ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು ಖಾಲಿ ಇರುವ 208 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿರುವ ವಿಷಯಗಳನ್ನು ಅರ್ಥೈಸಿಕೊಂಡು ಕೇಳಲಾದ ಅರ್ಹತೆ ಇದ್ದಲ್ಲಿ ಮಾತ್ರ ಅಧಿಸೂಚನೆಯ ನಿಯಮಾವಳಿಗಳ ಪ್ರಕಾರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಉದ್ಯೋಗ ಆಕಾಂಕ್ಷಿಗಳ ಅನುಕೂಲತೆಗಾಗಿ ಈ ಅಂಕಣದಲ್ಲೂ ಸಹ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಪಟ್ಟ ಕೆಲವು ಪ್ರಮುಖ ಅಂಶಗಳ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗಿದೆ. ಈ ಲೇಖನದಲ್ಲಿ ಹುದ್ದೆಗಳ ವಿವರ, ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆಗೆ ಇರುವ ಕಡೆ ದಿನಾಂಕ ಇನ್ನಿತರ ವಿಷಯಗಳ ಬಗ್ಗೆ ತಿಳಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬಹುದು.
ಅಥವಾ ಹತ್ತಿರದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಭೇಟಿಕೊಟ್ಟು ಹೆಚ್ಚಿನ ಮಾಹಿತಿ ಪಡೆಯಬಹುದು. ಈ ಉಪಯುಕ್ತ ಲೇಖನವನ್ನು ನೀವು ನಿಮ್ಮ ಸ್ನೇಹಿತರು ಮತ್ತು ಕುಟುಂಬದವರ ಜೊತೆಗೂ ಹಂಚಿಕೊಂಡು ಅವರಿಗೂ ಅನುಕೂಲವಾಗುವಂತೆ ಮಾಡಿ.
ಇಲಾಖೆ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉದ್ಯೋಗ ಸ್ಥಳ :- ಹಾವೇರಿ ಜಿಲ್ಲೆಯಾದ್ಯಂತ
ಹುದ್ದೆಗಳ ಸಂಖ್ಯೆ :- 208
ಹುದ್ದೆಗಳ ವಿವರ :-
●ಅಂಗನವಾಡಿ ಕಾರ್ಯಕರ್ತೆ – 50
●ಸಹಾಯಕಿ – 108
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಅರ್ಹತೆಗಳು :-
●ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇರುವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ●ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
●ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ :-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ :-
●ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
●ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಛೇರಿಗೆ ಹೋಗಿ ಅರ್ಜಿ ಫಾರಂ ಪಡೆದುಕೊಳ್ಳಬೇಕು.
●ಅಲ್ಲಿ ಕೇಳಿರುವ ಎಲ್ಲ ಮಾಹಿತಿಗಳನ್ನು ತುಂಬಿಸಿ ಅಗತ್ಯ ಪ್ರಮಾಣ ಪತ್ರಗಳ ಪ್ರತಿಯನ್ನು ಕೂಡ ಲಗತ್ತಿಸಬೇಕು.
●ಅದೇ ರೀತಿ ಅರ್ಜಿ ಶುಲ್ಕ ವಿಧಿಸದ ಕಾರಣ ಅರ್ಜಿ ಶುಲ್ಕ ಪಾವತಿ ಮಾಡುವ ಅಗತ್ಯ ಇಲ್ಲ.
●ಭರ್ತಿ ಮಾಡಿದ ಅರ್ಜಿಯನ್ನು ಹಾವೇರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :-
●ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 29.03.2023
●ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ :- 24.04.2023