2014-15ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಎನ್ನುವ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರವು ಜಾರಿಗೆ ತಂದಿತ್ತು. ಮಳೆಯಾಶ್ರಿತ ರೈತರ ಜೀವನಮಟ್ಟವನ್ನು ಉತ್ತಮ ಪಡಿಸುವ ಉದ್ದೇಶದಿಂದ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಬಿದ್ದ ಮಳೆ ನೀರು ವ್ಯರ್ಥವಾಗಿ ಹೋಗುವ ಬದಲು ರೈತರು ಅದನ್ನು ಸಂಗ್ರಹಿಸಿಟ್ಟುಕೊಂಡು ಮತ್ತೆ ಪುನರ್ ಬಳಕೆ ಮಾಡಲು ಅನುಕೂಲವಾಗುವಂತೆ ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡ ತೆಗೆದು ಸಂರಕ್ಷಿಸಿ ಇಟ್ಟುಕೊಳ್ಳಲು ಉತ್ತೇಜಿಸುವುದು ಮತ್ತು ಅದಕ್ಕೆ ಅನುಕೂಲ ಮಾಡಿಕೊಡುವುದು ಈ ಯೋಜನೆಯ ಗುರಿಯಾಗಿತ್ತು.
ಈ ಯೋಜನೆಯಡಿ ನೀರು ಸಂಗ್ರಹಣೆಗಾಗಿ ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಟಾರ್ಪಲ್, ಪರ್ಯಾಯ ಮಾದರಿ ಹೊದಿಕೆ, ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ಸೆಟ್,ನೀರನ್ನು ಬೆಳೆಗೆ ಹಾಯಿಸಲು ಬೇಕಾಗುವ ಸಲಕರಣೆಗಳು ಹಾಗೂ ಕೃಷಿ ಹೊಂಡದ ನೀರು ಆವಿಯಾಗುವುದನ್ನು ತಡೆಯಲು ಮತ್ತು ಆಕಸ್ಮಿಕ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಹೊಂಡದ ಸುತ್ತಲೂ ನೆರಳು ಪರದೆ ಘಟಕಗಳ ಖರೀದಿಗೆ ಸಹಾಯಧನ ನೀಡಲಾಗುತ್ತಿತ್ತು.
BJP ಸರ್ಕಾರ ಅಧಿಕಾರದಲ್ಲಿದ್ದಾಗ ಈ ಯೋಜನೆಯನ್ನು ಕಡೆಗಣಿಸಿತ್ತು ಹಾಗಾಗಿ ಯೋಜನೆ ಸ್ಥಗಿತಗೊಂಡಿತ್ತು ಆದರೆ ಈಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಯಲ್ಲಿ ಇರುವುದರಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೃಷಿ ಭಾಗ್ಯ ಯೋಜನೆಯನ್ನು ಪುನಶ್ಚೇತನಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದೇ ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ ಬಜೆಟ್ ಕೂಡ ಮಂಡನೆ ಆಗಲಿದ್ದು ಬಜೆಟ್ ಅಲ್ಲಿ ಕೃಷಿ ಭಾಗ್ಯ ಯೋಜನೆಯ ಕುರಿತು ಪ್ರಸ್ತಾಪವಾಗುವ ಎಲ್ಲ ಸಾಧ್ಯತೆಯೂ ಖಚಿತವಾಗಿದೆ. ಈ ಬಾರಿ ಯೋಜನೆಯಡಿ ಗರಿಷ್ಠ 4 ಲಕ್ಷದವರೆಗೂ ಸಹಾಯಧನವನ್ನು ನೀಡಲು ಸರ್ಕಾರ ನಿರ್ಧಾರ ಮಾಡಿದೆಯಂತೆ, ಕೃಷಿ ಹೊಂಡಗಳ ನಿರ್ಮಾಣ ಮತ್ತು ಅದಕ್ಕೆ ಪೂರಕವಾಗಿ ಬೇಕಾದ ಸಾಮಗ್ರಿಗಳು, ಯಂತ್ರಗಳ ಸಹಾಯದಿಂದ ಅಥವಾ ಮಾನವ ಶಕ್ತಿಯಿಂದ ಬಳಕೆಯಿಂದ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡುವುದು ಸೇರಿದಂತೆ ಈ ಯೋಜನೆಗೆ ಬೇಕಾದ ಎಲ್ಲಾ ಖರ್ಚು ವೆಚ್ಚಗಳಿಗಾಗಿ ಸಹಾಯಧನವನ್ನು ಬಿಡುಗಡೆ ಮಾಡಲು ಸರ್ಕಾರ ಚಿಂತನೆ ಮಾಡಿದೆ ಎಂದು ಸಹ ತಿಳಿಸಿದ್ದಾರೆ.
ಈ ಯೋಜನೆಯ ಫಲಾನುಭವಿಗಳಾಗಲು ರೈತರು ತಮ್ಮ ಗ್ರಾಮ ಪಂಚಾಯಿತಿ ಅಥವಾ ತಮ್ಮ ವ್ಯಾಪ್ತಿಯಲ್ಲಿ ಬರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿಕೊಟ್ಟು ಮಾಹಿತಿ ಪಡೆದು ಕೇಳಲಾಗುವ ಪೂರಕ ದಾಖಲೆಗಳನ್ನು ಸಲ್ಲಿಸಿ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬಹುದು ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯಡಿ ರೈತನ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಡುವ ಕೆಲಸವನ್ನು ಗ್ರಾಮ ಪಂಚಾಯಿತಿಯು ಕೂಡ ಕೈ ಜೋಡಿಸಲಿದೆ.
ಇನ್ನಿತರ ಖರ್ಚಿಗಾಗಿ ಸಹಾಯಧನವನ್ನು ರೈತನ ಖಾತೆಗೆ ಜಮೆ ಕೂಡ ಮಾಡಲಾಗುತ್ತದೆ. ಇದಕ್ಕೆಲ್ಲ ವ್ಯವಸ್ಥಿತವಾದ ಯೋಜನೆಯನ್ನು ಸರ್ಕಾರ ಸಿದ್ದಪಡಿಸಿಕೊಂಡಿದೆ ಎನ್ನುವ ಮಾಹಿತಿಯನ್ನು ಸಚಿವರು ತಿಳಿಸಿದ್ದಾರೆ. ಈ ಯೋಜನೆಯ ಫಲಾನುಭವಿಗಳಾಗಲು ಇಚ್ಛಿಸುವ ರೈತರು ತಮ್ಮ ಜಮೀನಿನ ಪಹಣಿ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಖಾತೆ ವಿವರ ಸೇರಿದಂತೆ ರೈತಸಂಪರ್ಕ ಕೇಂದ್ರದಲ್ಲಿ ಕೃಷಿಭಾಗ್ಯ ಯೋಜನೆಗಾಗಿ ಕೇಳುವ ಎಲ್ಲಾ ದಾಖಲೆಗಳ ಸಮೇತ ಹೋಗಿ ಈ ಕೂಡಲೇ ಅರ್ಜಿ ಸಲ್ಲಿಸಿ. ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ತಪ್ಪದೇ ಹಂಚಿಕೊಳ್ಳಿ.