ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯ ಭಾಗವಾಗಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದಾದ್ಯಂತ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಂಗನವಾಡಿ ಕೇಂದ್ರಗಳು ಇವೆ ಇವುಗಳಲ್ಲಿ ಸಾಕಷ್ಟು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಹುದ್ದೆಗಳು ಖಾಲಿ ಇದ್ದು.
ಈಗ ಆ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಮೊಬೈಲ್ ಮೂಲಕ ಕೂಡ ನೀವು ಅರ್ಜಿ ಸಲ್ಲಿಕೆ ಮಾಡಬಹುದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನದಂಡಗಳೇನು? ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಎನ್ನುವ ವಿವರವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
2024 ರಲ್ಲಿ 2BHK / 3BHK ಮನೆ ಕಟ್ಟಲು ತಗಲುವ ವೆಚ್ಚ ಎಷ್ಟು ನೋಡಿ.!
ಯಾವ ಜಿಲ್ಲೆಗಳಲ್ಲಿ ಖಾಲಿ ಇದೆ.?
* ಬೆಂಗಳೂರು ನಗರ
* ಬೆಂಗಳೂರು ಗ್ರಾಮಾಂತರ
* ಬೀದರ್
* ಬೆಳಗಾವಿ
* ಹಾವೇರಿ
* ತುಮಕೂರು
ಶೈಕ್ಷಣಿಕ ವಿದ್ಯಾರ್ಹತೆ:-
1. ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕನಿಷ್ಠ ದ್ವಿತೀಯ PUC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಮತ್ತು SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಿಶೇಷ ಆದ್ಯತೆಗಳು:-
* ಮಹಿಳಾ ಮತ್ತು ಮಕ್ಕಳ ಇಲಾಖೆಯ ಸುಧಾರಣಾ ಸಂಸ್ಥೆ ಅಥವಾ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು, ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ವಿಧವೆಯರು, 40%ಕ್ಕಿಂತ ಕಡಿಮೆ ಅಂಗವಿಕಲ ಹೊಂದಿರುವವರು ಮತ್ತೆ ಕೇಳಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಹೆಚ್ಚಿನ ಅಂಕ ಪಡೆದವರಿಗೆ +5 ಬೋನಸ್ ಅಂಕಗಳಿರುತ್ತವೆ.
* ಸರ್ಕಾರದ ಅಂಗೀಕೃತ ಸಂಸ್ಥೆಗಳಾದ DSERT ಯಿಂದ ECCE ಡಿಪ್ಲೋಮಾ ಕೋರ್ಸ್, JOC ಕೋರ್ಸ್, NTT ಕೋರ್ಸ್, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೋ ನ್ಯೂಟ್ರಿಷನ್, ಹೋಮ್ಸ್ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಪ್ರಥಮ ಆದ್ಯತೆ.
ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಎಲ್ಲಾ ತಿಂಗಳ ಹಣ ಜಮೆ ಆಗಿದೆ.! ಮೊಬೈಲ್ ನಲ್ಲಿಯೇ ಹಣ ಜಮೆ ಆಗಿರುವ ವಿವರ ನೋಡಿ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 19 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ https://karnemakaone.kar.nic.in/ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು, ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
* ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ವಿವರಗಳನ್ನು ತುಂಬಿಸಬೇಕು
* ಅರ್ಜಿ ಸಲ್ಲಿಕೆ ಸಮಯದಲ್ಲಿ ಕೇಳಲಾಗುವ ಪೂರಕ ದಾಖಲೆಗಳ ಸಂಖ್ಯೆ ಅಥವಾ ಅವುಗಳ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಆಯ್ಕೆ ವಿಧಾನ:-
* ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳ ಅನುಸಾರವಾಗಿ ಕ್ರೋಢಿಕೃತ ಪಟ್ಟಿಯನ್ನು ತಯಾರಿಸಲಾಗುವುದು.
* ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10 ಜನವರಿ, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಫೆಬ್ರವರಿ, 2024.
ಬೇಕಾಗುವ ದಾಖಲೆಗಳು:-
* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
* ಕೇಳಲಾದ ವಿದ್ಯಾರ್ಹತೆಯ ಅಂಕಪಟ್ಟಿ ಮತ್ತು ವಿಶೇಷ ಆದ್ಯತೆಯ ಕುರಿತಾದ ಪ್ರಮಾಣ ಪತ್ರಗಳು
* ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಮೂರು 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
* ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
* ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದರೆ ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ , ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಅಥವಾ ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ), ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು).