ದೇಶದಾದ್ಯಂತ ಇರುವ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸದಾವಕಾಶವಿದೆ. ಸರ್ಕಾರಿ ಉದ್ಯೋಗ ಯಾರಿಗೆ ತಾನೇ ಬೇಡ, ಇದಕ್ಕಾಗಿ ವರ್ಷಗಟ್ಟಲೆ ಕಾಯುತ್ತಿರುವವರು ಕೂಡ ಇದ್ದಾರೆ. ಆದರೆ ಸರ್ಕಾರಿ ಉದ್ಯೋಗ ಸಿಗುವುದು ಅಷ್ಟು ಸುಲಭವಲ್ಲ. ಅದಕ್ಕೆ ಅದೃಷ್ಟವೂ ಇರಬೇಕು, ನಿರಂತರತೆಯಿಂದ ಕೂಡಿದ ಸತತ ಪರಿಶ್ರಮವು ಇರಬೇಕು. ಎಲ್ಲ ಸರ್ಕಾರಿ ಆಕಾಂಕ್ಷಿಗಳಿಗೂ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಅಗ್ರಿಕಲ್ಚರ್ ಸೈಂಟಿಸ್ಟ್ ರಿಸರ್ಚ್ ಬೋರ್ಡ್ (ASRB) ತನ್ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ ಮುಂತಾದ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ನೋಟಿಫಿಕೇಶನ್ ಅಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ.
ಗೃಹಲಕ್ಷ್ಮಿ ಯೋಜನೆ 2000 ಹಣ ಇನ್ನು ಬಂದಿಲ್ವಾ.? ಆಗಿದ್ರೆ ತಕ್ಷಣ ಈ ಕೆಲಸ ಮಾಡಿ.! ಇಲ್ಲದಿದ್ರೆ ಹಣ ಬರಲ್ಲ.!
ನೇಮಕಾತಿ ಸಂಸ್ಥೆ:- ಅಗ್ರಿಕಲ್ಚರಲ್ ಸೈಂಟಿಸ್ಟ್ ರೀಸರ್ಚ್ ಬೋರ್ಡ್ (ASRB).
ಒಟ್ಟು ಹುದ್ದೆಗಳು:- 368
ಹುದ್ದೆಗಳ ವಿವರ:-
● ಪ್ರಿನ್ಸಿಪಾಲ್ ಸೈಂಟಿಸ್ಟ್ – 80
● ಸೀನಿಯರ್ ಸೈಂಟಿಸ್ಟ್ – 288
ವೇತನ ಶ್ರೇಣಿ:-
● ಪ್ರಿನ್ಸಿಪಾಲ್ ಸೈಂಟಿಸ್ಟ್ – ರೂ.1,44,200 ರಿಂದ ರೂ.2,18,200
● ಸೀನಿಯರ್ ಸೈಂಟಿಸ್ಟ್ – ರೂ.1,31,400 ರಿಂದ ರೂ.2,17,100
ಉದ್ಯೋಗ ಸ್ಥಳ:- ಭಾರತದಾತ್ಯಂತ…
ಶೈಕ್ಷಣಿಕ ವಿದ್ಯಾರ್ಹತೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ Ph.D ಪದವಿಯನ್ನು ಪಡೆದಿರಬೇಕು.
ವಯೋಮಿತಿ:-
● ಗರಿಷ್ಠ ವಯೋಮಿತಿ ಪ್ರಿನ್ಸಿಪಾಲ್ ಸೈಂಟಿಸ್ಟ್ ಹುದ್ದೆಗಳಿಗೆ 52 ವರ್ಷಗಳು
● ಗರಿಷ್ಠ ವಯೋಮಿತಿ ಸೀನಿಯರ್ ಸೈಂಟಿಸ್ಟ್ ಹುದ್ದೆಗಳಿಗೆ 47 ವರ್ಷಗಳು.
ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC / ST ಅಭ್ಯರ್ಥಿಗಳಿಗೆ 5 ವರ್ಷಗಳು
● ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು.
UPI ಬಳಸುವವರಿಗೆ ಹೊಸ ನಿಯಮ ಜಾರಿ.! ಫೋನ್ ಪೇ, ಗೂಗಲ್ ಪೇ, ಬಳಕೆ ಮಾಡುವವರು ತಪ್ಪದೆ ಈ ಸುದ್ದಿ ನೋಡಿ.!
ಅರ್ಜಿ ಶುಲ್ಕ:-
● ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳಿಗೆ 1500ರೂ.
● ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
● ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಿ ಇ-ರಶೀದಿಯನ್ನು ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸುವ ವಿಧಾನ:-
● ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಹತೆ ಇರುವವರು ಮಾತ್ರ ಅರ್ಜಿ ಸಲ್ಲಿಸಬೇಕು
● ಮೊದಲಿಗೆ www.asrb.org.in ವೆಬ್ಸೈಟ್ಗೆ ಭೇಟಿ ಕೊಟ್ಟು ಅರ್ಜಿ ಫಾರಂ ನಲ್ಲಿ ಸ್ವ-ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಲಾದ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಸಲ್ಲಿಕೆ ಪೂರ್ತಿಯಾದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಬೇಕು.
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 18.08.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 08.09.2023
ಪೋಸ್ಟ್ ಆಫೀಸಿನ 5 ಬೆಸ್ಟ್ ಸ್ಕೀಮ್ ಗಳು ಇವು, 5,000 ಹೂಡಿಕೆ ಮಾಡಿದರೆ ಸಾಕು ಲಕ್ಷಗಳಲ್ಲಿ ರಿಟರ್ನ್ಸ್ ಪಡೆಯಬಹುದು.!
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ನಿವಾಸ ದೃಢೀಕರಣ ಪತ್ರ
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಅರ್ಜಿ ಶುಲ್ಕ ಪಾವತಿ ಮಾಡಿರುವ ರಶೀದಿ ಸಂಖ್ಯೆ
● ಇನ್ನಿತರ ಪ್ರಮುಖ ದಾಖಲೆಗಳು.