ಪ್ರೇರಣಾ ಸಾಲ ಯೋಜನೆ ಮಹಿಳೆಯರಿಗೆ ಸಿಗಲಿದೆ 25,000 ಸಾಲ ಮತ್ತು ಸಬ್ಸಿಡಿ, ಇಲ್ಲಿದೆ ನೋಡಿ ಪೂರ್ತಿ ಮಾಹಿತಿ.!

ಮಹಿಳೆಯರು ಸಣ್ಣ ಉಳಿತಾಯ ಮಾಡಲು ಮತ್ತು ತಮ್ಮ ಆರ್ಥಿಕ ಭದ್ರತೆ ಕಾಪಾಡಿಕೊಳ್ಳಲು ಸ್ವಸಹಾಯ ಸಂಘಗಳನ್ನು ರಚಿಸಿಕೊಳ್ಳುತ್ತಾರೆ. ಈ ರೀತಿ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗುವ ಸ್ವಸಹಾಯ ಗುಂಪುಗಳಿಗೆ ಸರ್ಕಾರದಿಂದಲೂ ಕೂಡ ಸಹಾಯಧನ ಹಾಗೂ ಸಬ್ಸಿಡಿ ರೂಪದ ಸಾಲ ಸೌಲಭ್ಯ ಸಿಗುತ್ತದೆ.

WhatsApp Group Join Now
Telegram Group Join Now

ನೋಂದಣಿ ಮಾಡಿಕೊಂಡಿರುವ ಸ್ವಸಹಾಯ ಗುಂಪುಗಳು ಅರ್ಜಿ ಸಲ್ಲಿಸಿ ಸರ್ಕಾರದಿಂದ ಈ ಪ್ರಯೋಜನ ಪಡೆಯಬಹುದು. ಅಂತೆಯೇ ಪ್ರಸಕ್ತ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವರ್ಗಗಳ ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ಪ್ರೇರಣ ಸಾಲ ಯೋಜನೆ (Prerana Micro Credit Scheme 2023) ಎನ್ನುವ ಮೈಕ್ರೋ ಕ್ರೆಡಿಟ್ ನೀಡಲು ಮುಂದಾಗಿದೆ.

ಈ ಸಾಲ ಯೋಜನೆ ಕುರಿತ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲ ದಾಖಲೆಗಳು ಬೇಕು? ಎಷ್ಟು ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ ಏನು? ಎನ್ನುವುದರ ಪೂರ್ತಿ ಮಾಹಿತಿಯನ್ನು ತಿಳಿದುಕೊಳ್ಳಲು ಅಂಕಣವನ್ನು ಕೊನೆಯವರೆಗೂ ಓದಿ ಮತ್ತು ಈ ಉಪಯುಕ್ತ ಮಾಹಿತಿಯನ್ನು ತಪ್ಪದೆ ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.

ಪ್ರೇರಣೆ ಯೋಜನೆ 2023 ಅರ್ಜಿ ಸಲ್ಲಿಸಲು ಅರ್ಹತೆಗಳು:-

* ಸ್ವಸಹಾಯ ಗುಂಪಿನ ಎಲ್ಲಾ ಮಹಿಳಾ ಸದಸ್ಯರು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
* ಕನಿಷ್ಠ 10 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ನೋಂದಾಯಿತ ಸ್ವಸಹಾಯ ಸಂಘಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಈ ಕೆಳಗಿನ ನಿಗಮಗಳ ವ್ಯಾಪ್ತಿಗೆ ಬರುವ ಸಮುದಾಯದ ಅಭ್ಯರ್ಥಿಗಳು ಇರುವ ಸ್ವ ಸಹಾಯ ಗುಂಪುಗಳು ಅರ್ಜಿ ಸಲ್ಲಿಸಬಹುದು

1. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
2. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
3. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
4. ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
5. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
6. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ.

ಸರ್ಕಾರದಿಂದ ಬರುವ ಸಹಾಯಧನ:-

* ಕನಿಷ್ಠ 10 ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರನ್ನು ಹೊಂದಿರುವ ನೋಂದಾಯಿತ ಸ್ವಸಹಾಯ ಸಂಘಕ್ಕೆ ಪ್ರತಿ ಸದಸ್ಯರಿಗೆ ರೂ.15,000 ಸಹಾಯಧನ ಮತ್ತು ರೂ.10,000 ಸಾಲ, ಒಟ್ಟು ರೂ.25,000/- ಗಳಂತೆ ಒಂದು ಸಂಘಕ್ಕೆ ಗರಿಷ್ಟ ರೂ.2.50ಲಕ್ಷ ಅನುದಾನವನ್ನು ನಿಗಮದಿಂದ ನೀಡಲಾಗುತ್ತದೆ. * * ಈ ಸಾಲದ ಮೊತ್ತವನ್ನು ಸದಸ್ಯರು ವಾರ್ಷಿಕವಾಗಿ ಶೇ.4% ಬಡ್ಡಿ ದರದಲ್ಲಿ 30 ಸಾಮಾನ್ಯವಾಗಿ ಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.

ಬೇಕಾಗುವ ದಾಖಲೆಗಳು:-

* ಎಲ್ಲಾ ಸದಸ್ಯರ ಭಾವಚಿತ್ರ
* ಸದಸ್ಯರ ಜಾತಿ ಪ್ರಮಾಣಪತ್ರ
* ಆದಾಯ ಪ್ರಮಾಣಪತ್ರ
* ವಿಳಾಸ ಪುರಾವೆ ಮತ್ತು ಗುರುತಿನ ಪುರಾವೆಗಾಗಿ ಎಲ್ಲಾ ಸದಸ್ಯರು ಆಧಾರ್ ಕಾರ್ಡ್ ಪ್ರತಿ
* ಸಂಘದ ಬ್ಯಾಂಕ್ ಪಾಸ್ ಬುಕ್‌ ವಿವರ
* ಸ್ವ-ಸಹಾಯ ಸಂಘದ ನೋಂದಣಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ:-

* ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂದು ಪೋರ್ಟಲ್ ಮೂಲಕ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು.
* ಗ್ರಾಮ ಒನ್, ಬೆಂಗಳುರು ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29 ನವೆಂಬರ್, 2024.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now