ಗೃಹ ಜ್ಯೋತಿ ಯೋಜನೆ (Gruhajyothi Scheme) ಬಳಿಕ ವಿದ್ಯುತ್ ಕುರಿತಾಗಿ ಮತ್ತೊಂದು ಬಿಗ್ ಅಪ್ ಡೇಟ್ ಇದೆ. ಈ ಬಾರಿ ಕರ್ನಾಟಕ ಸರ್ಕಾರವು (Government) ರಾಜ್ಯದಲ್ಲಿರುವ ರೈತರಿಗೆ (for Farmers) ಅನುಕೂಲತೆ ಮಾಡಿಕೊಡುವ ಸಲುವಾಗಿ ಕ್ರಮ ಕೈಗೊಂಡಿದೆ.
ಅದೇನೆಂದರೆ ನಮ್ಮ ರಾಜ್ಯದಲ್ಲಿ 2008ರಿಂದ 2023ರ ಸೆ.22ರವರೆಗೆ ನೋಂದಣಿ ಆಗಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳ ಈ ಪೈಕಿ 40 ಸಾವಿರ ಪಂಪ್‌ಸೆಟ್‌ಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಕುಸುಮ್- ಬಿ ಯೋಜನೆ ಮೂಲಕ (Kusum b Scheme) ಸೌರ ವಿದ್ಯುತ್ ಸಂಪರ್ಕ ಕಲ್ಪಿಸಿ ಸಕ್ರಮಗೊಳಿಸಿ ಕೊಡಲು ಸರ್ಕಾರ ನಿರ್ಧರಿಸಿರುವುದಾಗಿ ಇಂಧನ ಸಚಿವರು (Power Minister) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾರ್ಚ್ 6, ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳ ರೈತರು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ್ದಾರೆ, ಇದರಲ್ಲಿ ಪಂಪ್‌ಸೆಟ್‌ಗಳು ವಿದ್ಯುತ್ ಮಾರ್ಗ ಜಾಲದಿಂದ 500 ಮೀಟರ್ ಒಳಗಿದ್ದರೆ, ಫೀಡರ್‌ನಿಂದ ವಿದ್ಯುತ್ ಸಂಪರ್ಕ ಮತ್ತು ಮೂಲಸೌಕರ್ಯ ಕಲ್ಪಿಸಲು ನಿರ್ಧರಿಸಲಾಗಿದೆ.
ಈ ಸುದ್ದಿ ಓದಿ:- ಸಿಲಿಂಡರ್ ಬೆಲೆ ಮತ್ತಷ್ಟು ಇಳಿಕೆ, ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್.!
500 ಮೀಟರ್‌ಗಿಂತ ದೂರವಿರುವ ಪಂಪ್‌ಸೆಟ್‌ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ನೀರಾವರಿಗೆ ನೀರಿನ ಜೊತೆ ವಿದ್ಯುತ್ ಸೌಕರ್ಯವೂ ಕೂಡ ಅಷ್ಟೇ ಮುಖ್ಯ. ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಅಭಾವ ಸೃಷ್ಟಿಸಬಹುದು ಹೀಗಾಗಿ ಸರ್ಕಾರ ನೀಡುತ್ತಿರುವ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು.
ಇದೇ ಕಾರಣಕ್ಕೆ ರೈತರಿಗಾಗಿ ಕೇಂದ್ರ ಸರ್ಕಾರವು ಪರಿಚಯಿಸಿರುವ ಕುಸುಮ್ – ಬಿ ಯೋಜನೆ ಅನುಷ್ಠಾನಕ್ಕೆ ಒತ್ತು ಕೊಟ್ಟಿದ್ದೇವೆ. ಸೌರ ವಿದ್ಯುತ್ ಚಾಲಿತ ಪಂಪ್‌ಸೆಟ್ ಅಳವಡಿಕೆಗೆ ಕೇಂದ್ರ ಸರಕಾರ ಕುಸುಮ್ ಯೋಜನೆಗೆ ಶೇ.30% ಸಹಾಯಧನ ನೀಡುತ್ತಿದೆ ರಾಜ್ಯ ಸರ್ಕಾರವು ಇದನ್ನು ಶೇ.20% ಹೆಚ್ಚಿಸಿದೆ ರೈತರು ಇವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ರವರು ಕೂಡ ಮಾತನಾಡಿ, ‘ರಾಜ್ಯದಲ್ಲಿ ಸದ್ಯ 34 ಲಕ್ಷ ಕೃಷಿ ಪಂಪ್‌ಸೆಟ್‌ಗಳಿವೆ, ಪ್ರತಿ ವರ್ಷ ಸುಮಾರು 1.20 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಹೊಸದಾಗಿ ಸೇರ್ಪಡೆಯಾಗುತ್ತಿವೆ, ನೀರಾವರಿ ಪಂಪ್‌ಸೆಟ್‌ಗಳ ದೈನಂದಿನ ವಿದ್ಯುತ್ ಬೇಡಿಕೆ ಸುಮಾರು 4,500 ಮೆಗಾ ವ್ಯಾಟ್ ಇದೆ.
ಈ ಸುದ್ದಿ ಓದಿ:-ಇದೊಂದು ಮಿಷನ್ ಇದ್ದರೆ ಸಾಕು ಕೇವಲ 2 ಗಂಟೆ ಕೆಲಸ ಮಾಡಿ 30 ಸಾವಿರ ಗಳಿಸಿ.!
ಈ ವರ್ಷ ವಿದ್ಯುತ್ ಸಂಪರ್ಕ ಸಕ್ರಮಗೊಳಿಸಲಿರುವ 40,000 ಪಂಪ್‌ಸೆಟ್‌ಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಇಟ್ಟುಕೊಂಡಿದ್ದೇವೆ. ಇದರಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉಳಿತಾಯವಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ ಎಂದಿದ್ದಾರೆ. ಇದರ ಅಂಗವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ಸೌರ ವಿದ್ಯುತ್ ಬಳಕೆ ಕುರಿತು ರೈತರಿಗೆ ಮಾಹಿತಿ ನೀಡಿ ಕುಸುಮ್ ಬಿ ಯೋಜನೆ ಕುರಿತು ಜಾಗೃತಿ ಮೂಡಿಸಲು.
ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಇದೇ ಶನಿವಾರ ದಂದು ರೈತ ಸೌರಶಕ್ತಿ ಮೇಳ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಜತೆಗೆ, ಬೆಸ್ಕಾಂ ವ್ಯಾಪ್ತಿಯಲ್ಲಿ ಕುಸುಮ್ ಸಿ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳ ಹೊಸ ಸಬ್‌ಸ್ಟೇಷನ್‌ಗಳಿಗೆ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದಾರೆ.
ಅಕ್ರಮ ವಿದ್ಯುತ್ ಸಂಪರ್ಕ ಸಕ್ರಮ ಮಾಡಿಕೊಳ್ಳಲು ಯೋಜನೆಗೆ ಅರ್ಜಿ ಸಲ್ಲಿಸಿರುವ ರೈತರು ಮಾತ್ರವಲ್ಲದೆ ಸೋಲಾರ್ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಆಸಕ್ತಿ ಇರುವ ರೈತರಿಗೂ ಅರ್ಜಿ ಸಲ್ಲಿಸಲು ಅನುಕೂಲತೆ ಮಾಡಿಕೊಡಲಾಗಿದೆ ಇದೇ ದಿನದಂದು ಹೊಸದಾಗಿ ವಿನ್ಯಾಸಗೊಳಿಸಲಾಗಿರುವ ಸೌರ ಮಿತ್ರ ಆನ್‌ಲೈನ್ ಪೋರ್ಟಲ್ ಬಿಡುಗಡೆಯಾಗಲಿದೆ ನಂತರ ರೈತರು ಅರ್ಜಿ ಸಲ್ಲಿಸಬಹುದು.