ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಅಲ್ಲಿ ಗುತ್ತಿಗೆ ಆಧಾರದ ಬಿಲ್ ಕಲೆಕ್ಟರ್ ಹುದ್ದೆಗಳು ಖಾಲಿ ಇದ್ದು, ಈಗ ಹೆಸ್ಕಾಂ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲು ನಿರ್ಧರಿಸಿದೆ. ಹೆಸ್ಕಾಂ ಅಲ್ಲಿರುವ ಮೈಕ್ರೋ ಫೀಡರ್ ಫ್ರಾಂಚೈಸಿ ಗಳಿಂದ ಬಿಲ್ ವಿತರಣೆ ಮತ್ತು ಕಲೆಕ್ಟ್ ಮಾಡುವ ಬಿಲ್ ಕಲೆಕ್ಟರ್ ಕೆಲಸಗಳಿಗೆ ಈ ನೇಮಕಾತಿ ನಡೆಸಲಾಗುತ್ತದೆ.
ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸುಮಾರು ನೂರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗಾಗಿ ಯೋಜನೆ ಹಾಕಿಕೊಂಡಿದ್ದು ಈ ಭಾಗದಲ್ಲಿ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಪ್ರಕಟಣೆಯಲ್ಲಿ ತಿಳಿಸಿರುವ ಪ್ರಕಾರ ಅರ್ಹತೆಯನ್ನು ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳಾದ ಹುದ್ದೆಗಳ ವಿವರ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ಇತರ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ದಿನಾಂಕ. ಅರ್ಜಿ ಶುಲ್ಕ ಇನ್ನು ಮುಂತಾದ ವಿಷಯಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸಿ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ.
ಸಂಸ್ಥೆ:- ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM).
ಹುದ್ದೆ:- ಬಿಲ್ ಕಲೆಕ್ಷರ್ (ಮೈಕ್ರೋ ಫೀಡರ್ ಫ್ರಾಂಚೈಸಿ)
ಹುದ್ದೆಯ ಬಗೆ:- ಗುತ್ತಿಗೆ ಆಧಾರದ ಹುದ್ದೆಗಳು.
ಒಟ್ಟು ಹುದ್ದೆಗಳ ಸಂಖ್ಯೆ:- 100+
ವೇತನ ಶ್ರೇಣಿ:- ಹುದ್ದೆಗೆ ಅನುಸಾರವಾಗಿ ಮಾಸಿಕವಾಗಿ ಕನಿಷ್ಠ 12,000 ದಿಂದ ವೇತನ ಆರಂಭವಾಗುತ್ತದೆ.
ಉದ್ಯೋಗ ಸ್ಥಳ:-
● ಉತ್ತರ ಕನ್ನಡ
● ಹಾವೇರಿ
● ಬೆಳಗಾವಿ
● ಬಾಗಲಕೋಟೆ
● ವಿಜಯಪುರ
● ಹುಬ್ಬಳ್ಳಿ
● ಧಾರವಾಡ ಜಿಲ್ಲೆ
ವಯೋಮಿತಿ:-
● ಕನಿಷ್ಠ 18 ವರ್ಷಗಳು
● ಗರಿಷ್ಠ 40 ವರ್ಷಗಳು
ಶೈಕ್ಷಣಿಕ ವಿದ್ಯಾರ್ಹತೆ:- ಹೆಸ್ಕಾಂ ಹೊರಡಿಸಿರುವ ಪ್ರಕಟಣೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವವರು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC ಅಥವಾ PUC ಅಥವಾ ತತ್ಸಮನವಾದ ವಿದ್ಯಾರ್ಥಿಯನ್ನು ಹೊಂದಿರಬೇಕು.
ಇನ್ನಿತರ ಪ್ರಮುಖ ಅರ್ಹತೆಗಳು:-
● ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾಲಿ ಇದೆಯೋ ಆ ಗ್ರಾಮದಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯ ಆದ್ಯತೆ ಇರುತ್ತದೆ.
● ಗ್ರಾಮ ಪಂಚಾಯಿತಿ ಅಧ್ಯಕ್ಷರು ಒಪ್ಪಿದರೆ ಮಾತ್ರ ಬೇರೆ ಭಾಗದಿಂದ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ.
● ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವನ್ನು ನಡೆಸದೆ ನೇರ ನೇಮಕಾತಿ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
● ಆಯ್ಕೆಯಾದ ಅಭ್ಯರ್ಥಿಗಳು ತಪ್ಪದೆ ವ್ಯಾಸಂಗ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.
● ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿ ಆಗಿಲ್ಲ ಆದರೆ ಜುಲೈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಅರ್ಜಿ ಆಹ್ವಾನ ಮಾಡುವ ಸಾಧ್ಯತೆ ಇರುತ್ತದೆ, ಅಷ್ಟರ ಒಳಗೆ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:-
● ಆಧಾರ್ ಕಾರ್ಡ್
● ಶೈಕ್ಷಣಿಕ ಅಂಕ ಪಟ್ಟಿಗಳು
● ವ್ಯಾಸಂಗ ಪ್ರಮಾಣ ಪತ್ರ
● ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ
● ಇತ್ತೀಚಿನ ಭಾವಚಿತ್ರ.