ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (WCD recruitment) ವತಿಯಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಿ ಆಯ್ದುಕೊಳ್ಳಲಾಗುತ್ತಿದೆ.
ಈ ಬಾರಿ ಬೃಹತ್ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಆ ಪ್ರಕಾರವಾಗಿ ಯಾವ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಇದಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಾಗಿರಬೇಕು? ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಪ್ರಮುಖ ದಿನಾಂಕಗಳು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಆಸಕ್ತರಿಗಾಗಿ ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ.
ತಪ್ಪದೆ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತೆಯರು ಹಾಗೂ ಸಹೋದರಿಯರೊಂದಿಗೂ ಕೂಡ ಹಂಚಿಕೊಂಡು ಆಸಕ್ತಿ ಇರುವವರಿಗೆ ಹುದ್ದೆ ದೊರಕುವಂತೆ ಮಾಡಿ.
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಈ ಸುದ್ದಿ ಓದಿ:- ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!
ಹುದ್ದೆ ಹೆಸರು:-
* ಅಂಗನವಾಡಿ ಕಾರ್ಯಕರ್ತೆಯರು
* ಅಂಗನವಾಡಿ ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ:- 513 ಹುದ್ದೆಗಳು
ಹುದ್ದೆಗಳ ವಿವರ:-
* ಅಂಗನವಾಡಿ ಕಾರ್ಯಕರ್ತೆಯರು 120 ಹುದ್ದೆಗಳು
* ಅಂಗನವಾಡಿ ಸಹಾಯಕಿಯರು 393 ಹುದ್ದೆಗಳು
ಉದ್ಯೋಗ ಸ್ಥಳ:-
ಕೋಲಾರ ಜಿಲ್ಲೆಯಾದ್ಯಂತ ವಿವಿಧ ಗ್ರಾಮ ಪಂಚಾಯಿತಿಗಳು.
ಶೈಕ್ಷಣಿಕ ವಿದ್ಯಾರ್ಹತೆ:-
* ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ PUC ಉತ್ತೀರ್ಣರಾಗಿರಬೇಕು (ಹೆಚ್ಚಿನ ವಿದ್ಯಾಭ್ಯಾಸ ಪಡೆದವರಿಗೆ ಆದ್ಯತೆ ಇರುತ್ತದೆ).
* SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರಬೇಕು
* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಈ ಸುದ್ದಿ ಓದಿ:-ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಎಲ್ಲಾ ಪೆಂಡಿಂಗ್ ಹಣ ಜಮೆ ಹೀಗೆ ಚೆಕ್ ಮಾಡಿ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* ಅಂಗವಿಕಲ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಲಿಕೆ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪೂರಕ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು
* ಆಫ್ ಲೈನ್ ನಲ್ಲಿ ಕೂಡ ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳಿಗೆ ಕೇಳಲಾಗುವ ಪೂರಕ ದಾಖಲೆಗಳ ಪ್ರತಿ ಜೊತೆ ಭೇಟಿಕೊಟ್ಟು ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿ:-ಭೂಮಾಪಕರ ಹುದ್ದೆ ನೇಮಕಾತಿ, ವೇತನ 47,650/- ಆಸಕ್ತರು ಅರ್ಜಿ ಸಲ್ಲಿಸಿ.!
ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ವಿಧಿಸಿರುವುದಿಲ್ಲ
ಆಯ್ಕೆ ವಿಧಾನ:-
* ಕೇಳದಾಗುವ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಮತ್ತು ಕೆಲ ಮೀಸಲಾತಿಗೆ ವಿಧಿಸಲಾಗಿರುವ ಬೋನಸ್ ಅಂಕಗಳನ್ನು ಒಳಗೊಂಡಂತೆ ಕಳೆದ ಒಟ್ಟು ಅಂಕಗಳನ್ನು ಒಟ್ಟುಗೂಡಿಸಿ ಕ್ರೋಢಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 12 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 19 ಏಪ್ರಿಲ್, 2024.
ಸಲ್ಲಿಸಬೇಕಾದ ದಾಖಲೆಗಳು:-
* ಆಧಾರ್ ಕಾರ್ಡ್
* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ನಮೂದಿಸಿರುವ SSLC ಅಂಕಪಟ್ಟಿ
* ಕೇಳಿರುವ ಶೈಕ್ಷಣಿಕ ವಿದ್ಯಾರ್ಹತೆಗೆ ಅನುಸಾರವಾದ ಪ್ರಮಾಣ ಪತ್ರಗಳು
* ವಾಸ ಸ್ಥಳ ಧೀಡೀಕರಣ ಪತ್ರ
* ಜಾತಿ ಪ್ರಮಾಣ ಪತ್ರ
* ವಿಧವಾ ಅಭ್ಯರ್ಥಿಯಾಗಿದ್ದರೆ ಪತಿಯ ಮರಣ ಪ್ರಮಾಣ ಪತ್ರ
* ವಿಶೇಷ ಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆ ಪ್ರಮಾಣ ಪತ್ರ
* ವಿಚ್ಛೇಧಿತ ಮಹಿಳೆಯಾಗಿದ್ದರೆ ನ್ಯಾಯಾಲಯದಿಂದ ಪಡೆದ ವಿಚ್ಛೇಧನದ ಪತ್ರ
* ಇನ್ನಿತರ ಯಾವುದಾದರೂ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದರೆ ಅದಕ್ಕೆ ಸಂಬಂಧಪಟ್ಟ ಪ್ರಮಾಣ ಪತ್ರಗಳು