇತನ ಇರುತ್ತದೆ ಎನ್ನುವ ಸಂಪೂರ್ಣ ಮಾಹಿತಿ ಹೀಗಿದೆ ನೋಡಿ.

ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿ (Railway Recruitment Board, RRB)

ಹುದ್ದೆಯ ಹೆಸರು:- ಟೆಕ್ನಿಷಿಯನ್( Technician)
ಒಟ್ಟು ಹುದ್ದೆಗಳ ಸಂಖ್ಯೆ:- 9000
ಹುದ್ದೆಗಳ ವಿವರ:-
ಟೆಕ್ನಿಷಿಯನ್ ಗ್ರೇಡ್ – 1 ಸಿಗ್ನಲ್ – 1100
ಟೆಕ್ನಿಷಿಯನ್ ಗ್ರೇಡ್ 3 – 7900

ವೇತನ ಶ್ರೇಣಿ:-
ಟೆಕ್ನಿಷಿಯನ್ ಗ್ರೇಡ್ 1 ಹುದ್ದೆಗಳಿಗೆ ರೂ.29,200 ಆರಂಭಿಕವಾಗಿ
ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳಿಗೆ ರೂ.19,900 ಆರಂಭಿಕವಾಗಿ

ವಿದ್ಯಾರ್ಹತೆ:-

* SSLC ನಂತರ ITI ಶಿಕ್ಷಣ ಪಡೆದು, NCVT ಅಥವಾ SCTV ಪ್ರಮಾಣ ಪತ್ರ ಪಡೆದವರು ಅರ್ಜಿ ಸಲ್ಲಿಸಬಹುದು
* ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮ ಇನ್‌ ಇಂಜಿನಿಯರಿಂಗ್‌ ಪದವಿ ಗಳಿಸಿದವರು ಕೂಡ ಅರ್ಜಿ ಸಲ್ಲಿಸಬಹುದು
* ತಾಂತ್ರಿಕ ವಿಷಯಗಳಲ್ಲಿ ಪದವಿ ಅಥವಾ ಇಂಜಿನಿಯರಿಂಗ್‌ ಪದವಿ ಗಳಿಸಿದವರು ಕೂಡ ಅರ್ಜಿ ಸಲ್ಲಿಸಬಹುದು

ವಯೋಮಿತಿ:-

* ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 32 ವರ್ಷಗಳು

ವಯೋಮಿತಿ ಸಡಿಲಿಕೆ:-

* SC / ST ಅಭ್ಯರ್ಥಿಗಳಿಗೆ 5 ವರ್ಷಗಳು
* ಉಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು

ಅರ್ಜಿ ಶುಲ್ಕ:-

* ಆನ್ಲೈನ್ ಮೂಲಕ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕವೇ ಪಾವತಿ ಮಾಡಬೇಕು
* ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ – ರೂ.500
* SC /ST / ESM/ ಮಹಿಳಾ ಅಭ್ಯರ್ಥಿಗಳಿಗೆ – ರೂ.250

ಅರ್ಜಿ ಸಲ್ಲಿಸುವ ವಿಧಾನ:-

* ಮೊದಲಿಗೆ ರೈಲ್ವೆ ಮಂಡಳಿಯ ಅಧಿಕೃತ ವೆಬ್ಸೈಟ್ https://indianrailways.gov.in ಭೇಟಿ ನೀಡಿ
* ಅರ್ಜಿ ಲಿಂಕ್ ಕ್ಲಿಕ್ ಮಾಡಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ
* ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
* ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.
ತಪ್ಪದೇ ಅರ್ಜಿ ಶುಲ್ಕ ಪಾವತಿ ಮಾಡಿರುವುದಕ್ಕೆ ಇ-ರಶೀದಿ ಹಾಗೂ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.

ಆಯ್ಕೆ ಪ್ರಕ್ರಿಯೆ:-

* ಕಂಪ್ಯೂಟರ್ ಬೇಸ್ಡ್ ಟೆಸ್ಟ್
* PET
* PST
* ಮೆಡಿಕಲ್ ಟೆಸ್ಟ್
* ಸಂದರ್ಶನ
* ದಾಖಲೆಗಳ ಪರಿಶೀಲನೆ

ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 09 ಮಾರ್ಚ್, 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 08 ಏಪ್ರಿಲ್, 2024.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now