ದೇಶದಲ್ಲಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಕಡೆಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ (South East Central Railway Recruitment) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ ಎಲ್ಲಾ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದು.
ಅರ್ಜಿ ಸಲ್ಲಿಸುವುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಲೇಖನದಲ್ಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಮುಖ ಸಂಗತಿಗಳಾದ ಒಟ್ಟು ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ಕರ್ತವ್ಯ ಸ್ಥಳ, ಕೇಳಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಇತ್ಯಾದಿ ಸಂಗತಿಗಳ ಬಗ್ಗೆ ತಿಳಿಸುತ್ತಿದ್ದೇವೆ. ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ.! ಆಸಕ್ತರು ಈ ರೀತಿ ಅರ್ಜಿ ಸಲ್ಲಿಸಿ…
ನೇಮಕಾತಿ ಸಂಸ್ಥೆ:-
ಹುದ್ದೆ ಹೆಸರು:- ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ:- 733 ಹುದ್ದೆಗಳು
ಹುದ್ದೆಗಳ ವಿವರ:-
* ಕಾರ್ಪೆಂಟರ್
* ಡ್ರಾಪ್ಟ್ ಮನ್ (ಸಿವಿಲ್)
* ಇಲೆಕ್ಟ್ರಿಷಿಯನ್
* ಫಿಟ್ಟರ್
* ಮಶಿನಿಸ್ಟ್
* ಪೇಂಟರ್
* ಪ್ಲಂಬರ್
* ಮೆಕ್ (R.A.C),
* S.M.W
* ಸ್ಟೆನೋ (ಇಂಗ್ಲಿಷ್)
* ಸ್ಟೆನೋ (ಹಿಂದಿ)
* ಡೀಸೆಲ್ ಮೆಕ್ಯಾನಿಕ್
* ಟರ್ನರ್
* ವೆಲ್ಡರ್
* ವಯರ್ ಮನ್
* ಕೆಮಿಕಲ್ ಲ್ಯಾಬೋರೇಟರಿ ಅಸಿಸ್ಟಂಟ್
* ಡಿಜಿಟಲ್ ಪೊಟೋಗ್ರಾಫರ್
ಉದ್ಯೋಗ ಸ್ಥಳ:- ಭಾರತದೆಲ್ಲೆಡೆ…
ಶೈಕ್ಷಣಿಕ ವಿದ್ಯಾರ್ಹತೆ:-
* ಮಾನ್ಯತೆ ಪಡೆದ ಮಂಡಳಿಯಿಂದ SSLC ಉತ್ತೀರ್ಣರಾಗಿರಬೇಕು
* ಆಯಾ ಟ್ರೇಡ್ ನಲ್ಲಿ ITI ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಈ ಸುದ್ದಿ ಓದಿ:-ರೇಷನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್, ಇಂದಿನಿಂದ APL / BPL / AAY ಅರ್ಜಿ ಆಹ್ವಾನ, ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ನೋಡಿ.!
ವಯೋಮಿತಿ:-
* ಕನಿಷ್ಠ ವಯೋಮಿತಿ 15 ವರ್ಷಗಳು
* ಗರಿಷ್ಠ ವಯೋಮಿತಿ 24 ವರ್ಷಗಳು
ವಯೋಮಿತಿ ಸಡಿಲಿಕೆ:-
• SC / ST ಅಭ್ಯರ್ಥಿಗಳಿಗೆ 05 ವರ್ಷಗಳು
• OBC ಅಭ್ಯರ್ಥಿಗಳಿಗೆ 03 ವರ್ಷಗಳು
• ಮಾಜಿ ಸೈನಿಕ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
ಆನ್ಲೈನ್ ವಿಧಾನದ ಮೂಲಕವೇ ಅರ್ಜಿ ಸಲ್ಲಿಸಬೇಕು.
https://portal.mhrdnats.gov.in/boat/login/user_login.action ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು
* ಮೊದಲಿಗೆ ನೋಟಿಫಿಕೇಶನ್ ಓದಿಕೊಂಡು ಮಾನದಂಡಗಳನ್ನು ಪೂರೈಸುವಿರಾ ಎನ್ನುವುದನ್ನು ಅರ್ಥೈಸಿಕೊಳ್ಳಿ, ನಂತರ ಅರ್ಜಿ ಸಲ್ಲಿಸಲು ಮುಂದಿನ ಹಂತಕ್ಕೆ ತೆರಳಿ.
* ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಫಾರ್ಮೆಟ್ ಓಪನ್ ಆಗುತ್ತದೆ ಇದರಲ್ಲಿ ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಸೇರಿದಂತೆ ವೈಯಕ್ತಿಕ ವಿವರಗಳು ಇರುತ್ತವೆ, ಸರಿಯಾಗಿ ಭರ್ತಿ ಮಾಡಿ
* ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಆಪ್ಷನ್ ಇದ್ದರೆ ಮುಂದುವರೆಯಿರಿ ಅಥವಾ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಿ ಖಚಿತಪಡಿಸಿ
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಅರ್ಜಿ ಶುಲ್ಕ:-
ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಿರುವುದಿಲ್ಲ.
ಈ ಸುದ್ದಿ ಓದಿ:-1 ಏಪ್ರಿಲ್ 2024 ರಿಂದ LPG ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್, ಸರ್ಕಾರದಿಂದ ಜನಸಾಮಾನ್ಯರಿಗೆ 3 ಗ್ಯಾಸ್ ಸಿಲಿಂಡರ್ ಉಚಿತ.!
ಆಯ್ಕೆ ವಿಧಾನ:-
* ಅಭ್ಯರ್ಥಿಗಳು ನಿಗದಿ ಪಡಿಸಿರುವ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
* ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 12 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 12 ಏಪ್ರಿಲ್, 2024.