ಕರ್ನಾಟಕ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi) ಮೂಲಕ ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮುಖ್ಯಸ್ಥೆ ಸ್ಥಾನದಲ್ಲಿರುವ ಹಿರಿಯ ಮಹಿಳೆಯರು ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು ಸರ್ಕಾರದಿಂದ 2000ರೂ. ಸಹಾಯಧನವನ್ನು ಪಡೆಯುತ್ತಿದ್ದಾರೆ.
ನೂತನ ಸರ್ಕಾರ ಸ್ಥಾಪನೆಯಾದ ಮೇಲೆ ಜುಲೈ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುತ್ತಿದೆ. ಇಲ್ಲಿಯವರೆಗೂ ಯಶಸ್ವಿಯಾಗಿ 1.10 ಕೋಟಿ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಇವುಗಳಲ್ಲಿ ಅರ್ಹ ಪಲಾನುಭವಿಗಳ ಖಾತೆಗೆ DBT ಮೂಲಕ ಸರ್ಕಾರ ಹಣ ವರ್ಗಾವಣೆ ಮಾಡುತ್ತಿದೆ ಆಗಸ್ಟ್ ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆಯಾಗುತ್ತಿದೆ.
ನವೆಂಬರ್ ತಿಂಗಳವರೆಗೆ ಮೂರು ಬಾರಿ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಿದೆ. ಮೊದಲನೇ ಕಂತಿನ ಹಣ ವರ್ಗಾವಣೆಯಾದಾಗ ಶೇಕಡ 80% ರಷ್ಟು ಮಹಿಳೆಯರಿಗೆ ಮಾತ್ರ ಯೋಜನೆ ಹಣ ತಲುಪಿತ್ತು. ಯಾಕೆಂದರೆ, ಮಹಿಳೆಯರ ಬ್ಯಾಂಕ್ ಖಾತೆ ಆಕ್ಟಿವ್ ಆಗಿ ಇಲ್ಲದೆ ಇರುವುದು, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವುದು.
ಕೊಟ್ಟಿರುವ ದಾಖಲೆಗಳಲ್ಲಿ ಹೆಸರಿನ ವ್ಯತ್ಯಾಸವಾಗಿರುವುದು ಇತ್ಯಾದಿ ತಾಂತ್ರಿಕ ದೋಷದಿಂದಾಗಿ (technical issues) ಲಕ್ಷಾಂತರ ಮಹಿಳೆಯರಿಗೆ ಮೊದಲನೇ ಕಂತಿನ ಹಣ ಪಡೆಯಲು ಸಮಸ್ಯೆ ಆಗಿತ್ತು. ನಂತರ ಎರಡನೇ ಕಂತಿನ ಹಣ ಬಿಡುಗಡೆ ವೇಳೆ ಈ ಸಮಸ್ಯೆಗಳನ್ನು ತಿದ್ದುಪಡಿ ಮಾಡಿಕೊಂಡ ಮಹಿಳೆಯರು ಎರಡು ಕಂತಿನ ಹಣವನ್ನು ಒಟ್ಟಿಗೆ ಪಡೆದಿದ್ದರು.
ಈ ಬಾರಿ 5-6ಲಕ್ಷ ಅರ್ಜಿದಾರರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೂಡ ಯಶಸ್ವಿಯಾಗಿ ಹಣ ವರ್ಗಾವಣೆ ಆಗುತ್ತದೆ ಎನ್ನುವ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಂಚಿಕೊಂಡಿದೆ. ಇದೇ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರ (CM Siddaramaih) ಸಮ್ಮುಖದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (KWCWD Minister Lakshmi Hebbalkar) ಅವರನ್ನು ಒಳಗೊಂಡಂತೆ.
ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಗೃಹಲಕ್ಷ್ಮಿ ಪ್ರಗತಿ ಪರಿಶೀಲದ ಸಭೆ (Gruhalakshmi Pragathi Parisheelana Sabhe) ನಡೆಸಲಾಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ (Gruhalakshmi Adalath) ಆರಂಭಿಸಿ ಫಲಾನುಭವಿಗಳ ಸಮಸ್ಯೆಗಳನ್ನು ಪರಿಹರಿಸಿ ಮತ್ತು ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿದ್ದಾರೆ.
ವರನ್ನು ಸಹ ಸೇರ್ಪಡೆ ಮಾಡಿ ಶೀಘ್ರವಾಗಿ ಹಣ ತಲುಪಿಸುವ ಕಾರ್ಯ ಮಾಡಬೇಕು. ಡಿಸೆಂಬರ್ ಅಂತ್ಯದೊಳಗೆ ಸಂಪೂರ್ಣವಾಗಿ ನೂರಕ್ಕೆ ನೂರರಷ್ಟು ಎಲ್ಲಾ ಮಹಿಳಾ ಫಲಾನುಭವಿಗಳು ಕೂಡ ಗೃಹಲಕ್ಷ್ಮಿ ಯೋಜನೆ ಹಣ ಸಿಗುವಂತಾಗಬೇಕು ಎಂದು ಸೂಚಿಸಿದ್ದಾರೆ. ಅದಕ್ಕೆ ತಕ್ಕ ಹಾಗೆ ಇಲಾಕೆ ಕೂಡ ಕ್ರಮ ಕೈಗೊಂಡಿದೆ.
ಆದರೆ ಇತ್ತೀಚೆಗೆ ಬಂದಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ 50,000 ಫಲಾನುಭವಿಗಳ ಅರ್ಜಿಯು ತಿರಸ್ಕೃತಗೊಂಡಿದೆ (Application rejected). ಕಾರಣವೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು.
BPL ಮಾತ್ರವಲ್ಲದೆ APL ಕಾರ್ಡ್ ಇದ್ದವರೂ ಕೂಡ ಅವರು ಅರ್ಜಿ ಸಲ್ಲಿಸಬಹುದು. ಆದರೆ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ಉದ್ಯೋಗದಲ್ಲಿದ್ದರೆ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅಂಥವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಆದರೆ ಆದಾಯ ತೆರಿಗೆ ಪಾವತಿದಾರರ ಪತ್ನಿಯರು (Income tax returner) ಕೂಡ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ದಾಖಲೆಗಳ ಪರಿಶೀಲನೆ ವೇಳೆ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿರುವ ಪ್ಯಾನ್ ಕಾರ್ಡ್ ಪರಿಶೀಲನೆ ಮಾಡಿದಾಗ ಈ ಮಾಹಿತಿ ತಿಳಿದು ಬಂದಿತ್ತು ಅಂತಹ ಅರ್ಜಿಗಳು ತಿರಸ್ಕೃತವಾಗಿವೆ ಎನ್ನುವ ಮಾಹಿತಿ ಸಿಕ್ಕಿದೆ.