ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ ಉಚಿತ ವಸತಿ ಶಾಲೆಗೆ ಆಹ್ವಾನ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

 

WhatsApp Group Join Now
Telegram Group Join Now

 

ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಸೇರಿದಂತೆ ವಿವಿಧ ಉಚಿತ ವಸತಿ ಶಾಲೆಗಳ 2024-25 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಆನಲೈನ್ ಅರ್ಜಿ ಆಹ್ವಾನ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.!

ಕರ್ನಾಟಕ ವಸತಿ ಶಿಕ್ಷಣ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25 ನೇ ಸಾಲಿನ 6ನೇ ತರಗತಿ ಪ್ರವೇಶಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.

ಯಾವ ರೀತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲೊಲಿಸಲು ಅರ್ಹತೆಗಳು ಏನು? ಏನ್ನೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು? ಮತ್ತು ಪರೀಕ್ಷೆ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು ಎನ್ನುವುದರ ಬಗ್ಗೆ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಿ ಕೊಡುತ್ತಿದ್ದೇವೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾಗಾಂಧಿ / ಡಾ. ಬಿಆರ್ ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿ ತತ್ವ / ಶ್ರೀ ನಾರಾಯಣ ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಸ್ತುತವಾಗಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳು ಆರನೇ ತರಗತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಲ್ಲಿ ಪ್ರವೇಶಾತಿ ಪಡೆದು ಶಿಕ್ಷಣ ಪಡೆಯಬೇಕು ಎಂದು ಇಚ್ಚಿಸಿದರೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:-

* 07 ಡಿಸೆಂಬರ್ 2023 ರಿಂದ 21 ಡಿಸೆಂಬರ್ 2023ರ ವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಅಥವಾ ಕಾಲೇಜುಗಳ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬೇಕು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ಫೆಬ್ರವರಿ 2024ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಥೆಯಿಂದ 100 ಆಂಕಗಳ ಅರ್ಹತಾ ಪರೀಕ್ಷೆ ಇರುತ್ತದೆ.

* ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾಗಲು ಬಯಸುತ್ತಾರೆ ಅಂತಹ ಶಾಲೆಗಳನ್ನು ಆದ್ಯತ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ಆರಿಸುವ ಶಾಲೆಗಳು ಮಾತ್ರ ಪರಿಗಣಿಸಲ್ಪಡುತ್ತವೆ.
* ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ಎಲ್ಲ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸಬೇಕು.

ಆಯ್ಕೆ ವಿಧಾನ:-

ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಮತ್ತು ಅಭ್ಯರ್ಥಿಗಳು ಪ್ರವೇಶಾತಿಗಾಗಿ ಬಯಸಿರುವ ಶಾಲೆಗಳ ಆದ್ಯತಾ ಕ್ರಮಗಳ ಆಧಾರದ ಮೇಲೆ computerized Auto Selection ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:-

* ವಿದ್ಯಾರ್ಥಿಯು ಕರ್ನಾಟಕದ ಮೂಲನಿವಾಸಿ ಆಗಿರಬೇಕು
* ಪ್ರಸಕ್ತ ಸಾಲಿನಲ್ಲಿ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ಗಳನ್ನು ಮೀರಿರಬಾರದು
* 2A, 2B, 3A, 3B ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ಮೀರಿರಬಾರದು.

ಬೇಕಾಗುವ ದಾಖಲೆಗಳು:-

* ವಿದ್ಯಾರ್ಥಿಯು 5ನೇ ತರಗತಿ ಓದುತ್ತಿರುವ ಶಾಲೆಯ SATS ಸಂಖ್ಯೆ
* ಮೀಸಲಾತಿಗೆ ಸಂಬಂಧಿಸಿದ ದಾಖಲೆಗಳು
* ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದಕ್ಕೆ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ:-
https://kea.kar.nic.in
https://kreis.kar.nic.in

ಸಹಾಯವಾಣಿ ಸಂಖ್ಯೆ:- 080 – 23 460 460

 

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now