ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ (Ration card) ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರೆಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬವುದು? ಯಾವ ದಿನದಂದು ಅರ್ಜಿ ಹಾಕಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ನೂತನ ಸರಕಾರ ಆಡಳಿತಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದರಿಂದ ಪಡಿತರ ಚೀಟಿಗೆ ಹೆಚ್ಚು ಪ್ರಮುಖ್ಯತೆ ಬಂದಿದ್ದು ಇಲ್ಲಿಯವರೆಗೆ ಪಡಿತರ ಚೀಟಿ ಹೊಂದಲು ಅರ್ಹರಿದ್ದು ರೇಷನ್ ಕಾರ್ಡ ಪಡೆಯದವರು ಹೊಸದಾಗಿ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಪಡೆಯಲು ರಾಜ್ಯ ಸರಕಾರದಿಂದ ಅವಕಾಶ ಮಾಡಿಕೊಡಲಾಗಿದೆ.
ಹೌದು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್)ಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಈ ಸುದ್ದಿ ಓದಿ:- ಯುವನಿಧಿ ಯೋಜನೆ ಫಲಾನುಭವಿಗಳೇ ಇಲ್ಲಿ ಗಮನಿಸಿ… ನಿಮಗೆ ಹಣ ಬರಬೇಕಾದ್ರೆ ಪ್ರತಿ ತಿಂಗಳು ಈ ದಾಖಲೆ ಸಲ್ಲಿಸಬೇಕು.!
ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿ(ಎಪಿಎಲ್) ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಪರಿಶೀಲಿಸಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 57,651 ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್ಗಳನ್ನು ವಿತರಿಸಲಾಗಿದೆ. ಬಾಕಿ ಇರುವ ಉಳಿದ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ಜಂಟಿ/ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಹಿಂದಿನ ಸರಕಾರದ ಅವಧಿಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಚುನಾವಣೆ ಹಾಗೂ ಇನ್ನೀತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು;ಅವುಗಳನ್ನು ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅವುಗಳನ್ನು ಮಾ.31ರೊಳಗೆ ವಿಲೇವಾರಿ ಮಾಡಿ ಎಪ್ರಿಲ್ 1ರಿಂದ ಹೊಸ ಅರ್ಜಿಗಳ ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದರು.
ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸದಾಗಿ ಆದ್ಯತಾ ಪಡಿತರ ಚೀಟಿ ಕೋರಿ ತಹಶೀಲ್ದಾರ್ ಶಿಫಾರಸು ವರದಿ ಆಧರಿಸಿ ಬರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾರ್ಡ್ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಅರ್ಹ ಅರ್ಜಿದಾರರಿಗೆ ಕಾರ್ಡ್ ನೀಡಲು ಕ್ರಮ
ಉಡುಪಿ ಜಿಲ್ಲೆಯಲ್ಲಿ 2021 ಜನವರಿಯಿಂದ 2023ರ ಮಾರ್ಚ್ ವರೆಗೆ 13,104 ಆದ್ಯತಾ ಪಡಿತರ ಚೀಟಿ ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 10,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಕಾರ್ಡ್ ಒದಗಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದು ವಿವರಿಸಿದ ಸಚಿವ ಮುನಿಯಪ್ಪ, ಉಡುಪಿ ಜಿಲ್ಲೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 134 ಅರ್ಹ ಫಲಾನುಭವಿಗಳಿಗೆ ಆದ್ಯತಾ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದರು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
* ನೂತನ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿನೀಡಿ.
* ಮುಖಪುಟದಲ್ಲಿ ಕಾಣುವ ಇ ಸೇವಾಗಳು ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ನಂತರ ಇ ಪಡಿತರ ಚೀಟಿ ಆಪ್ಷನ್ ಕ್ಲಿಕ್ ಮಾಡಿ.
* ಹೊಸ ಪಡಿತರ ಚೀಟಿ ಎಂಬ ಆಪ್ಷನ್ ಕ್ಲಿಕ್ ಮಾಡಿ.
* ರೇಷನ್ ಕಾರ್ಡ್ ಗಾಗಿ ಹೊಸ ಅರ್ಜಿ ಎಂಬ ಅರ್ಜಿ ಓಪನ್ ಆಗುತ್ತದೆ ನಂತರ ಹೊಸ ಪಡಿತರ ಚೀಟಿ ವಿನಂತಿ ಎಂಬ ಆಪ್ಷನ್ ಕ್ಲಿಕ್ ಮಾಡಿ.
* ನಿಮ್ಮ ಕುಟುಂಬದ ಆದಾಯದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಆಪ್ಷನ್ ನಲ್ಲಿ ನಿಮ್ಮ ಕುಟುಂಬದ ಆದಾಯದ ಮೇಲೆ ಒಂದು ಆಪ್ಷನ್ ಆಯ್ಕೆ ಮಾಡಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ OTP ಯನ್ನು ಹಾಕಿ. ನಂತರ captcha ಸಂಖ್ಯೆಯನ್ನು ಭರ್ತಿ ಮಾಡಿ.
* ಫಿಂಗರ್ ಪ್ರಿಂಟ್ ಪರಿಶೀಲನೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆರಳಿನ ಗುರುತನ್ನು ಫಿಂಗರ್ ಪ್ರಿಂಟ್ ಮಶೀನ್ ಮೇಲೆ ಇಟ್ಟು ಧೃಢಿಕರಿಸಿ.
* ನಂತರ ನಿಮ್ಮ ಹೆಸರು ವಿಳಾಸ ಹಾಗೂ ನಿಮ್ಮ ಕುಟುಂಬದವರ ಹೆಸರು ಆಧಾರ್ ಸಂಖ್ಯೆ ವಯಸ್ಸು ಭಾವಚಿತ್ರ ಎಲ್ಲವನ್ನೂ ಅರ್ಜಿಯಲ್ಲಿ ತುಂಬಿ.
ಈ ಸುದ್ದಿ ಓದಿ:-HSRP Number Plate: ಹೆಚ್.ಎಸ್.ಆರ್.ಪಿ ನೋಂದಣಿಗೆ ಪಾವತಿಸಬೇಕಾದ ಶುಲ್ಕ ವಿವರದ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.!
* ನಂತರ ನಿಮ್ಮ ಸಮೀಪದ ಪಡಿತರ ವಿತರಣೆ ಹೆಸರು ಕೇಳಲಾಗುತ್ತದೆ. ಅದನ್ನು ಆಯ್ಕೆ ಮಾಡಿ. ನಂತರ ನಗರ ಅಥವಾ ಗ್ರಾಮೀಣ ಭಾಗ ಎಂಬ ಆಯ್ಕೆಗಳು ಇರುತ್ತವೆ. ನಿಮ್ಮ ಕ್ಷೇತ್ರವನ್ನು ಆಯ್ಕೆ ಮಾಡಿ.
* ನಿಮ್ಮ ಕುಟುಂಬದ ಯಜಮಾನಿ ಅಥವಾ ಯಜಮಾನ ಯಾರೂ ಎಂಬ ಮಾಹಿತಿಯನ್ನು ಭರ್ತಿ ಮಾಡಿ. ನಂತರ ನಿಮ್ಮಗೆ ಅರ್ಜಿ ಸ್ವೀಕರಿಸುವ ಬಗ್ಗೆ ಒಂದು ಸಂಖ್ಯೆ ಬರುತ್ತದೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಿ . ನೂತನ ರೇಷನ್ ಕಾರ್ಡ್ ನಿಮಗೆ ಸಿಗುವ ವರೆಗೆ ಈ ಸಂಖ್ಯೆ ಯ ಆಧಾರದ ಮೇಲೆ ಸರ್ಕಾರದ ಸೌಲಭ್ಯವನ್ನು ಪಡೆಯಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು
(1) ನಗರ ಪ್ರದೇಶದಲ್ಲಿರುವವರು ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
(2 )ಮನೆಯ ವಿದ್ಯುತ್ ಬಿಲ್/ಕರೆಂಟ್ ಬಿಲ್
(3) ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
(4) ಮೊಬೈಲ್ ನಂಬರ್
(5)ನಿವಾಸದ ಪೂರ್ಣ ವಿಳಾಸ , ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ಅದು ಐದು ವರ್ಷಕ್ಕಿಂತ ಒಳಗೆ ಇರುವಂತ ದಾಖಲೆಗಳನ್ನು ನೀಡಬೇಕಾಗುತ್ತದೆ.