ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ (Revenue Department) ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ (VA recruitment) ಹುದ್ದೆಗಳ ನೇಮಕಾತಿ ಕುರಿತಂತೆ ಸರ್ಕಾರದಿಂದ ಅಪ್ಡೇಟ್ ಒಂದು ಬಿಡುಗಡೆ ಆಗಿದೆ. ಕೆಲ ದಿನಗಳ ಹಿಂದೆಯಷ್ಟೇ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸಿ, ನೇಮಕಾತಿ ವಿಧಾನದಲ್ಲೂ ಸಾಕಷ್ಟು ಬದಲಾವಣೆಯನ್ನು ತರಲಾಗಿತ್ತು.
ಹಿಂದೆ ದ್ವಿತೀಯ PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆ ಮಾಡಲಾಗುತ್ತಿದ್ದಾದರೂ ಕೊರಾನ ಅವಧಿಯಲ್ಲಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಕೂಡ ಈ ರೀತಿ ಹೆಚ್ಚಿನ ಅಂಕಗಳನ್ನು ಪಡೆದಿರುವುದರಿಂದ ಗೊಂದಲವಾಗಬಾರದು ಎನ್ನುವ ಉದ್ದೇಶದಿಂದ ಎಂದಿನಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ರೀತಿ ಈ ನೇಮಕಾತಿಗೂ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಈ ಸುದ್ದಿ ಓದಿ:- ಹೋಟೆಲ್ ಬ್ಯುಸಿನೆಸ್ ಪ್ರತಿದಿನ 15 ಸಾವಿರ ಖರ್ಚು, 25 ಸಾವಿರ ಲಾಭ.!
ಅದರಂತೆ ಸರ್ಕಾರದ ವತಿಯಿಂದ ಪ್ರಸ್ತುತವಾಗಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು? ಇದಕ್ಕೆ ವಿಧಿಸಿರುವ ಇನ್ನಿತರ ಮಾನದಂಡಗಳು ಏನು? ಅರ್ಜಿ ಸಲ್ಲಿಸುವುದು ಹೇಗೆ?.
ಆಯ್ಕೆ ವಿಧಾನ ಹೇಗೆ? ವೇತನ ಶ್ರೇಣಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತ್ಯಾದಿ ಮಾಹಿತಿಯನ್ನು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:-SBI ಬ್ಯಾಂಕ್ ನಾ ಎಲ್ಲಾ ಗ್ರಾಹಕರಿಗೆ 3 ಬಂಪರ್ ಗಿಫ್ಟ್, ಮಾರ್ಚ್ 31ರ ವರೆಗೆ ಮಾತ್ರ ಈ ಅವಕಾಶ.!
ನೇಮಕಾತಿ ಇಲಾಖೆ:- ಕಂದಾಯ ಇಲಾಖೆ
ನೇಮಕಾತಿ ಸಂಸ್ಥೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆ ಹೆಸರು:- ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ:- 1000 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕದೆಲ್ಲೆಡೆ…
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21,400 ದಿಂದ ರೂ.42,000 ವೇತನ ಇರುತ್ತದೆ.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST ಅಭ್ಯರ್ಥಿಗಳಿಗೆ 5 ವರ್ಷಗಳು.
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವ ವಿದ್ಯಾಲಯದಿಂದ ದ್ವಿತೀಯ PUC ಅಥವಾ ಇದಕ್ಕೆ ತತ್ಸಮನಾದ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವ ವಿಧಾನ:-
https://cetonline.karnataka.gov.in/kea/vacrec24 ಈ ವೆಬ್ಸೈಟ್ ಲಿಂಕ್ ಮಾಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ಸಂದರ್ಶನ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ನಲ್ಲಿ ಪಾವತಿ ಮಾಡಬಹುದು.
* OBC ಅಭ್ಯರ್ಥಿಗಳಿಗೆ – ರೂ.750
* SC / ST, ಪ್ರವರ್ಗ-1, ಮಾಜಿ ಸೈನಿಕ, ವಿಕಲ ಚೇತನ ಅಭ್ಯರ್ಥಿಗಳಿಗೆ – ರೂ.500
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 04 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03 ಏಪ್ರಿಲ್, 2024.