ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಮೂಡಬಿದರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ತನ್ನ ಅಂಗ ಸಂಸ್ಥೆಯಾದ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ (Mudabidre Alvas Kannada Meduim School) ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಸತಿ ಊಟ ಅನುಕೂಲತೆ ಸಹಿತ ಸಂಪೂರ್ಣ ಉಚಿತ ಶಿಕ್ಷಣ (free education) ನೀಡಲು ನಿರ್ಧರಿಸಿದೆ.
ಇದಕ್ಕಾಗಿ ಅರ್ಜಿ ಕೂಡ ಆಹ್ವಾನ ಮಾಡಿದ್ದು ಇದರ ಸಂಬಂಧಿತ ಪ್ರಕಟಣೆಯನ್ನು ಹೊರಡಿಸಿದೆ. ಯಾರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಮತ್ತು ಆ ವಿದ್ಯಾರ್ಥಿಗಳ ಆಯ್ಕೆಗೆ ಇರುವ ಮಾನದಂಡಗಳೇನು? ಆಯ್ಕೆ ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ ಮತ್ತು ಎಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವುದರ ಕುರಿತು ಕೆಲ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇನೆ. ಇದೊಂದು ಉಪಯುಕ್ತ ಮಾಹಿತಿ ಆಗಿದ್ದು ತಪ್ಪದೆ ಈ ಮಾಹಿತಿಯನ್ನು ಹೆಚ್ಚಿನ ಜನರೊಂದಿಗೆ ಶೇರ್ ಮಾಡಿ.
ಅರ್ಜಿ ಸಲ್ಲಿಸಲು ಅರ್ಹತೆಗಳು:-
* ಪ್ರಸಕ್ತ ಸಲಿನಲ್ಲಿ 5ನೇ, 6ನೇ 7ನೇ ಮತ್ತು 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಕ್ರಮವಾಗಿ 6ನೇ, 7ನೇ, 8ನೇ ಮತ್ತು 9ನೇ ತರಗತಿ ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
* ಶಾಲಾ ಮುಖ್ಯಸ್ಥರಿಂದ ಖಚಿತಪಡಿಸಿಕೊಂಡ SATS-ID
* ಆಧಾರ್ ಕಾರ್ಡ್
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ
* ಇನ್ನಿತರ ಪ್ರಮುಖ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತರು ನೇರವಾಗಿ www.alvasschool.com ವೆಬ್ಸೈಟ್ಗೆ ಭೇಟಿ ನೀಡಿ
* ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ತೆರೆದು ಕೇಳಲಾಗಿರುವ ವಿದ್ಯಾರ್ಥಿಯ ಸಂಬಂಧಿತ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ
* ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಮತ್ತು ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿಯನ್ನು ಪಡೆದುಕೊಳ್ಳಿ.
* ಒಂದು ಪ್ರತಿಯನ್ನು ಅಧ್ಯಕ್ಷರು, ಆಳ್ವ ಶಿಕ್ಷಣ ಪ್ರತಿಷ್ಠಾನ(ರಿ), ಮೂಡುಬಿದಿರೆ, ದಕ್ಷಿಣ ಕನ್ನಡ 5742 27 ಇವರಿಗೆ ಕಳುಹಿಸಿಕೊಡಿ.
ಆಯ್ಕೆ ವಿಧಾನ:-
* ಮೂರು ಹಂತಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
* ಮೊದಲನೇ ಹಂತದಲ್ಲಿ OMR ಶೀಟ್ ಆಧಾರಿತ ಪರೀಕ್ಷೆ ಇದರಲ್ಲಿ ಹೆಚ್ಚಿನ ಅಂಕ ಪಡೆದವರಿಗೆ ಎರಡನೇ ಹಂತದಲ್ಲಿ ಬರವಣಿಗೆ ಕುರಿತು ಚಟುವಟಿಕೆ ನೀಡಿ ಹೆಚ್ಚಿನ ಅಂಕ ಪಡೆದವರನ್ನು ಆರಿಸಿ ಮೂರನೇ ಹಂತದಲ್ಲಿ ವಿದ್ಯಾರ್ಥಿಯನ್ನು ನೇರವಾಗಿ ಸಂದರ್ಶನ ಮಾಡಿ ಸೆಲೆಕ್ಟ್ ಮಾಡಲಾಗುವುದು.
* ವಿದ್ಯಾರ್ಥಿಗಳು ಪ್ರಸ್ತುತವಾಗಿ ಓದುತ್ತಿರುವ ವಿಷಯಗಳು ಹಾಗೂ ಮಾನಸಿಕ ಸಾಮರ್ಥ್ಯದ ಕುರಿತು ಪ್ರಶ್ನೆಗಳು ಇರುತ್ತವೆ
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾದವರಿಗಷ್ಟೇ ವಸತಿ ಊಟ ಸಮೇತ ಉಚಿತ ಶಿಕ್ಷಣ ಸೌಲಭ್ಯ ದೊರೆಯುವುದು
* ಈ ಮೂರು ಹಂತಗಳ ಪರೀಕ್ಷೆಗಳು ಒಂದೇ ದಿನ ನಡೆಯಲಿವೆ
ಮತ್ತು ಆ ದಿನ ತಪ್ಪದೇ ವಿದ್ಯಾರ್ಥಿಯು ಅರ್ಜಿ ಸಲ್ಲಿಸಿರುವ ಪ್ರತಿ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆ ಪ್ರತಿಗಳನ್ನು ತೆಗೆದುಕೊಂಡು ಹಾಜರಾಗಬೇಕು
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15 ಫೆಬ್ರವರಿ, 2024
* ಅರ್ಜಿ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಕೊನೆಯ ದಿನಾಂಕ – 15 ಫೆಬ್ರವರಿ, 2024
* ಪ್ರವೇಶಾತಿ ಪರೀಕ್ಷೆ ನಡೆಯುವ ದಿನಾಂಕ – 13.03.2024
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
7026530137
7026530263
9071705131
8904817776
ವೆಬ್ಸೈಟ್ ವಿಳಾಸ: www.alvasschools.com