ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಉದ್ಯೋಗ (Karnataka government job notification) ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಿಹಿ ಸುದ್ದಿ. ಅದೇನೆಂದರೆ, ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಚಾಲಕರ ಹುದ್ದೆ (Driver post) ಆಗಿರುವ ಕಾರಣ ಕರ್ನಾಟಕದಲ್ಲಿರುವ ಪುರುಷ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ಹುದ್ದೆಗಳಿಗೆ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿತ್ತು ಇದರ ಜೊತೆಗೆ ಕೆಲ ವಿಶೇಷ ಅರ್ಹತೆಗಳನ್ನು ಕೂಡ ಕೇಳಲಾಗಿದೆ. ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಹೊರಡಿಸಿರುವಂತೆ ಅರ್ಜಿ ಸಲ್ಲಿಸಿ ಹುದ್ದೆ ಹೊಂದಬಹುದು. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಅಂಕಣವನ್ನು ಕೊನೆಯವರೆಗೂ ಓದಿ.
ಸೆಪ್ಟೆಂಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಹಣ ಬಂದ್, ಆಹಾರ ಇಲಾಖೆ ಸಚಿವ K.H. ಮುನಿಯಪ್ಪ ಅವರಿಂದ ಸ್ಪಷ್ಟನೆ.!
ಹುದ್ದೆಯ ವಿಧ:- ಕರ್ನಾಟಕ ಸರ್ಕಾರದ ಹುದ್ದೆಗಳು.
ಉದ್ಯೋಗ ಸ್ಥಳ:- ಕರ್ನಾಟಕ ವಿಧಾನಸಭಾ ಸಚಿವಾಲಯ.
ಹುದ್ದೆ ಹೆಸರು:- ಚಾಲಕರು (ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳು).
ಒಟ್ಟು ಹುದ್ದೆಗಳ ಸಂಖ್ಯೆ:- 03.
ಉದ್ಯೋಗ ಸ್ಥಳ:- ಬೆಂಗಳೂರು.
ವೇತನ ಶ್ರೇಣಿ:-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 42,000 ವೇತನ ಸಿಗುತ್ತದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸೂಚಿಸಿರುವ ಅರ್ಹತೆಗಳು:-
● ಶೈಕ್ಷಣಿಕ ವಿದ್ಯಾರ್ಹತೆಯಾಗಿ 7ನೇ ತರಗತಿಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
● ಇತ್ತೀಚಿನ ವಾಹನ ಚಾಲನ ಪರವಾನಗಿ ಹೊಂದಿರಬೇಕು.
● ಕಾರು ಚಾಲನೆಯಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:-
● ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ – 1 ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಾನ ಸಡಿಲಿಕೆ.
● 2A,2B,3A,3B ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಾನ ಸಡಿಲಿಕೆ.
LIC ಈ ಯೋಜನೆಯಲ್ಲಿ ಒಂದು ಬಾರಿ ಹೂಡಿಕೆ ಮಾಡಿದ್ರೆ ಸಾಕು, ಪ್ರತಿ ತಿಂಗಳು ಸಿಗಲಿದೆ 12,500/-
ಅರ್ಜಿ ಸಲ್ಲಿಸುವ ವಿಧಾನ:-
● ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸರ್ಕಾರಿ ಮುದ್ರಣಾ ಮಳಿಗೆಗಳಲ್ಲಿ ಅರ್ಜಿ ಫಾರಂ ಪಡೆದು ಅದರಲ್ಲಿ ನಮೂನೆ – 1ರ ದ್ವಿಪ್ರತಿಯಲ್ಲಿ ವಿವರಗಳನ್ನು ಭರ್ತಿ ಮಾಡಬೇಕು.
● ಅಧಿಸೂಚನೆಯಲ್ಲಿ ಕೇಳಲಾದ ಅರ್ಹತೆಗಳಾದ ಶೈಕ್ಷಣಿಕ ವಿದ್ಯಾರ್ಹತೆ, ಚಾಲನ ಪರವಾನಗಿ ಮತ್ತು ಚಾಲನೆಯಲ್ಲಿ ಅನುಭವ ಇದೆ ಎನ್ನುವುದಕ್ಕೆ ಸಂಬಂಧಪಟ್ಟ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು.
● ಇವುಗಳನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಕೂಡ ಸಲ್ಲಿಸಬಹುದು.
ಅರ್ಜಿ ಶುಲ್ಕ:-
● ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
● ಉಳಿದ ಸಾಮಾನ್ಯ ವರ್ಗದ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಕ್ರಾಸ್ ಮಾಡಿದ 500ರ ಇಂಡಿಯನ್ ಪೋಸ್ಟಲ್ ಆರ್ಡರ್ ಖರೀದಿಸಿ ಈ ಕೆಳಗೆ ತಿಳಿಸುವ ವಿಳಾಸಕ್ಕೆ ಅರ್ಜಿ ಫಾರಂ ಜೊತೆ ಅರ್ಜಿ ಸಲ್ಲಿಸಲ ಇರುವ ಕಡೆಯ ದಿನಾಂಕದ ಒಳಗೆ ಕಳುಹಿಸಿಕೊಡಬೇಕು.
ವಿಳಾಸ:-
ಕಾರ್ಯದರ್ಶಿ,
ಕರ್ನಾಟಕ ವಿಧಾನಸಭೆ ಸಚಿವಾಲಯ,
ಮೊದಲನೇ ಮಹಡಿ ವಿಧಾನಸೌಧ,
ಬೆಂಗಳೂರು – 560001.
ಆಯ್ಕೆ ವಿಧಾನ:-
● ಲಿಖಿತ ಪರೀಕ್ಷೆ
● ಸಂದರ್ಶನ
● ಡ್ರೈವಿಂಗ್ ಟೆಸ್ಟ್
● ದಾಖಲೆ ಪರಿಶೀಲನೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು:–
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 05.08.2023.
● ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಕಳುಹಿಸಿ ಕೊಡಲು ಕಡೆಯ ದಿನಾಂಕ:- 08.09.2023