ಕರ್ನಾಟಕ ನೊಂದಾಯಿತ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ (Karbwwb) ನೋಂದಾಯಿಸಿಕೊಂಡು ಲೇಬರ್ ಕಾರ್ಡ್ (labour card) ಪಡೆದಿರುವಂತಹ ಕಾರ್ಮಿಕರ ಮಕ್ಕಳಿಗೆ ಸರ್ಕಾರದ ವತಿಯಿಂದ ಭರ್ಜರಿ ಗುಡ್ ನ್ಯೂಸ್ ಇದೆ. ಈಗಾಗಲೇ ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಸರ್ಕಾರದ ವತಿಯಿಂದ ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ.
ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಮಾತ್ರವಲ್ಲದೆ ಅವರ ಕುಟುಂಬಕ್ಕೂ ಕೂಡ ಸರ್ಕಾರದ ವತಿಯಿಂದ ಅನೇಕ ಸೌಲಭ್ಯಗಳ ನೆರವು ಸಿಗುತ್ತಿದೆ. ಲೇಬರ್ ಕಾರ್ಡ್ ಪಡೆದಿದ್ದರೆ ಅವರಿಗೆ ಆರೋಗ್ಯ ವಿಮೆ, ಉಚಿತ ಪ್ರಯಾಣಕ್ಕೆ ಅವಕಾಶ, ಉಚಿತ ಟೂಲ್ ಕಿಟ್, ಹೆರಿಗೆ ಸೌಲಭ್ಯ, ಇತ್ಯಾದಿ ಹಾಗೂ ಕಾರ್ಮಿಕರ ಮಕ್ಕಳಿಗೂ ಕೂಡ ವಿವಾಹ ಪ್ರೋತ್ಸಾಹಧನ, ವಿದ್ಯಾರ್ಥಿ ವೇತನ, ಶಾಲಾ ಕಿಟ್, ಉಚಿತ ಟ್ಯಾಬ್ ಮತ್ತು ಉಚಿತ ಲ್ಯಾಪ್ಟಾಪ್ ಗಳ ಅನುಕೂಲತೆ ಕೂಡ ಸಿಗುತ್ತಿದೆ.
ಈಗಲೇ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಿಂದ 2023-24ನೇ ಸಾಲಿನಲ್ಲಿ PUC ಇಂದ ಪದವಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ (free Laptop Scheme) ಮಾಡಲು ಕೆಲವು ತಿಂಗಳ ಹಿಂದಷ್ಟೇ ಅರ್ಜಿ ಆಹ್ವಾನಿಸಲಾಗಿತ್ತು.
ಆಗ ಅರ್ಜಿ ಹಾಕಿ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಂಡಿದ್ದವರಿಗೆ ಅವರು ಹಿಂದಿನ ವರ್ಷಗಳಲ್ಲಿ ಪಡೆದಿದ್ದ ಅಂಕಗಳ ಆಧಾರದ ಮೇಲೆ ಜೇಷ್ಠತಾಪಟ್ಟಿ ತಯಾರಿಸಿ ಆಯ್ದ ಫಲಾನುಭವಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗಿತ್ತು. ಆಗ ವಂಚಿತರಾಗಿದ್ದ ಅನೇಕರಿಗೆ ಸರ್ಕಾರ ಮತ್ತೊಮ್ಮೆ ಅವಕಾಶ ನೀಡುತ್ತಿದೆ ಇದಕ್ಕಾಗಿ ಪತ್ರಿಕ ಪ್ರಕಟಣೆಯನ್ನು ಕೂಡ ಹೊರಡಿಸಿದ್ದು ದಿನಪತ್ರಿಕೆಗಳಲ್ಲಿ ಈ ಕುರಿತು ವರದಿ ಆಗಿದೆ.
ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ಆದರೆ ಈ ಬಾರಿ 2023-24ನೇ ಸಾಲಿನಲ್ಲಿ ಮತ್ತು ದ್ವಿತೀಯ PUC ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಉಪ ವಿಭಾಗದ ಕಾರ್ಮಿಕಾಧಿಕಾರಿ ಶ್ರೀಹರಿ ದೇಶಪಾಂಡೆ ಅವರು ತಿಳಿಸಿದ್ದಾರೆ.
ಇದರಲ್ಲಿ ಮತ್ತೊಂದು ಮುಖ್ಯ ಸೂಚನೆ ಏನೆಂದರೆ, ಈಗ ಸದ್ಯಕ್ಕೆ ಯಾದಗಿರಿ ಜಿಲ್ಲೆಯ (Yadagiri) ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 15 ರವರೆಗೆ ಸೂಕ್ತ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಉಳಿದ ಜಿಲ್ಲೆಯ ವಿದ್ಯಾರ್ಥಿಗಳು ಒಮ್ಮೆ ಕಾರ್ಮಿಕ ಇಲಾಖೆ ಕಛೇರಿಗೆ ಭೇಟಿ ಕೊಟ್ಟರೆ ಈ ಕುರಿತು ಮಾಹಿತಿ ತಿಳಿಯುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
● ಆಫ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
● ಕಾರ್ಮಿಕ ಅಧಿಕಾರಿ, ಯಾದಗಿರಿ ಉಪ ವಿಭಾಗ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಬೇಕು.
● ಅರ್ಜಿ ಸಲ್ಲಿಸಲು ಸೂಚಿಸುತ್ತಿರುವ ಎಲ್ಲಾ ದಾಖಲೆಗಳ ಪ್ರತಿಗಳನ್ನು ಕೂಡ ಲಗ್ಗತ್ತಿಸಬೇಕು.
ಬೇಕಾಗುವ ದಾಖಲೆಗಳು:-
● ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿ
● ಕಾರ್ಮಿಕರ ಮತ್ತು ವಿದ್ಯಾರ್ಥಿಯ ಆಧಾರ್ ಕಾರ್ಡ್
● ರೇಷನ್ ಕಾರ್ಡ್
● ವಿದ್ಯಾರ್ಥಿಯು 2023-24 ಸಾಲಿನಲ್ಲಿ PUC ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ
● ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ
ಸಹಾಯವಾಣಿ ಸಂಖ್ಯೆ:- 08473 – 253727