ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನದ ದಿನಾಂಕ ಘೋಷಣೆ, ಮೊಬೈಲ್ ಆಪ್ ಮೂಲಕವೇ ಅರ್ಜಿ ಸಲ್ಲಿಸಬಹುದು, ರೇಷನ್ ಕಾರ್ಡ್ ಇಲ್ಲದವರು ಹೀಗೆ ಮಾಡಿ.!

ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಕಾರ್ಯೋಜನೆಗಳಲ್ಲಿ ಈಗಾಗಲೇ ಮೂರು ಯೋಜನೆಗಳ ಪ್ರಯೋಜನವನ್ನು ಜುಲೈ ತಿಂಗಳಿನಲ್ಲಿ ರಾಜ್ಯದ ಜನತೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ಮಹಿಳೆಯರು ಕಾಯುತ್ತಿರುವ ಮಹತ್ವಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಆರಂಭ ಆಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ ಮಾಡುವ ದಿನಾಂಕ ಈಗಾಗಲೇ ಘೋಷಣೆಯಾಗಿತ್ತು, ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ.

WhatsApp Group Join Now
Telegram Group Join Now

ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ತನ್ನದೇ ಆದ ಆಪ್ ಸಿದ್ಧಪಡಿಸುತ್ತಿರುವುದರಿಂದ ಅರ್ಜಿ ಆಹ್ವಾನ ಪ್ರಕ್ರಿಯೆ ತಡವಾಗಿದೆ ಎಂದು ತಿಳಿದು ಬಂದಿದೆ. ಈಗ ನಿಖರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ ದಿನಾಂಕ ಯಾವಾಗ ಮತ್ತು ಯೋಜನೆಯ ಸಹಾಯಧನ ಫಲಾನುಭವಿಗಳ ಖಾತೆಗೆ ಯಾವಾಗ ವರ್ಗಾವಣೆ ಆಗುತ್ತದೆ ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ದಾಖಲೆಗಳಾಗಿ ಏನೇನು ಬೇಕು ಎನ್ನುವುದನ್ನು ವಿವರವಾಗಿ ತಿಳಿಸಿದ್ದಾರೆ.

ಸಚಿವೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ ಮೊಬೈಲ್ ಆಪ್ ಮೂಲಕ ಕೂಡ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆಯಂತೆ. ಎರಡು ಮೂರು ನಿಮಿಷಗಳ ಒಳಗೆ ಅರ್ಜಿ ಸಲ್ಲಿಸಲು ಅನುಕ್ಲ ಆಗುವಂತೆ ಸರಳವಾಗಿ ಸರ್ಕಾರ ಆಪ್ ತಯಾರಿಸಿದೆ, ಈ ಆಪ್ ಅಲ್ಲಿ ಅರ್ಜಿ ಸಲ್ಲಿಸುವುದರಿಂದ ಅರ್ಜಿ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಹಾಗೂ ಮಧ್ಯವರ್ತಿಗಳ ಹಾವಳಿಯೂ ಇರುವುದಿಲ್ಲ.

ಜೊತೆಗೆ ಪ್ರತಿ 1000 ಜನಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಿಸುವುದರಿಂದ ಅವರು ಕೂಡ ಅರ್ಜಿ ಸಲ್ಲಿಸಲು ನೆರವಾಗುತ್ತಾರೆ. ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಬಾಪೂಜಿ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಅರ್ಜಿ ಆಹ್ವಾನ ಮಾಡಲು ಕೇಂದ್ರ ಕಾಂಗ್ರೆಸ್ ನಾಯಕರನ್ನು ಕೇಳಿಕೊಳ್ಳಲಾಗಿದೆ ಅವರ ಅನುಮತಿ ಸಿಕ್ಕರೆ ಜುಲೈ 17 ರಂತೆ ಅರ್ಜಿ ಆಹ್ವಾನ ಮಾಡಲಾಗುವುದು.

ಆಗಸ್ಟ್ 17 ರಿಂದ ಫಲಾನುಭವಿಗಳು ಖಾತೆಗೆ 2000ರೂ. ಸಹಾಯಧನ ಜಮೆ ಆಗುತ್ತದೆ. ಒಂದು ವೇಳೆ ತಡವಾದರೆ ಜುಲೈ 19 ರಿಂದ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭ ಆಗುತ್ತದೆ ಆಗಸ್ಟ್ 19ರಿಂದ ಮನೆ ಯಜಮಾನಿ ಖಾತೆಗೆ 2000ರೂ. ಸಹಾಯಧನದ ವರ್ಗಾವಣೆ ಮಾಡಲಾಗುತ್ತದೆ ಎಂದು ನಿಖರ ಮಾಹಿತಿ ಕೊಟ್ಟಿದ್ದಾರೆ. ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿರುವುದಾಗಿ ಕೂಡ ತಿಳಿಸಿದ್ದಾರೆ.

ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸುವವರು ಪೂರಕ ದಾಖಲೆಗಳನ್ನು ಲಗ್ಗತ್ತಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಎನ್ನುವುದನ್ನು ತಿಳಿಸಿದ್ದಾರೆ. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ. GST ಪಾವತಿ ಮಾಡುವ ಕುಟುಂಬಗಳು, ರೇಷನ್ ಕಾರ್ಡ್ ಹೊಂದಿರದ ಕುಟುಂಬಗಳು, ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ.

ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ ಅವರು ಫಲಾನುಭವಿಗಳಾಗಲು ಸಾಧ್ಯವಿಲ್ಲ ಆದರೆ ರೇಷನ್ ಕಾರ್ಡ್ ಇಲ್ಲದವರು ಹೊಸ APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲೆ ಅನುಮತಿ ನೀಡುವುದರಿಂದ ಗೃಹಲಕ್ಷ್ಮಿ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ ರೇಷನ್ ಕಾರ್ಡ್ ಪಡೆದು ನಂತರ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಗೃಹಲಕ್ಷ್ಮಿ ಅರ್ಜಿ ಫಾರಂ
● ಆಧಾರ್‌ ಕಾರ್ಡ್‌
● ಬ್ಯಾಂಕ್‌ ಪಾಸ್‌ ಬುಕ್‌
● ಫೋಟೋ
● ರೇಷನ್‌ ಕಾರ್ಡ್‌.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now