ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಕರ್ನಾಟಕ ರಾಜ್ಯದಲ್ಲಿರುವ ಮಹಿಳಾ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಒಂದೇ ಬಾರಿಗೆ ಸುಮಾರು 14,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಕೂಡ ಈ ಹುದ್ದೆಗಳು ಖಾಲಿ ಇರುವುದರಿಂದ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೇಮಕಾತಿ ಮಾಡಿಕೊಳ್ಳಲಾಗುವ ಅಂಗನವಾಡಿ ಸಹಾಯಕಿ, ಅಂಗನವಾಡಿ ಮೇಲ್ವಿಚಾರಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಭರ್ತಿಗಾಗಿ ಈ ನೇಮಕಾತಿ ನಡೆಯುತ್ತಿದೆ. ಈ ಬೃಹತ್ ಸಂಖ್ಯೆಯ ನೇಮಕಾತಿಗೆ ಸರ್ಕಾರ ಈಗ ಹೊರಡಿಸಿರುವ ಅಧಿಸೂಚನೆಯಲ್ಲಿ ಯಾವೆಲ್ಲಾ ಪ್ರಮುಖ ಅಂಶಗಳಿವೆ ಮತ್ತು ಈ ಹುದ್ದೆಗಳನ್ನು ಪಡೆಯಲು ಯಾರು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎನ್ನುವ ವಿವರವನ್ನು ಈ ಅಂಕಣದಲ್ಲಿ ತಿಳಿಸಿ ಕೊಡುತ್ತಿದ್ದೇವೆ.

ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಉದ್ಯೋಗ ಸ್ಥಳ:- ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ
ಒಟ್ಟು ಹುದ್ದೆಗಳ ಸಂಖ್ಯೆ:- 14500+

ಹುದ್ದೆಗಳ ವಿವರ:-
ಅಂಗನವಾಡಿ ಮೇಲ್ವಿಚಾರಕಿ
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ.

ಶೈಕ್ಷಣಿಕ ವಿದ್ಯಾರ್ಹತೆ:-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸದ್ಯಕ್ಕೆ ಈಗ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿರುವ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಇರುವ ಶೈಕ್ಷಣಿಕ ವಿದ್ಯಾರ್ಹತೆಯನ್ನು ಹೇಳುವುದಾದರೆ 8ನೇ ತರಗತಿ, 10ನೇ ತರಗತಿ ಹಾಗೂ 12ನೇ ತರಗತಿ ಮತ್ತು ಪದವಿ ವಿದ್ಯಾಭ್ಯಾಸವನ್ನು ಕರ್ನಾಟಕದಲ್ಲಿ ಮಾನ್ಯತೆ ಪಡೆದಿರುವ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಪೂರೈಸಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:-
● ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು.
● ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು.
● OBC ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 48 ವರ್ಷಗಳು
● SC / ST ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 50 ವರ್ಷಗಳು.

ಆಯ್ಕೆ ವಿಧಾನ:-
● ಅಭ್ಯರ್ಥಿಗಳು ಪಡೆದಿರುವ ಶೈಕ್ಷಣಿಕ ವಿದ್ಯಾರ್ಹತೆ ಆಧಾರದ ಮೇಲೆ ಈ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
● ಆದರೆ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆಯುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:-
● ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಈ ಎಲ್ಲಾ ಹುದ್ದೆಗಳ ಭರ್ತಿಗಾಗಿ ಸರ್ಕಾರ ಶೀಘ್ರವೇ ಮತ್ತೊಂದು ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಆಹ್ವಾನ ಮಾಡುವ ದಿನಾಂಕದ ಬಗ್ಗೆ ಮಾಹಿತಿ ತಿಳಿಸಲಿದೆ.
● ಇದೇ ತಿಂಗಳ ಅಂತ್ಯದೊಳಗೆ ಅರ್ಜಿ ಆಹ್ವಾನದ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅವಕಾಶ ನೀಡುವ ಸಾಧ್ಯತೆ ಇರುತ್ತದೆ ಕನಿಷ್ಠ ಮೊತ್ತದ ಅರ್ಜಿ ಶುಲ್ಕವನ್ನು ವಿಧಿಸಿರುತ್ತದೆ.
● ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಪಡೆಯಲು ಇಚ್ಛೆ ಇರುವವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಹುದ್ದೆಗಳ ಸಂಬಂಧಿತವಾಗಿ ಹೆಚ್ಚಿನ ವಿವರವನ್ನು ಪಡೆದುಕೊಳ್ಳಬಹುದು.

Leave a Comment

%d bloggers like this: