ನಮ್ಮ ಕನ್ನಡ ಚಿತ್ರರಂಗ ಎಂದೆಂದೂ ಕಂಡಿರದಂತಹ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಹೊರಟಿದೆ ನಮ್ಮ ನಿಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್ಕುಮಾರ್ ಅವರು ಮರಣೋತ್ತರದ ನಂತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ವಿಷಯವೂ ನಮ್ಮ ಕರ್ನಾಟಕ ಜನತೆಗೆ ಒಂದು ಹೆಮ್ಮೆಯ ವಿಷಯ ಅಪ್ಪು ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳು ಮತ್ತು ಇತರ ದೇಶಗಳಲ್ಲಿಯೂ ಸಹ ಸಾಕಷ್ಟು ಅಭಿಮಾನಿಗಳು ಇದ್ದಾರೆ. ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎನ್ನುವಂತಹ ದೃಷ್ಟಿಕೋನದಿಂದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ ಅವರಿಗೆ ಈ ಒಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ಘೋಷಣೆ ಮಾಡಿಲಾಗಿದೆ. ಪುನೀತ್ ರಾಜ್ಕುಮಾರ್ ಅವರು ಸಾಕಷ್ಟು ಜನರಿಗೆ ದಾರಿ ದೀಪವಾಗಿರುವುದು ಅಷ್ಟೇ ಅಲ್ಲದೆ ಸಾಕಷ್ಟು ಜನರಿಗೆ ಮಾರ್ಗದರ್ಶನ ಕೂಡ.
ಇವರು ಬದುಕಿದ್ದಂತಹ ಸಮಯದಲ್ಲಿ ಇವರು ಮಾಡಿರುವಂತಹ ಸಾಧನೆ ಯಾರಿಗೂ ಸಹ ತಿಳಿದಿರಲಿಲ್ಲ ಅಷ್ಟೊಂದು ಗೌಪ್ಯವಾಗಿ ಇವರು ತಮ್ಮ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದರು. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಈ ಕುರಿತು ಬೊಮ್ಮಾಯಿ ಅವರೇ ಖುದ್ದಾಗಿ ಟ್ವೀಟ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಮೇರುನಟ ದಿ. ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಪುನೀತ್ಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಪ್ರಕಟಿಸಲಾಯಿತು.
ಅವರ ಪರವಾಗಿ ಕುಟುಂಬದವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ. ಬಾಲ ನಟನಾಗಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಾಲಕನಾಗಿದ್ದಾಗಲೇ ಭಕ್ತ ಪ್ರಹ್ಲಾದ ರೀತಿಯ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಕರುನಾಡಿಗೆ ಹೆಮ್ಮೆ ತಂದರು. ಹೀರೋ ಆದ ಬಳಿಕವೂ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾ ಹೊರತುಪಡಿಸಿ ಹಲವು ಸಮಾಜಮುಖಿ ಕಾರ್ಯಗಳ ಮೂಲಕ ಅವರು ಜನಮನ ಗೆದ್ದರು. ಈ ಎಲ್ಲ ಸಾಧನೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯ ನಂತರ ಅವರು ನಟಿಸಿದ ಕೊನೆಯ ಸಿನಿಮಾ ಗಂಧದಗುಡಿ ಇದೇ ಅಕ್ಟೋಬರ್ 28 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ. ಅದರ ಬೆನ್ನಲ್ಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಆಗಲಿರುವುದು ವಿಶೇಷ.
ಈ ಎರಡು ವಿಶೇಷವಾದಂತಹ ದಿನವನ್ನು ಹಬ್ಬದ ರೀತಿಯಲ್ಲಿ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು ಸಂಭ್ರಮಿಸಲಿದ್ದಾರೆ. ಇನ್ನು ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಬಸವರಾಜು ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಆಯೋಜಿಸಿಕೊಳ್ಳಲಾಗಿದೆ ಈ ಒಂದು ಕಾರ್ಯಕ್ರಮಕ್ಕೆ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಹಾಗೆ ಕುಟುಂಬಸ್ಥರು ಕನ್ನಡ ಚಿತ್ರರಂಗದ ಹಲವಾರು ಗಣ್ಯ ವ್ಯಕ್ತಿಗಳು ಹಾಗೆಯೇ ರಾಜಕೀಯಕ್ಕೆ ಸಂಬಂಧಪಟ್ಟ ವ್ಯಕ್ತಿಗಳು, ಸಾಹಿತಿಗಳು ಇನ್ನಿತರ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದಾರೆ. ಈ ಪ್ರಶಸ್ತಿಯನ್ನು ಪುನೀತ್ ರಾಜ್ಕುಮಾರ್ ಅವರ ಪರವಾಗಿ ಅವರ ಕುಟುಂಬಸ್ಥರು ತೆಗೆದುಕೊಳ್ಳಲಿದ್ದಾರೆ. ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೆಯೇ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಅವರನ್ನು ಕರೆಸಬೇಕು ಎನ್ನುವಂತಹ ಚರ್ಚೆಗಳು ನಡೆಯುತ್ತಿದೆ.