ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ (KBOCWWB) ವತಿಯಿಂದ ನೋಂದಾಯಿತರಾಗಿರುವ ಎಲ್ಲಾ ಕಾರ್ಮಿಕರಿಗೂ ಕೂಡ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಈಗಾಗಲೇ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ (Labour Card) ಹೊಂದಿರುವಂತಹ ಕಾರ್ಮಿಕರು ಸರ್ಕಾರದಿಂದ ಹತ್ತಾರು ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ.
ಕಾರ್ಮಿಕರಿಗೆ ಮಾತ್ರವಲ್ಲದೇ ಕಾರ್ಮಿಕರ ಕುಟುಂಬಕ್ಕೂ ಕೂಡ ಈ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಆ ಪ್ರಕಾರವಾಗಿ ಕಾರ್ಮಿಕರ ಮಕ್ಕಳಿಗೆ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನವನ್ನು ಕೂಡ ನೀಡಲಾಗುತ್ತದೆ, ಈ ಮಕ್ಕಳ ಭವಿಷ್ಯವನ್ನು ಉಜ್ವಲ ಗೊಳಿಸುವುದು ಸರ್ಕಾರದ ಗುರಿಯಾಗಿದ್ದು ಉಚಿತ ಶಾಲಾ ಕಿಟ್, ಉಚಿತ ಲ್ಯಾಪ್ಟಾಪ್ ವಿತರಣೆ ಜೊತೆಗೆ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷವೂ ಶೈಕ್ಷಣಿಕ ಖರ್ಚು ವೆಚ್ಚಗಳಿಗಾಗಿ ವಿದ್ಯಾರ್ಥಿ ವೇತನ (Scholarship) ನೀಡಿ ಸಹಾಯ ಮಾಡಲಾಗುತ್ತದೆ.
ಈ ಸುದ್ದಿ ಓದಿ:- PDO ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ 70,850 ಆಸಕ್ತರು ಅರ್ಜಿ ಸಲ್ಲಿಸಿ.!
ಅಂತೆಯೇ 2023-24ನೇ ಸಾಲಿನಲ್ಲಿ 8ನೇ ತರಗತಿಯಿಂದ ವೃತ್ತಿಪರ ಕೋರ್ಸ್ ಗಳ ವರೆಗೆ ವಿದ್ಯಾಭ್ಯಾಸ ಮಾಡುತ್ತಿರುವಂತಹ ಕಾರ್ಮಿಕರ ಮೊದಲ ಎರಡು ಮಕ್ಕಳು ಈ ವಿದ್ಯಾರ್ಥಿ ವೇತನಗಳನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಮಂಡಳಿ ವತಿಯಿಂದ ಪತ್ರಿಕಾ ಪ್ರಕಟಣೆ (Notification) ಕೂಡ ಹೊರಡಿಸಲಾಗಿದ್ದು ವೆಬ್ ಸೈಟ್ ನಲ್ಲೂ ಕೂಡ ಮಾಹಿತಿ ಹಂಚಿಕೊಳ್ಳಲಾಗಿದೆ.
ಗರಿಷ್ಠ ರೂ.10,000 ವರೆಗೂ ತಮ್ಮ ಕೋರ್ಸ್ ಗಳಿಗೆ ಅನುಗುಣವಾಗಿ ಈ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ಎಲ್ಲಿ ಅರ್ಜಿ ಸಲ್ಲಿಸಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಏನೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.
ಈ ಸುದ್ದಿ ಓದಿ:-ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷ ರೂ ಸಾಲ.! ಆಸಕ್ತರು ಅರ್ಜಿ ಸಲ್ಲಿಸಿ.!
ಅರ್ಜಿ ಸಲ್ಲಿಸಲು ಕಂಡಿಷನ್ ಗಳು:-
* ಮಂಡಳಿಯಲ್ಲಿ ನೋಂದಾಯಿಸಿಕೊಂಡು ಲೇಬರ್ ಕಾರ್ಡ್ ಹೊಂದಿರುವಂತಹ ಕಾರ್ಮಿಕನಾಗಿರಬೇಕು ಆತ ಪಡೆದಿರುವ ಲೇಬರ್ ಕಾರ್ಡ್ ನಲ್ಲಿ ವಿದ್ಯಾರ್ಥಿಯ ಹೆಸರು ಕೂಡ ಇರಬೇಕು
* ಕಾರ್ಮಿಕನು ತನ್ನ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿ NPCI ಮ್ಯಾಪಿಂಗ್ ಮಾಡಿಸಿರಬೇಕು
* ನೋಂದಣಿಯಾಗಿರುವ ಶಾಲಾ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
* 8ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಅಭ್ಯಾಸ ಮಾಡುತ್ತಿರುವ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು
* ಒಂದು ವೇಳೆ ಈಗಾಗಲೇ ಬೇರೆ ಯಾವುದಾದರೂ ವರ್ಗಕ್ಕೆ ಸೇರಿದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಈ ಯೋಜನೆ ಅನ್ವಯಿಸುವುದಿಲ್ಲ.
ಸಿಗುವ ಸಹಾಯಧನ:-
* 8 – 10ನೇ ತರಗತಿ – ರೂ.3,000
* PUC / ITI / Diploma / TCH – ರೂ.4,000
* ಪದವಿ ಶಿಕ್ಷಣ – ರೂ.5,000
* ಸ್ನಾತಕೋತ್ತರ ಪದವಿ – ರೂ.7,000
* ವೃತ್ತಿಪರ ಶಿಕ್ಷಣ (Medical / Engineering / LLB) – ರೂ.10,000
ಅರ್ಜಿ ಸಲ್ಲಿಸುವ ವಿಧಾನ:-
* ಹತ್ತಿರದ ಯಾವುದೇ ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಅಥವಾ ಸೇವಾ ಸಿಂಧು ಕೇಂದ್ರಗಳಿಗೆ ಹೋಗಿ ದಾಖಲೆಗಳನ್ನು ನೀಡಿ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ರೆಫರೆನ್ಸ್ ನಂಬರ್ ಪಡೆದುಕೊಳ್ಳಿ, ಇದರಿಂದ ಅರ್ಜಿ ಸ್ಟೇಟಸ್ ಚೆಕ್ ಮಾಡಬಹುದು
* 31 ಮೇ, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು ಈ ಸಮಯದ ಒಳಗಡೆ ಸಲ್ಲಿಕೆಯಾದ ಅರ್ಜಿಗಳನ್ನು ಮಾತ್ರ ಮಂಡಳಿ ಸ್ವೀಕರಿಸುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
* ಇಲಾಖೆ ವೆಬ್ಸೈಟ್ – https://kbocwwb.karnataka.gov.in/schemesHomePage
* ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ – https://ssp.postmatric.karnataka.gov.in/homepage.aspx