ಕೃಷಿ ಚಟುವಟಿಗಾಗಿ ಸ್ವಂತ ಭೂಮಿ ಹೊಂದಿರದ ಹಳ್ಳಿಗಳಲ್ಲಿ ವಾಸ ಮಾಡುವ ರೈತನು ಬೇರೆ ದಾರಿ ಇಲ್ಲದೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿರುತ್ತಾನೆ. ಹಾಗೆಯೇ ನಿರಾಶ್ರಿತರು ಸಹಾ ಸೂರಿಗಾಗಿ ಸರ್ಕಾರಿ ಜಾಗಗಳಲ್ಲಿ ಮನೆ ಅಥವಾ ಶೆಡ್ ನಿರ್ಮಿಸಿಕೊಳ್ಳುತ್ತಾರೆ.
ತಮ್ಮ ಜೀವನ ನಿರ್ವಹಣೆಗಾಗಿ ಇವರು ಈ ರೀತಿ ಸರ್ಕಾರದ ಆಸ್ತಿಯನ್ನು ಅವಲಂಬಿಸಿರುವುದರಿಂದ ಒಮ್ಮೆ ಸರ್ಕಾರ ಕೂಡ ಇವುಗಳ ಅಧಿಕಾರವನ್ನು ಸಟಪೂರ್ಣವಾಗಿ ಅವರಿಗೆ ಬಿಟ್ಟುಕೊಡುವ ನಿರ್ಧಾರಕ್ಕೆ ಬರುತ್ತದೆ. ಈ ರೀತಿ ಸರ್ಕಾರಿ ಆಸ್ತಿಗಳಲ್ಲಿರುವವರಿಗೆ ಅವರ ಹೆಸರಿಗೆ ದಾಖಲೆಯಾಗದ ಕಾರಣ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಾರೆ ಹಾಗಾಗಿ ಸರ್ಕಾರವು ಈ ರೀತಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳುವುದಕ್ಕೆ ಅನುಮತಿ ನೀಡುತ್ತದೆ.
ರೈತರಿಗೆ ಗುಡ್ ನ್ಯೂಸ್ ಇನ್ಮುಂದೆ ಹಗಲಿನಲ್ಲಿ ವಿದ್ಯುತ್ ನೀಡಲು ಹೊಸ ಯೋಜನೆ ಜಾರಿ.!
ರಾಜ್ಯದಾದ್ಯಂತ ಈ ರೀತಿ ನಿರೀಕ್ಷೆಯಲ್ಲಿರುವವರಿಗೆ ಕಂದಾಯ ಇಲಾಖೆಯಿಂದ ಸಿಹಿಸುದ್ದಿ ಇದೆ ವಿಕಾಸ ಸೌಧದಲ್ಲಿ ಸೋಮವಾರ ಕಂದಾಯ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಯಿತು ಆ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೂ ಪಾಲ್ಗೊಂಡಿದ್ದರು.
ಈ ವೇಳೆ ವಿಲೇವಾರಿಯಾಗದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಮಾತನಾಡಿ ಗಮನ ಸೆಳೆದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ನಮೂನೆ 50, ನಮೂನೆ 53, ನಮೂನೆ 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ಈ ಅರ್ಜಿಗಳು ಸರಿಯಾದ ರೀತಿಯಲ್ಲಿ ವಿಲೇವಾರಿಯಾಗುತ್ತಿಲ್ಲ. ಈ ಕಾರಣ ರೈತರು ಪ್ರತಿ ದಿನ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ, ಈ ರೀತಿ ಆಗಬಾರದು. ಹೀಗಾಗಿ ಈ ಎಲ್ಲಾ ಅರ್ಜಿಗಳನ್ನು ಮುಂದಿನ 6 ತಿಂಗಳೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಶೀಘ್ರದಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಕ್ಕೂ ಒಳಗಾಗಬಾರದು. ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ನಡೆದು ಕೊಳ್ಳಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ಮಾತ್ರ ಇದರ ಪ್ರಯೋಜನ ಸಿಗುವಂತೆ ಎಚ್ಚರಿಕೆ ವಹಿಸಬೇಕು.
ಆಹಾರ ಇಲಾಖೆಯಿಂದ ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.!
ರಾಜ್ಯದ ಜನ ಸಾಕಷ್ಟು ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ, ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎನ್ನುವ ಬುದ್ದಿ ಮಾತು ಹೇಳಿದರು. ಅರ್ಜಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿದೆ, ಕೃಷಿಯೇತರ ಚಟುವಟಿಕೆಗೆ ಅಕ್ರಮವಾಗಿ ಈ ರೀತಿ ಸರ್ಕಾರಿ ಜಾಗ ವಶಪಡಿಸಿಕೊಳ್ಳುವಂತಿಲ್ಲ.
ಇದಕ್ಕೆ ಅನುಮೋದನೆ ನೀಡುವ ಅಧಿಕಾರಿಗಳು ಇದರ ಬಗ್ಗೆ ನಿಗಾ ವಹಿಸಬೇಕು ಆದರೆ ಎಲ್ಲಾ ಪ್ರದೇಶಗಳಿಗೂ ಜಿಲ್ಲಾಧಿಕಾರಿಗಳೇ ನೇರವಾಗಿ ಬೇಟಿ ಕೊಡಲು ಆಗದ ಕಾರಣ ಶೀಘ್ರದಲ್ಲೇ ಇದಕ್ಕೆ ಪೂರಕವಾಗುವ ತಂತ್ರಾಂಶ ಸಿದ್ಧವಾಗಲಿದೆ. ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಿರಲಿದೆ.
ಆಹಾರ ಇಲಾಖೆಯಿಂದ ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.!
ಈ ಆ್ಯಪ್ ಸಹಾಯದೊಂದಿಗೆ ಅಧಿಕಾರಿಗಳು ಬಹಳ ಬೇಗ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು ಎಂದು ಮಾಹಿತಿ ಹಂಚಿಕೊಂಡರು. ಸಚಿವರ ಮಾತಿನ ಅನುಸಾರ ಹೇಳುವುದಾದರೆ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ ಅವರವರ ಹೆಸರಿನಲ್ಲಿ ದಾಖಲೆ ಸಿಗಲಿದೆ.