ಕರ್ನಾಟಕ ಅರಣ್ಯ ಇಲಾಖೆಯು ಕಳೆದ ನವೆಂಬರ್ ತಿಂಗಳಿನಲ್ಲಿ ಹೊಸ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಿತ್ತು. ತನ್ನಲ್ಲಿ ಖಾಲಿ ಇರುವ ವಿವಿಧ ವೃತ್ತಗಳ ಸುಮಾರು 500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಹಾಗೂ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು ಏನು.?
ಎಲ್ಲಿ ಹುದ್ದೆಗಳು ಖಾಲಿ ಇದೆ ? ವಯೋಮಿತಿ ಎಷ್ಟಿರಬೇಕು? ಆಯ್ಕೆ ವಿಧಾನ ಹೇಗೆ ನಡೆಯುತ್ತದೆ? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವುದು ಸೇರಿದಂತೆ, ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಯನ್ನು ಕೂಡ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಅದರ ಪ್ರಕಾರವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನು ಮೂರು ದಿನಗಳು ಬಾಕಿ ಉಳಿದಿದ್ದು ಆಕಾಂಕ್ಷಿಗಳು ಇದರ ಸದಪಯೋಗ ಪಡಿಸಿಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಈ ಅಂಕಣದಲ್ಲಿ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಅಧಿಸೂಚನೆಗೆ ಸಂಬಂಧಿಸಿದ ಕೆಲಸ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಯ ಹೆಸರು:- ಗಸ್ತು ಅರಣ್ಯ ಪಾಲಕ (ಅರಣ್ಯ ರಕ್ಷಕರು)
ಒಟ್ಟು ಹುದ್ದೆಗಳ ಸಂಖ್ಯೆ:- 540
ಉದ್ಯೋಗ ಸ್ಥಳ:- ಕರ್ನಾಟಕ ರಾಜ್ಯಾದ್ಯಂತ….
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.18,600 – 32,600 ಮತ್ತು ಪಿಂಚಣಿ ಸೌಲಭ್ಯ ಹಾಗೂ ಇನ್ನಿತರ ವಿಶೇಷ ಭತ್ಯೆಗಳನ್ನು ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:- ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ PUC ಉತ್ತೀರ್ಣರಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 27 ವರ್ಷಗಳು
ವಯೋಮಿತಿ ಸಡಿಲಿಕೆ:-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷಗಳು
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು
ಅರ್ಜಿ ಶುಲ್ಕ:-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ.120
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳಿಗೆ ರೂ.70
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಪುರುಷ ಅಭ್ಯರ್ಥಿಗಳಿಗೆ ರೂ.220
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ರೂ.120
ಅರ್ಜಿ ಸಲ್ಲಿಸುವ ವಿಧಾನ:-
* https://kfdrecruitment.in/ ವೆಬ್ಸೈಟ್ಗೆ ಭೇಟಿ ನೀಡಿ ಅಜ್ಜಿ ಫಾರಂ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಕೇಳಲಾಗಿರುವ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
* ನಿಮಗೆ ಅನ್ವಯವಾಗುವ ಅರ್ಜಿ ಶುಲ್ಕ ಪಾವತಿಸಿ ಇ-ರಸೀದಿ ಪಡೆದುಕೊಳ್ಳಿ ಹಾಗೆ ಅರ್ಜಿ ಸಲ್ಲಿಕೆ ಪೂರ್ತಿಗೊಳಿಸಿ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ
ಆಯ್ಕೆ ವಿಧಾನ:-
* ಲಿಖಿತ ಪರೀಕ್ಷೆ
* ದೈಹಿಕ ಪರೀಕ್ಷೆ
* ಸಂದರ್ಶನ
* ದಾಖಲೆಗಳ
ಪ್ರಮುಖ ದಿನಾಂಕಗಳು:-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30 ಡಿಸೆಂಬರ್, 2023.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 5 ಜನವರಿ, 2024.
ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
* ಆಧಾರ್ ಕಾರ್ಡ್
* ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಗ್ರಾಮೀಣ ಅಭ್ಯರ್ಥಿ ಮತ್ತು ಕನ್ನಡ ಮಾಧ್ಯಮ ಪ್ರಮಾಣ ಪತ್ರ * ಇನ್ನಿತರ ಪ್ರಮುಖ ದಾಖಲೆಗಳು.