ಕರ್ನಾಟಕದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯರವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ದೇಶದಾದ್ಯಂತ ಸುದ್ದಿಯಲ್ಲಿದ್ದಾರೆ. ಇದರೊಂದಿಗೆ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಕೆಲ ವಿಶೇಷ ಯೋಜನೆಗಳನ್ನು ಜಾರಿಗೆ ತಂದು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ, ಶ್ರಮಿಕ ವರ್ಗಕ್ಕೆ ಅನುಕೂಲತೆ ಮಾಡಿಕೊಡುತ್ತಿದ್ದಾರೆ.
ಅದೇ ರೀತಿ ಅನೇಕ ನಿಗಮ ಹಾಗೂ ಮಂಡಳಿಗೂ ಕೂಡ ಅನುದಾನ ನೀಡಿ ಆ ವ್ಯಾಪ್ತಿಗೆ ಒಳಪಡುವವರಿಗೆ ನೆರವಾಗಿದ್ದಾರೆ. ಅಂತೆಯೇ ಈಗ ಕರ್ನಾಟಕ ರಾಜ್ಯದ SC/ST ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯರವರು ಗುಡ್ ನ್ಯೂಸ್ ನೀಡಿದ್ದಾರೆ, ಸ್ವಯಂ ಉದ್ಯೋಗ ಮಾಡಲು ಇಚ್ಚಿಸುವವರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.
ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೈನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಹಣ್ಣು ಮತ್ತು ತರಕಾರಿ, ಮೀನು, ಮಾಂಸ ಮಾರಾಟ, ಹಾಗೂ ಇತರೆ ಯಾವುದೇ ಲಾಭದಾಯಕ ಸಣ್ಣ ಕೈಗಾರಿಕೆ ಸ್ಥಾಪಿಸಲು ಅಥವಾ ಸೇವಾ ಘಟಕ ಅಥವಾ ವ್ಯಾಪಾರ ಉದ್ದಿಮೆ ಪ್ರಾರಂಭಿಸಲು ಆಸಕ್ತಿ ಹೊಂದಿರುವವರು ಈ ಸೌಲಭ್ಯ ಪಡೆಯಬಹುದು.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಯೋಜನೆ ಕುರಿತು ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ.
ಸಿಗುವ ಸಹಾಯಧನ:-
* ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಪರಿಶಿಷ್ಟ ಜಾತಿಯ ಯುವಕರಿಗೆ ಹಾಗೂ ಯುವತಿಯರಿಗೆ ಹಣ್ಣು ಮತ್ತು ತರಕಾರಿ, ಮೀನು, ಮಾಂಸ ಮಾರಾಟ, ಕುರಿ, ಹಂದಿ, ಮೊಲ ಸಾಕಾಣಿಕೆ ಇತ್ಯಾದಿ ಕಿರು ಆರ್ಥಿಕ ಚಟುವಟಿಕೆಗಳಿಗೆ ರೂ.50,000 ಘಟಕ ವೆಚ್ಚದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ.
* ಇದರಲ್ಲಿ ರೂ.25,000 ಸಹಾಯಧನ ಹಾಗೂ ರೂ. 25,000 ಸಾಲ
* ನಿಗಮದಿಂದ ಈ ಸಾಲದ ಮೊತ್ತಕ್ಕೆ ವಾರ್ಷಿಕ ಬಡ್ಡಿ ಶೇ. 4 ರಷ್ಟು ವಿಧಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ನಿಯಮ ಮತ್ತು ನಿಬಂಧನೆಗಳು:-
* ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
* ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದವರಾಗಿರಬೇಕು
* ಆದಾಯ ಮೀತಿ ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ರೂ. ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂ.
* ಅರ್ಜಿ ಸಲ್ಲಿಸುವವರು 21 ವರ್ಷಕ್ಕಿಂತ ಮೇಲ್ಪಟ್ಟಿರಬೇಕು, ಗರಿಷ್ಠ 60 ವರ್ಷದ ಒಳಗಿರಬೇಕು.
ಬೇಕಾಗುವ ದಾಖಲೆಗಳು:-
* ಅರ್ಜಿದಾರರ ಆಧಾರ್ ಕಾರ್ಡ್
* ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರ
* ಸಕ್ಷಮ ಪ್ರಾಧಿಕಾರದಿಂದ ನೀಡಿದ ಆದಾಯ ಪ್ರಮಾಣ ಪತ್ರ
* ಯೋಜನೆಯ ವರದಿ
* ಬ್ಯಾಂಕ್ ಪಾಸ್ ಬುಕ್ ವಿವರ
* ಮೊಬೈಲ್ ಸಂಖ್ಯೆ
* ಇನ್ನಿತರ ಕೇಳಲಾಗುವ ಪ್ರಮುಖ ದಾಖಲೆಗಳು.
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
* ನಿಮ್ಮ ಹತ್ತಿರದ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಅಟಲ್ ಜನಸ್ನೇಹಿ ಕೇಂದ್ರ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29 ನವೆಂಬರ್, 2023.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
* ಕಲ್ಯಾಣ ಮಿತ್ರ 24*7 ಸಹಾಯವಾಣಿ 9482300400
* @SWDGok Xಖಾತೆ.