ಕರ್ನಾಟಕ ಸರ್ಕಾರವು ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ (Guarantee Schemes) ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಯಾವಾಗಲು ಹೆಚ್ಚು ಚರ್ಚೆಯಲ್ಲಿ ಇರುತ್ತದೆ. ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ರೇಷನ್ ಕಾರ್ಡ್ ಹೊಂದಿ, ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಇಂದುವರೆಗೂ ಯಶಸ್ವಿಯಾಗಿ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇದರಲ್ಲಿ 90% ಮಹಿಳೆಯರು ಪ್ರತಿ ತಿಂಗಳು ಸರ್ಕಾರದಿಂದ ಸಹಾಯಧನವನ್ನು ಪಡೆಯುತ್ತಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಉದ್ದೇಶದಿಂದಲೇ ಜಾರಿಗೆ ತಂದಿರುವ ಈ ಗೃಹಲಕ್ಷ್ಮಿ ಯೋಜನೆ ಹಣವು ಸಂಪೂರ್ಣವಾಗಿ ಎಲ್ಲಾ ಮಹಿಳೆಯರಿಗೂ ತಲುಪುತ್ತಿಲ್ಲ ಎನ್ನುವ ದೂರುಗಳು ಕೂಡ ಕೇಳಿ ಬರುತ್ತಿವೆ.
ಕೆಲವು ಮಹಿಳೆಯರಿಗೆ ಬ್ಯಾಂಕ್ ಖಾತೆಗಳು ಸಮಸ್ಯೆಯಾಗಿದ್ದರೆ ಇನ್ನೂ ಕೆಲವು ಮಹಿಳೆಯರಿಗೆ ಇನ್ನಿತರ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಇದುವರೆಗೆ ಡಿಸೆಂಬರ್ ತನಕ 3 ತಿಂಗಳಿನ ಗೃಹಲಕ್ಷ್ಮಿ ಹಣವು ಜಮೆ ಆಗಿದೆ ಮತ್ತು ಡಿಸೆಂಬರ್ ತಿಂಗಳ 4ನೇ ಕಂತಿನ ಹಣದ ಬಿಡುಗಡೆಗಾಗಿ ಹಣ ಪಡೆದಿರುವ ಮಹಿಳೆಯರು ಕಾಯುತ್ತಿದ್ದಾರೆ.
ಇದರ ನಡುವೆ ಕಳೆದ ತಿಂಗಳು ವಿಧಾನಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಅಧಿಕಾರಿಗಳನ್ನು ಒಳಗೊಂಡಂತೆ ಮಾನ್ಯ ಮುಖ್ಯಮಂತ್ರಿಗಳು ಗೃಹಲಕ್ಷ್ಮಿ ಪ್ರಗತಿ ಪರಿಶೀಲನ ಸಭೆಯನ್ನು (Gruhalakshmi Pragathi) ನಡೆಸಿ ಡಿಸೆಂಬರ್ ಅಂತ್ಯದ ಒಳಗೆ ಯಾರಿಗೆಲ್ಲ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಸಾಧ್ಯವಾಗಿಲ್ಲ.
ಅವರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಕ್ಯಾಂಪ್ (Gruhalakshmi Camp) ಕಾರ್ಯಕ್ರಮ ನಡೆಸಿ ಸಮಸ್ಯೆ ಪರಿಹರಿಸಿ ಕೊಡಬೇಕು ಮತ್ತು ಇನ್ನು ಯಾರೆಲ್ಲ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿಲ್ಲ ಅವರನ್ನು ಸೇರಿಸಬೇಕು. ಒಟ್ಟಾರೆಯಾಗಿ ಡಿಸೆಂಬರ್ ಅಂತ್ಯದೊಳಗೆ ಕರ್ನಾಟಕದ ಎಲ್ಲಾ ಫಲಾನುಭವಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎನ್ನುವ ಆದೇಶವನ್ನು ನೀಡಿದ್ದಾರೆ.
ಅದರಂತೆ ಡಿಸೆಂಬರ್ 27 ರಿಂದ 29 ರವರೆಗೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ನಡೆಸಲಾಗುತ್ತಿದೆ. ಹಣ ಪಡೆಯಲು ಸಮಸ್ಯೆಯಾಗಿರುವ ಮಹಿಳೆಯರು ಅಥವಾ ಒಂದು ತಿಂಗಳು ಹಣ ಪಡೆದು ನಂತರ ಪಡೆಯಲಾಗದ ಮಹಿಳೆಯರು ಈ ರೀತಿ ಗೃಹಲಕ್ಷ್ಮಿ ಹಣಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೂ.
ಆ ಮಹಿಳೆಯರು ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮತ್ತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಪ್ರತಿಯನ್ನು ತೆಗೆದುಕೊಂಡು ಹೋಗಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಈ ಕ್ಯಾಂಪ್ ನಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಸ್ಥಳೀಯ ಬ್ಯಾಂಕ್ ಮತ್ತು ಅಂಚೆ ಕಚೇರಿ ಸಿಬ್ಬಂದಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇನ್ನಿತರ ಅಧಿಕಾರಿಗಳು ಕೂಡ ಭಾಗಿಯಾಗಿ ಮಹಿಳೆಯರ ಸಮಸ್ಯೆಯನ್ನು ಸರಿಪಡಿಸಿ DBT ಮೂಲಕ ಹಣ ಜಮೆಯಾಗುವಂತೆ ಮಾಡಿಕೊಡಲಿದ್ದಾರೆ.
ಇದೆಲ್ಲದರ ನಡುವೆ ಇತ್ತೀಚಿಗೆ ಪಿಂಕ್ ಸ್ಮಾರ್ಟ್ ಕಾರ್ಡ್ (Pink Smart card) ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುವುದು ಎನ್ನುವ ವದಂತಿ ಕೂಡ ಹಬ್ಬುತ್ತಿದೆ. ಯಾವುದೇ ಮಹಿಳೆಯರು ಇದಕ್ಕಾಗಿ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ ಸದ್ಯಕ್ಕೆ ಸರ್ಕಾರವು ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಘೋಷಣೆ ಮಾಡಿಲ್ಲ.
ಪಿಂಕ್ ಸ್ಮಾರ್ಟ್ ಕಾರ್ಡ್ ವಿತರಣೆ ಸದ್ಯಕ್ಕೆ ಸಾಧ್ಯವಾಗದ ಪ್ರಾಜೆಕ್ಟ್ ಆಗಿದೆ, ಇದಕ್ಕೂ ಮುಂಚೆ ಹೇಳಲಾಗಿದ್ದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕೂಡ ಇನ್ನೂ ವಿತರಣೆಯಾಗದ ಕಾರಣ ಈಗಲೇ ಗೃಹಲಕ್ಷ್ಮಿ ಕಾರ್ಡ್ ವಿತರಣೆ ಆಗುವುದು ಕೂಡ ವಾಸ್ತವಕ್ಕೆ ದೂರವಾದ ಮಾತಾಗಿದೆ.
ಹಾಗಾಗಿ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಮಹಿಳೆಯರು ಗೃಹಲಕ್ಷ್ಮಿ ಹಣ ಪಡೆಯಲು ಬೇರೆ ಯಾವುದೇ ಸಮಸ್ಯೆ ಇದ್ದರೂ ತಪ್ಪದೆ ಈ ಮೂರು ದಿನಗಳ ಗೃಹಲಕ್ಷ್ಮಿ ಕ್ಯಾಂಪ್ ನಲ್ಲಿ ಭಾಗಿಯಾಗಿ ತಮ್ಮ ಗೊಂದಲಗಳನ್ನು ಪರಿಹರಿಸಿಕೊಂಡು ಸರ್ಕಾರದ ಸಹಾಯಧನವನ್ನು ಸದುಪಯೋಗ ಪಡಿಸಿಕೊಳ್ಳಿ.