ರಾಜ್ಯದಾದ್ಯಂತ ಇರುವ ಎಲ್ಲ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ KPSC ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಇದಕ್ಕೆ ಸಂಬಂಧಪಟ್ಟ ಹಾಗೆ ಇಲಾಖೆ ವತಿಯಿಂದ ನೇಮಕಾತಿ ಮಾನದಂಡಗಳನ್ನು ಮತ್ತು ಹುದ್ದೆ ವಿವರಗಳನ್ನು ಒಳಗೊಂಡ ಅಧಿಸೂಚನೆ ಕೂಡ ಬಿಡುಗಡೆ ಆಗಿದೆ. ಇವುಗಳನ್ನು ಪೂರೈಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಎಲ್ಲಾ ಸ್ಪರ್ಧಾರ್ಥಿಗಳಿಗೂ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಈ ಲೇಖನದಲ್ಲಿರುವ ನೇಮಕಾತಿ ಕುರಿತಂತೆ ಇರುವ ಕೆಲ ಪ್ರಮುಖ ಸಂಗತಿಗಳ ಬಗ್ಗೆ ತಿಳಿಸುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಇಲಾಖೆ:- ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ.
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 112 ಹುದ್ದೆಗಳು
ಈ ಸುದ್ದಿ ಓದಿ:- 2006 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಗೂ ಗುಡ್ ನ್ಯೂಸ್. ಸರ್ಕಾರದವತಿಯಿಂದ ಸಿಗಲಿದೆ 1 ಲಕ್ಷ.!
ಹುದ್ದೆಗಳ ವಿವರ:-
* ಸಹಾಯಕ ನಿಯಂತ್ರಕರು – 58
* ಲೆಕ್ಕಪರಿಶೋಧನಾಧಿಕಾರಿ – 54
ಉದ್ಯೋಗ ಸ್ಥಳ:- ಕರ್ನಾಟಕ
ವೇತನ ಶ್ರೇಣಿ:-
* ಸಹಾಯಕ ನಿಯಂತ್ರಕರು – ರೂ.52,650 ರಿಂದ ರೂ.97,100
* ಲೆಕ್ಕಪರಿಶೋಧನಾಧಿಕಾರಿ – ರೂ.43,100 ರಿಂದ ರೂ.83,900
ಶೈಕ್ಷಣಿಕ ವಿದ್ಯಾರ್ಹತೆ:-
* ಆಯಾ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ
* ಸಂಬಂಧಪಟ್ಟ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿ:- ಟೆಂಟ್ ಹೌಸ್ ಮತ್ತು ಸಪ್ಲೈಯರ್ಸ್ ಬಿಸಿನೆಸ್ ಮಾಡಿ, ಯಾವುದೇ ಟೆನ್ಷನ್ ಇಲ್ಲದೆ ದಿನಕ್ಕೆ ರೂ.30,000 ಆದಾಯ ಪಡೆಯಿರಿ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* 2A / 2B / 3A / 3B ಅಭ್ಯರ್ಥಿಗಳಿಗೆ 03 ವರ್ಷಗಳು
* SC / ST / ಪ್ರವರ್ಗ – 1ರ ಅಭ್ಯರ್ಥಿಗಳಿಗೆ 05 ವರ್ಷಗಳು
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ UPI ಆಧಾರಿತ ಆಪ್ ಗಳ ಮೂಲಕ ಪಾವತಿಸಬಹುದು. ಅರ್ಜಿ ಶುಲ್ಕ ಪಾವತಿ ಯಶಸ್ವಿ ಆದಮೇಲೆ ತಪ್ಪದೆ ಇ-ರಸೀದಿ ಪಡೆದುಕೊಳ್ಳಬೇಕು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* 2A /.2B / 3A / 3B ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕರಿಗೆ ರೂ.50
* SC / ST / ಪ್ರವರ್ಗ – 1ರ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಈ ಸುದ್ದಿ ಓದಿ:- ಪೋಸ್ಟ್ ಆಫೀಸ್ ನಾ ಯೋಜನೆಯಲ್ಲಿ ಕೇವಲ 500 ಹೂಡಿಕೆ ಮಾಡಿ ಸಾಕು ನಲ್ಲಿ 47 ಲಕ್ಷ ಸಿಗುತ್ತೆ.!
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ವಿಧಾನದಲ್ಲಿಯೇ ಅರ್ಜಿ ಸಲ್ಲಿಸಬೇಕು
* KPSC Udyoga ತಂತ್ರಾಂಶದ ಮೂಲಕ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು
* ಅರ್ಜಿ ನಮೂನೆಯಲ್ಲಿ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಪೂರಕ ದಾಖಲೆಗಳ ಸಂಖ್ಯೆಗಳನ್ನು ಸರಿಯಾಗಿ ನಮೂದಿಸಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ಸಂದರ್ಶನ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 18 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 17 ಏಪ್ರಿಲ್, 2024
* ಪೂರ್ವಭಾವಿ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ) – 16 ಜೂನ್, 2024.