ಕರ್ನಾಟಕ ರಾಜ್ಯ ಸರ್ಕಾರವು ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಕುರಿತು ಒಂದು ಪ್ರಮುಖವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲು ಬಯಸುತ್ತಿದ್ದೇವೆ.
ಅದೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಮುಖ್ಯಸರ ಸ್ಥಾನದಲ್ಲಿ ಇರುವ ಮಹಿಳೆಯ ಖಾತೆಗೆ ಸರ್ಕಾರದಿಂದ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 2000 ಸಹಾಯಧನವನ್ನು debt ಮೂಲಕ ವರ್ಗಾವಣೆ ಮಾಡುತ್ತಿರುವ ವಿಷಯ ಬಹುತೇಕರಿಗೆ ತಿಳಿದಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವವಾಗಿ ಕೊಟ್ಟಿದ್ದ 5 ಗ್ರಾರೆಂಟಿ ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಈ ಸಹಾಯಧನ ವಿಚಾರವೂ ಕೂಡ ಆಶ್ವಾಸನೆಯಲ್ಲಿತ್ತು. ಅಂತೆಯೇ ಬಹುಮತ ಬೆಂಬಲದೊಂದಿಗೆ ಗೆದ್ದು ಸರ್ಕಾರ ಸ್ಥಾಪಿನೆಯಾದ ಮೇಲೂ ಕೂಡ ನುಡಿದಂತೆ ನಡೆದಿರುವ ಸಿದ್ದರಾಮಯ್ಯ (Siddaramaih) ನೇತೃತ್ವದ ಸರ್ಕಾರವು ಜುಲೈ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಲು ಮಹಿಳೆಯರಿಂದ ಅರ್ಜಿ ಆಹ್ವಾನ ಮಾಡಿತ್ತು.
ರೇಷನ್ ಕಾರ್ಡ್ ಹೊಂದಿ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಮಾಹಿತಿ ನೀಡಿ ಯೋಜನೆಗೆ ನೋಂದಾಯಿಸಿಕೊಳ್ಳಬೇಕಿತ್ತು. ಈವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (KWCWD) ಮಾಹಿತಿ ಹಂಚಿಕೊಂಡಿದೆ.
ಆಗಸ್ಟ್ ತಿಂಗಳಿನಿಂದ ನವೆಂಬರ್ ತಿಂಗಳವರೆಗೆ ಯಶಸ್ವಿಯಾಗಿ ಈವರೆಗೆ ಮೂರು ಕಂತಿನ ಹಣಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಆದರೆ ಪೂರ್ತಿಯಾಗಿ ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ತಲುಪಿಲ್ಲ. ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗದೆ ಇರುವುದು, ಬ್ಯಾಂಕ್ ಖಾತೆಗಳು ಆಕ್ಟಿವ್ ಆಗಿಲ್ಲದೇ ಇರುವುದು ಮತ್ತು ಕೆಲವು ಮಹಿಳೆಯರ ದಾಖಲೆಗಳಲ್ಲಿ ಹೆಸರಿನ ವ್ಯತ್ಯಾಸ ಆಗಿರುವುದು ಇತ್ಯಾದಿ ಕಾರಣಗಳಿಂದಾಗಿ 4-5ಲಕ್ಷ ಮಹಿಳೆಯರು ಹಣ ಪಡೆಯಲು ಆಗಿಲ್ಲ.
ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಇಲಾಖೆ ಅಧಿಕಾರಿಗಳನ್ನು ಒಳಗೊಂಡು ಗೃಹಲಕ್ಷ್ಮಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಯ ಸಹಾಯದಿಂದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಅದಾಲತ್ (Gruhalakshmi adalath) ನಡೆಸಿ ಈ ಸಮಸ್ಯೆಗಳನ್ನು ಪರಿಹರಿಸಬೇಕು ಡಿಸೆಂಬರ್ ಅಂತ್ಯದೊಳಗೆ ನೂರಕ್ಕೆ ನೂರರಷ್ಟು ಎಲ್ಲಾ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆ ಪಡೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ.
ಈಗ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವು ವರ್ಗಾವಣೆ ಆಗುತ್ತಿದೆ. ಮೊದಲ ಹಂತದಲ್ಲಿ 15 ಜಿಲ್ಲೆಗಳ ಫಲಾನುಭವಿಗಳು ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವನ್ನು ಪಡೆಯುತ್ತಿದ್ದಾರೆ, ಮುಂದಿನ ಹಂತದಲ್ಲಿ ಉಳಿದ ಜಿಲ್ಲೆಗಳು ಪಡೆಯಲಿವೆ.
ಆ 15 ಜಿಲ್ಲೆಗಳ ಪಟ್ಟಿ ಹೀಗಿದೆ ನೋಡಿ.
* ಮೈಸೂರು
* ಬಿಜಾಪುರ
* ಧಾರವಾಡ
* ಕಲ್ಬುರ್ಗಿ
* ರಾಯಚೂರು
* ಕೋಲಾರ
* ಮಂಡ್ಯ
* ದಾವಣಗೆರೆ
* ಚಿತ್ರದುರ್ಗ
* ಬಾಗಲಕೋಟೆ
* ಹಾಸನ
* ಉತ್ತರ ಕನ್ನಡ
* ಬೆಂಗಳೂರು
* ಬೆಳಗಾವಿ
* ಗದಗ