ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ, PUC ಆಗಿದ್ದರೂ ಸಾಕು ಅರ್ಜಿ ಸಲ್ಲಿಸಿ ವೇತನ ₹81,100/-

 

WhatsApp Group Join Now
Telegram Group Join Now

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಎಲ್ಲಾ ಆಕಾಂಕ್ಷಿಗಳಿಗೂ ಕೂಡ ಒಂದು ಹೊಸ ಅಪ್ಡೇಟ್ ಇದೆ. ಅದರಲ್ಲೂ ಪೊಲೀಸ್ ಹುದ್ದೆ ಹೊಂದಬೇಕು ಎಂದುಕೊಂಡಿರುವವರಿಗೆ ಇದು ಸದವಕಾಶ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ತನ್ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಇದಕ್ಕಾಗಿ ಅಧಿಸೂಚನೆ ಕೂಡ ಹೊರಡಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಕೇಳಿರುವ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷೆಗಳನ್ನು ಎದುರಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು.

ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಪ್ರಕಟಣೆಯಲ್ಲಿರುವ ಪ್ರಮುಖ ಅಂಶಗಳಾದ ಹುದ್ದೆಗಳ ವಿವರ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.

ಉದ್ಯೋಗ ಸಂಸ್ಥೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF).

ಹುದ್ದೆ:- ಪೊಲೀಸ್ ಕಾನ್ಸ್ಟೇಬಲ್
ಒಟ್ಟು ಹುದ್ದೆಗಳ ಸಂಖ್ಯೆ:- 215
ಉದ್ಯೋಗ ಸ್ಥಳ:- ಭಾರತದಾದ್ಯಂತ…

ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,500 ರಿಂದ 81,100 ವೇತನ ಮತ್ತು ಕೆಲ ವಿಶೇಷ ಸವಲತ್ತುಗಳು ಸಿಗಲಿದೆ.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಮಾನದಂಡಗಳು:-

● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
● ಅಭ್ಯರ್ಥಿಗಳು ಕ್ರೀಡೆ ಅಥವಾ ಅಥ್ಲೆಟಿಕ್ಸ್ ನಲ್ಲಿ ಗುರುತಿಸಿಕೊಂಡು ರಾಜ್ಯ ಅಥವಾ ರಾಷ್ಟ್ರ ಅಥವಾ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿರಬೇಕು.

● ಪುರುಷ ಅಭ್ಯರ್ಥಿಗಳು 167cm ಎತ್ತರ ಹೊಂದಿರಬೇಕು, ಇದೆ ಅಳತೆ 81-86cm ಇರಬೇಕು.
● ಮಹಿಳಾ ಅಭ್ಯರ್ಥಿಗಳು ಎತ್ತರ 153 cm ಇರಬೇಕು.
● ಭಾರತದ ನಾಗರಿಕರಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ವಯೋಮಿತಿ:-
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 23 ವರ್ಷಗಳು

ವಯೋಮಿತಿ ಸಡಿಲಿಕೆ:-
● OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳು

ಅರ್ಜಿ ಶುಲ್ಕ:-
● SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
● ಉಳಿದ ಅಭ್ಯರ್ಥಿಗಳಿಗೆ 100ರೂ.

ಆಯ್ಕೆ ವಿಧಾನ:-

● ಪ್ರಾಯೋಗಿಕ ಪರೀಕ್ಷೆ
● ಪ್ರಾವೀಣ್ಯತೆ ಪರೀಕ್ಷೆ
● ದೇಹದಾಢ್ಯತೆ ಪರೀಕ್ಷೆ
● ಮೆಡಿಕಲ್ ಟೆಸ್ಟ್
● ದಾಖಲೆಗಳ ಪರಿಶೀಲನೆ
● ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:-

● ಈ ಮೇಲೆ ತಿಳಿಸಿದ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನೇರವಾಗಿ cisf.gov.in ಗೆ ಭೇಟಿ ಕೊಡಿ.
● ಅರ್ಜಿ ಸಲ್ಲಿಸಲು ಲಿಂಕ್ ಇರುತ್ತದೆ ಆ ಲಿಂಕ್ ಕ್ಲಿಕ್ ಮಾಡಿ ಕೇಳಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಸಂಬಂಧಪಟ್ಟ ಪೂರಕ ದಾಖಾಲೆಗಳ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
● ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾದವರು ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಿ ತಪ್ಪದೇ ಇ-ರಸೀದಿ ಪಡೆದುಕೊಂಡು ಅದರ ವಿವರವನ್ನು ಫಿಲ್ ಮಾಡಿ.
● ಕೊನೆಯಲ್ಲಿ ಅರ್ಜಿ ಸಲ್ಲಿಕೆ ಪೂರೈಕೆಯಾದ ಬಳಿಕ ಅರ್ಜಿ ಸ್ವೀಕೃತಿ ಪತ್ರವನ್ನು ತಪ್ಪದೇ ಪಡೆದುಕೊಳ್ಳಿ.

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 30.10.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28.11.2023.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now