ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆ ವತಿಯಿಂದ ಈ ವರ್ಗದ ಜನರ ಆರ್ಥಿಕ ಹಾಗೂ ಸಾಮಾಜಿಕ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ. ಆ ವರ್ಗಕ್ಕೆ ಸೇರಿದ ಫಲಾನುಭವಿಗಳು ನಿಗಮದಿಂದ ಸಿಗುವ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು.
ಸಾಲ ಸೌಲಭ್ಯ, ಸಬ್ಸಿಡಿ ಸೇರಿದಂತೆ ಸಾಕಷ್ಟು ಯೋಜನೆಗಳ ಅನುಕೂಲತೆಯನ್ನು ಮಾಡಿಕೊಡಲಾಗುತ್ತದೆ. ಅಂತೆಯೇ 2023-24ನೇ ಸಾಲಿನಲ್ಲಿಯೂ ಹೊಸದೊಂದು ಯೋಜನೆಯನ್ನು ಪರಿಚಯಿಸಲಾಗಿದ್ದು ಭೂ ಒಡೆತನ ಯೋಜನೆ ಹೆಸರಿನಲ್ಲಿ ಭೂಮಿ ರಹಿತ ಕುಟುಂಬದ ಮಹಿಳಾ ಕೃಷಿ ಕಾರ್ಮಿಕರಿಗೆ ನಿಗಮದ ಕಡೆಯಿಂದ ಕೃಷಿ ಭೂಮಿ ಖರೀದಿಸಲು ಸಬ್ಸಿಡಿ ಮತ್ತು ಸಾಲ ಸೌಲಭ್ಯ ನೀಡಿ ತನ್ನ ಸಹಾಯ ಮಾಡಲಾಗುತ್ತಿದೆ. ಯೋಜನೆ ಬಗ್ಗೆ ಪೂರ್ತಿ ಮಾಹಿತಿಗಾಗಿ ಅಂಕಣವನ್ನು ಕೊನೆಯವರೆಗೂ ಓದಿ.
* ಯೋಜನೆಯ ಹೆಸರು:- ಭೂ ಒಡೆತನ ಯೋಜನೆ 2023-24
ಸಿಗುವ ಅನುದಾನ:-
1. ಭೂ ಒಡೆತನ ಯೋಜನೆ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕ ಕುಟುಂಬದ ಮಹಿಳೆಯರಿಗೆ ನಿಗಮದಿಂದ ಕೃಷಿ ಭೂಮಿಯನ್ನು ಖರೀದಿಸಿ ನೋಂದಣಿ ಮಾಡಿಸಿಕೊಡಲಾಗುತ್ತದೆ.
2. ಘಟಕ ವೆಚ್ಚದ 50% ಸಬ್ಸಿಡಿ ಮತ್ತು 50% ವಾರ್ಷಿಕವಾಗಿ 6% ದರದ ಸಾಲ ಸೌಲಭ್ಯ ವಾಗಿರುತ್ತದೆ, ಒಟ್ಟಾರೆಯಾಗಿ ಘಟಕ ವೆಚ್ಚದ ಅರ್ಧದಷ್ಟು ಹಣ ಉಳಿತಾಯವಾಗುತ್ತದೆ.
ಯಾರು ಅರ್ಹರು:-
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮಸ್ತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದವರು ಮಾತ್ರ ಅರ್ಜಿ ಸಲ್ಲಿಸಬಹುದು. ಯಾವ ನಿಗಮಗಳಲ್ಲಿ ಯಾರು ಅರ್ಜಿ ಸಲ್ಲಿಸಬಹುದು ಎನ್ನುವುದರ ವಿವರ ಹೀಗಿದೆ.
1. ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
2. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
3. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
4. ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ.
5. ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
6. ಕರ್ನಾಟಕ ರಾಜ್ಯ ಸಫಾರಿ ಕರ್ಮಚಾರಿ ಅಭಿವೃದ್ಧಿ ನಿಗಮ
7. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.
* ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು 18 ವರ್ಷ ಮೇಲ್ಪಟ್ಟು 50 ವರ್ಷ ಒಳಗಿರಬೇಕು.
* ಆದಾಯದ ಮಿತಿ ಗ್ರಾಮೀಣ ಪ್ರದೇಶದಲ್ಲಾದರೆ 1.5ಲಕ್ಷದ ಒಳಗಿರಬೇಕು, ನಗರ ಪ್ರದೇಶದಲ್ಲಿ ಈ ಮಿತಿ 2 ಲಕ್ಷ.
* ಅರ್ಜಿ ಸಲ್ಲಿಸುವ ಸಮಯದಲ್ಲಿ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
1. ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ
2. ಸಕ್ಷಮ ಪ್ರಾಧಿಕಾರದಿಂದ ಪಡೆದ ಆದಾಯ ಪ್ರಮಾಣ ಪತ್ರ
3. ಭೂ ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣ ಪತ್ರ
4. ಕುಟುಂಬದ ರೇಷನ್ ಕಾರ್ಡ್
5. ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್
6 . ಬ್ಯಾಂಕ್ ಪಾಸ್ ಬುಕ್ ವಿವರ
7. ಮೊಬೈಲ್ ಸಂಖ್ಯೆ
8. ಇನ್ನಿತರ ಪ್ರಮುಖ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:-
https://sevasindhu.karnataka.gov.in/Sevasindhu/Kannada ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
* ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಯಾವುದೇ CSC ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29 ನವೆಂಬರ್, 2023
ಸಹಾಯವಾಣಿ:-
* ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಕಛೇರಿಗೆ ಭೇಟಿ ಕೊಡಿ.
* ನಿಗಮದ ವೆಬ್ಸೈಟ್ ವಿಳಾಸಕ್ಕೆ ಭೇಟಿ ಕೊಡಿ
* ಸಹಾಯವಾಣಿ ಸಂಖ್ಯೆ:- 9482 300 400