ಸರ್ವೆ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರವು ನಿರ್ಧರಿಸಿದ್ದು, ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಅಧಿಸೂಚನೆಯನ್ನು ಕೂಡ ಹೊರಡಿಸಿದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಮುಖ ಅಂಶಗಳನ್ನು ಓದಿ ಅರ್ಥೈಸಿಕೊಂಡು ಆ ಪ್ರಕಾರವಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಬೇಕು. ಅಂತಹ ಅರ್ಜಿಗಳು ಮಾತ್ರ ಮಾನ್ಯವಾಗುತ್ತವೆ.
ಅದಕ್ಕಾಗಿ ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಅಂಕಣದಲ್ಲಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಮತ್ತು ಪ್ರಮುಖ ದಿನಾಂಕಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ತಿಳಿದುಕೊಳ್ಳಿ ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಳ್ಳಿ.
ಇಲಾಖೆ:- ಸರ್ವೆ ಆಫ್ ಇಂಡಿಯಾ.
ಹುದ್ದೆಗಳ ಸಂಖ್ಯೆ:- 21
ಹುದ್ದೆಗಳ ವಿವರ:-
● ಮೋಟಾರ್ ಡ್ರೈವರ್
● ಮೆಕ್ಯಾನಿಕ್
ವೇತನ ಶ್ರೇಣಿ:-
ಸರ್ವೆ ಆಫ್ ಇಂಡಿಯಾ ಹೊರಡಿಸಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ರಿಂದ 63,200 ವೇತನ ಸಿಗಲಿದೆ.
ಶೈಕ್ಷಣಿಕ ವಿದ್ಯಾರ್ಹತೆ:-
● ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ಅದಕ್ಕೆ ತತ್ಸಮಾನ ಪರೀಕ್ಷೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
● ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ವಯೋಮಿತಿ:-
● ಕನಿಷ್ಠ 18 ವರ್ಷಗಳು.
● ಗರಿಷ್ಠ 27 ವರ್ಷಗಳು.
ವಯೋಮಾನ ಸಡಿಲಿಕೆ:-
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು.
● OBC ಅಭ್ಯರ್ಥಿಗಳಿಗೆ 3 ವರ್ಷಗಳು.
ಅರ್ಜಿ ಶುಲ್ಕ:-
ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇಲ್ಲ.
ಆಯ್ಕೆ ವಿಧಾನ:-
● ಪ್ರಾಕ್ಟಿಕಲ್ ಟೆಸ್ಟ್
● ಸ್ಕಿಲ್ ಟೆಸ್ಟ್
● ಡ್ರೈವಿಂಗ್ ಟೆಸ್ಟ್
● ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸರ್ವೆ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಬೇಕು.
● ಅರ್ಜಿ ಫಾರಂ ಅಲ್ಲಿ ಸಂಬಂಧ ಪಟ್ಟ ವಿವರಗಳನ್ನು ಭರ್ತಿ ಮಾಡಿ ಅಧಿಸೂಚನೆಯಲ್ಲಿ ಕೇಳಲಾದ ಎಲ್ಲಾ ದಾಖಲೆಗಳ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಸಲ್ಲಿಕೆ ಪೂರ್ತಿಗೊಂಡ ಬಳಿಕ ಸ್ವೀಕೃತಿ ಪತ್ರವನ್ನು ಭವಿಷ್ಯದ ಬೆಳಕಿಗಾಗಿ ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಬೇಕು.
ಕೇಳಲಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಇನ್ಯಾವುದೇ ಪ್ರಮುಖ ದಾಖಲೆ ಪ್ರತಿಗಳು.
ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ:- 24 ಏಪ್ರಿಲ್, 2023.
● ಅರ್ಜಿ ಸಲ್ಲಿಸುವಿಕೆ ಕೊನೆ ದಿನಾಂಕ:- 31 ಮೇ, 2023.