ಸರ್ಕಾರಿ ಉದ್ಯೋಗ ಬಯಸುತ್ತಿರುವವರಿಗೆ ಕೇಂದ್ರ ಸರ್ಕಾರದ ಕಡೆಯಿಂದ ಸಿಹಿ ಸುದ್ದಿ ಒಂದಿದೆ. ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL Recruitment) ನಲ್ಲಿ ಬೃಹತ್ ಉದ್ಯೋಗವಕಾಶ ಸಿಗುತ್ತಿದ್ದು ಆಸಕ್ತಿ ಇರುವ ಎಲ್ಲಾ ಅರ್ಹ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಪ್ರಯತ್ನಿಸಬಹುದಾಗಿದೆ. ಇದಕ್ಕೆ ಸಂಬಂಧಿಸಿದ ಪ್ರಕಟಣೆಯೊಂದನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ BSNL ಪ್ರಕಟಿಸಿದ್ದು.
ನಾವು ಸಹ ಈ ಲೇಖನದಲ್ಲಿ ಅರ್ಜಿ ಸಲ್ಲಿಸಲು ಆಸಕ್ತಿ ಇರುವವರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ನೇಮಕಾತಿ ಕುರಿತಂತೆ ನೋಟಿಫಿಕೇಶನ್ ನಲ್ಲಿ ಇರುವ ಪ್ರಮುಖ ಅಂಶಗಳ ಬಗ್ಗೆ ತಿಳಿಸುತ್ತಿದ್ದೇವೆ. ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಅನ್ನೋದನ್ನ ನಿಮ್ಮ ಮೊಬೈಲ್ ಮೂಲಕವೇ ಈ ರೀತಿ ಚೆಕ್ ಮಾಡಿ.!
ನೇಮಕಾತಿ ಸಂಸ್ಥೆ:- ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL)
ಹುದ್ದೆ ಹೆಸರು:- ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 558 ಹುದ್ದೆಗಳು
ಹುದ್ದೆಗಳ ವಿವರ:-
* ಟೆಲಿಕಾಂ ಆಪರೇಶನ್ಸ್ – 450
* ಫೈನಾನ್ಸ್ – 84
* ಸಿವಿಲ್ – 13
* ಎಲೆಕ್ಟ್ರಿಕಲ್ – 11
ಉದ್ಯೋಗ ಸ್ಥಳ:- ಕರ್ನಾಟಕ ರಾಜ್ಯವು ಸೇರಿದಂತೆ ದೇಶದ ವಿವಿಧ ಕಡೆ…
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.24,900 ರಿಂದ ರೂ.50,500 ಇರುತ್ತದೆ.
ಈ ಸುದ್ದಿ ಓದಿ:- ಸಾವಯವ ಕೃಷಿ ಅನುಸರಿಸಿ ಒಂದು ಎಕರೆಯಲ್ಲಿ ಕಾಶ್ಮೀರಿ ಆಪಲ್ ಬೆಳೆದು ಸಕ್ಸಸ್ ಕಂಡ ರೈತ, ಇವರ ಬೆಳೆಗೆ ಎಲ್ಲಿಲ್ಲದ ಬೇಡಿಕೆ ಡೀಟೈಲ್ಸ್ ಇಲ್ಲಿದೆ ನೋಡಿ.!
ಶೈಕ್ಷಣಿಕ ವಿದ್ಯಾರ್ಹತೆ:-
* ಟೆಲಿಕಾಂ ಆಪರೇಶನ್ಸ್ ನಲ್ಲಿ EEE / ECE / CSE / IT / ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ BE / B.Tech ಪದವಿ ಪಡೆದಿರಬೇಕು
* ಫೈನಾನ್ಸ್‌ಗೆ CA, CMA ವಿದ್ಯಾರ್ಹತೆ ಪಡೆದಿರಬೇಕು
* ಸಿವಿಲ್‌ಗೆ ಸಿವಿಲ್ ಎಂಜಿನಿಯರಿಂಗ್ನಲ್ಲಿ BE / B.Tech & ಎಲೆಕ್ಟ್ರಿಕಲ್‌ಗೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ BE /B.Tech ಪೂರ್ಣಗೊಳಿಸಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷಗಳು
ವಯೋಮಿತಿ ಸಡಿಲಿಕೆ:-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ – 1ರ ಅಭ್ಯರ್ಥಿಗಳಿಗೆ 05 ವರ್ಷಗಳು
* OBC ಅಭ್ಯರ್ಥಿಗಳಿಗೆ 03
ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ವಿನಾಯಿತಿ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:-
* BSNL ಅಧಿಕೃತ ವಿಳಾಸಕ್ಕೆ ಭೇಟಿ ಕೊಟ್ಟು ಅಧಿಸೂಚನೆಯನ್ನು ಒಮ್ಮೆ ಗಮನವಿಟ್ಟು ಓದಿ
ವೆಬ್ ಸೈಟ್ ವಿಳಾಸ: bsnl.co.in
* ಅರ್ಜಿ ಸಲ್ಲಿಸುವುದಕ್ಕೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಸ್ವ ವಿವರಗಳನ್ನು ಸರಿಯಾಗಿ ತುಂಬಿಸಿ, ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ಪೂರಕ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಿ ದೃಢೀಕರಿಸಿ.
* ಅರ್ಜಿ ಶುಲ್ಕ ಪಾವತಿ ಮಾಡಿ ಇ-ರಸೀದಿ ಪಡೆಯಿರಿ
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ ಇದು ಭವಿಷ್ಯದಲ್ಲಿ ಅನುಕೂಲಕ್ಕೆ ಬರುತ್ತದೆ
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೂ ಕೂಡ ಲಿಖಿತ ರೂಪದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
* ಆಯ್ಕೆ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ದಾಖಲೆಗಳ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುವುದು
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 26 ಫೆಬ್ರವರಿ, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10 ಏಪ್ರಿಲ್, 2024.