ವಿದ್ಯಾರ್ಥಿಗಳಿಗೆ (Students) ತಮ್ಮ ಶೈಕ್ಷಣಿಕ ಚಟುವಟಿಕೆಗೆ ಹಣಕಾಸಿನ ಅವಶ್ಯಕತೆ ಇರುತ್ತದೆ, ವರ್ಷಪೂರ್ತಿ ಮಕ್ಕಳ ಈ ಖರ್ಚಿಗೆ ಹಣ ಹೊಂದಿಸಲು ಪೋಷಕರಿಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೆಲವು ಯೋಜನೆಗಳನ್ನು ಮೂಲಕ ವಿದ್ಯಾರ್ಥಿ ವೇತನವನ್ನು ನೀಡುತ್ತವೆ.
ಸರ್ಕಾರೇತರವಾಗಿಯೂ ಅನೇಕ ಸಂಸ್ಥೆಗಳು ಹಲವು ವಿಭಾಗಗಳಡಿ ವಿದ್ಯಾರ್ಥಿ ವೇತನ ನೀಡುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಪಡೆಯಲು ನೀಡಲಾಗಿರುವ ಮನದಂಡಗಳನ್ನು ಪೂರೈಸುವ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು, ಪ್ರತಿ ವರ್ಷವೂ ಕೂಡ ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಸರ್ಕಾರದಿಂದ ಸ್ಕಾಲರ್ಶಿಪ್ ಪಡೆಯುತ್ತಾರೆ.
ಸದ್ಯಕ್ಕೆ ರಾಜ್ಯದಲ್ಲಿ SSP Schloarship-2023 ನಡಿ ಪ್ರಿಮೆಟ್ರಿಕ್ ವಿದ್ಯಾಭ್ಯಾಸ (pre-metric education) ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಅರ್ಜಿ ಸಲ್ಲಿಸುವುದರ ಕುರಿತು ಪ್ರಮುಖ ಅಂಶಗಳನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ, ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಪ್ರಯೋಜನ ಪಡೆದುಕೊಳ್ಳಿ.
ಯೋಜನೆ ಹೆಸರು:- ರಾಷ್ಟ್ರೀಯ ವಿದ್ಯಾರ್ಥಿ ವೇತನ (SSP Scholarship 2023-24)
ಬೇಕಾಗುವ ದಾಖಲೆಗಳು:-
● ಅರ್ಜಿದಾರರ ಮತ್ತು ಪೋಷಕರ ಆಧಾರ್ ಕಾರ್ಡ್
● ಶಾಲಾ ಶುಲ್ಕ ರಶೀದಿ, ಶಾಲೆಯ ನೋಂದಣಿ ಸಂಖ್ಯೆ
● ಕಡ್ಡಾಯಾಗಿ ವಿದ್ಯಾರ್ಥಿ SATS ID ಪಡೆದಿರಬೇಕು, ಇದನ್ನು ಶಾಲೆಗಳಲ್ಲಿ ಕೊಡುತ್ತಾರೆ.
● ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
● ಪಡಿತರ ಚೀಟಿ ಸಂಖ್ಯೆ
● EWS ಪ್ರಮಾಣಪತ್ರ
● ಜಾತಿ ಮತ್ತು ಆದಾಯ ಪ್ರಮಾಣಪತ್ರ
● ಸಕ್ಷಮ ಪ್ರಾಧಿಕಾರದಿಂದ ನೀಡಿದ ಅಂಗವಿಕಲ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ)
ನಿಮಗೆ ಇನ್ನು ಸ್ಕಾಲರ್ಶಿಪ್ ಹಣ ರೂ.10,000 ಬಂದಿಲ್ವಾ.? ನಿಮ್ಮ ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿ.!
ಮನದಂಡಗಳು:-
● ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಹಿಂದುಳಿದ ವರ್ಗಗಳ ಇಲಾಖೆ, ವಿಕಲಚೇತನರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ, ರೈತನಿಧಿ ಮತ್ತು ಸೈನಿಕ ವೆಲ್ಫೇರ್ ಡಿಪಾರ್ಟ್ಮೆಂಟ್ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳು ಮಾತ್ರ 2023-24 ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
● 1 ರಿಂದ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುವ ದಾಖಲಾಗಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
● ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
● ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷದಿಂದ 10 ಲಕ್ಷದ ನಡುವೆ ಇರಬೇಕು.
3. ರಕ್ಷಣಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪೋಷಕರು ಸೇನೆ, ನೌಕಾಪಡೆ ಅಥವಾ ವಾಯುಪಡೆಯಲ್ಲಿರಬೇಕು ಅಥವಾ JCO/NCO ಆಗಿ ಕೆಲಸ ಮಾಡಿರಬೇಕು, ಅದಕ್ಕೆ ದಾಖಲೆಗಳನ್ನು ಒದಗಿಸಬೇಕು.
ಹೆರಿಗೆ ನಂತರ ಹೊಟ್ಟೆ ಬೊಜ್ಜು ಕರಗಿಸುವ ಸುಲಭ ವಿಧಾನ..!
ಅರ್ಜಿ ಸಲ್ಲಿಸುವ ವಿಧಾನ:-
● https://ssp.karnataka.giv.in/ ಗೆ ವೆಬ್ ಸೈಟ್ ಗೆ ಭೇಟಿ ಕೊಡಬೇಕು.
● ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
● ವಿದ್ಯಾರ್ಥಿಯ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಲಾಗಿರುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಸಲ್ಲಿಕೆ ಪೂರ್ತಿ ಆದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-
ಈಗಾಗಲೇ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಪ್ರಾರಂಭ ಆಗಿದೆ. ಈ ಮೇಲೆ ತಿಳಿಸಿದ ಎಲ್ಲಾ ನಿಗಮಗಳಿಂದ ಕೂಡ SSP Scholarship ಗೆ ಅಪ್ಲೈ ಮಾಡಲು 20 ಅಕ್ಟೋಬರ್, 2023 ಕೊನೆಯ ದಿನಾಂಕವಾಗಿದೆ.