ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಪದವಿ ಪೂರ್ತಿಗೊಳಿಸಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಾಣಿಜ್ಯ ತೆರಿಗೆ ಇಲಾಖೆಯ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (Commercial Tax Inspector) ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ಮತ್ತು ಇನ್ನಿತರ ಅರ್ಹತ ಮಾನದಂಡಗಳ ಬಗ್ಗೆ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಬಗ್ಗೆ ನೋಟಿಫಿಕೇಶನ್ (Recruitment notification) ನಲ್ಲಿ ತಿಳಿಸಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ನಾವು ಸಹ ಈ ಅಂಕಣದಲ್ಲಿರುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿಸುತ್ತಿದ್ದೇವೆ.
ಇಲಾಖೆ ಹೆಸರು:- ವಾಣಿಜ್ಯ ತೆರಿಗೆ ಇಲಾಖೆ
ಹುದ್ದೆಯ ಹೆಸರು:- ವಾಣಿಜ್ಯ ತೆರಿಗೆ ಪರಿವೀಕ್ಷಕರು
ಒಟ್ಟು ಹುದ್ದೆಗಳ ಸಂಖ್ಯೆ:- 230
ವೇತನ ಶ್ರೇಣಿ:-
ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 33,450ರೂ. ರಿಂದ 62,600ರೂ. ಸಿಗುತ್ತದೆ.
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಹತಾ ಷರತ್ತುಗಳು:-
● ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು.
● ಪದವಿಯ ಮೂರು ವರ್ಷಗಳಲ್ಲಿ ಯಾವುದಾದರೂ ಒಂದು ಸೆಮಿಸ್ಟರ್ ನಲ್ಲಾದರೂ ಕಾಮರ್ಸ್ ಅಥವಾ ಗಣಿತ ಅಥವಾ ಅರ್ಥಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರಬೇಕು.
● ಇನ್ನುಳಿದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಇರುವ ಎಲ್ಲಾ ಅರ್ಹತಾ ಷರತ್ತುಗಳು ಕೂಡ ಅನ್ವಯಿಸುತ್ತವೆ.
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಸಾಮಾನ್ಯ ವರ್ಗದವರಿಗೆ 35 ವರ್ಷಗಳು
● OBC ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ 38 ವರ್ಷಗಳು
● ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ – 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು
● ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600ರೂ.
● OBC ಅಭ್ಯರ್ಥಿಗಳಿಗೆ 300ರೂ.
● ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50ರೂ.
● ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಗೂ ಪ್ರವರ್ಗ – 1 ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕವಿರುವುದಿಲ್ಲ.
● ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, UPI ಪೇಮೆಂಟ್ ಈ ರೀತಿ ಯಾವುದೇ ಆನ್ ಲೈನ್ ವಿಧಾನದ ಮೂಲಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸುವ ವಿಧಾನ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮೊದಲಿಗೆ ನೋಟಿಫಿಕೇಶನ್ ಓದಿ ಅರ್ಥೈಸಿಕೊಳ್ಳಬೇಕು
● ಎಲ್ಲಾ ಅರ್ಹತಮಾನಗಳನ್ನು ಪೂರೈಸುವ ಅಭ್ಯರ್ಥಿಗಳು KPSC ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಟ್ಟು ನೇರವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
● ಅರ್ಜಿ ಫಾರಂ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ, ಶುಲ್ಕ ಪಾವತಿಸಿದ ನಂತರ ಅರ್ಜಿ ಸಲ್ಲಿಕೆ ಪೂರ್ತಿಯಾಗುತ್ತದೆ.
● ಅರ್ಜಿ ಸಲ್ಲಿಕೆಯಾದ ಬಳಿಕ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿಯನ್ನು ಮತ್ತು ಪಾವತಿ ಮಾಡಿರುವ ಇ-ರಶೀದಿಯನ್ನು ಪಡೆದುಕೊಳ್ಳಬೇಕು.
ಗೃಹಲಕ್ಷ್ಮಿ ಯೋಜನೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!
ವೆಬ್ಸೈಟ್ ವಿಳಾಸ ಮತ್ತು ಸಹಾಯವಾಣಿ ಸಂಖ್ಯೆ:-
https://kpsconline.karnataka.gov.in
080 – 30574957, 30474901
ಆಯ್ಕೆ ವಿಧಾನ:-
● ಸ್ಪರ್ಧಾತ್ಮಕ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 01.09.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30.09.2023
● ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ – 04.11.2023
● ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ – 05.11.2023