ದೇಶದಾದ್ಯಂತ ಇರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದ ಕಡೆಯಿಂದ ಸಿಹಿ ಸುದ್ದಿ ಇದೆ. ಪ್ರತಿ ವರ್ಷ ರೈಲ್ವೆ ಇಲಾಖೆ ಕಡೆಯಿಂದ ಸಾವಿರಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಅಷ್ಟೇ RRB ಕಡೆಯಿಂದ ಸುಮಾರು 15,000 ಕ್ಕೂ ಹೆಚ್ಚು ಅಸಿಸ್ಟೆಂಟ್ ಲೋಕೋ ಪೈಲೆಟ್, ಟೆಕ್ನಿಷಿಯನ್, ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು.
ಈಗ ಮತ್ತೊಮ್ಮೆ ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ದೊರೆಯುತ್ತಿದ್ದು ಈ ಬಾರಿ ಕೂಡ ಸುಮಾರು 11,000 ಕ್ಕೂ ಹೆಚ್ಚು ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ (RRB Recruitment) ಹೊರಡಿಸಲಾಗಿದೆ. ಆಸಕ್ತರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಲೇಖನದಲ್ಲಿ ಈ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ ಇದರ ಸಂಬಂಧಿತ ವಿವರ ತಿಳಿಸಿ ಕೊಡುತ್ತಿದ್ದೇವೆ.
ಈ ಸುದ್ದಿ ಓದಿ:- 11 ಕೋಟಿ ಪಾನ್ ಕಾರ್ಡ್ ರದ್ದು.! ನಿಮ್ಮ ಹೆಸರಿದಿಯೇ ಚೆಕ್ ಮಾಡಿಕೊಳ್ಳಿ
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ
ಹುದ್ದೆ ಹೆಸರು:- ರೈಲ್ವೆ ಟಿಕೆಟ್ ಕಲೆಕ್ಟರ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 11,250 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದ ವಿವಿಧ ಕಡೆಗಳಲ್ಲಿ…
ಶೈಕ್ಷಣಿಕ ವಿದ್ಯಾರ್ಹತೆ:-
* ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಆರ್ಟ್ಸ್ / ಕಾಮರ್ಸ್ / ಸೈನ್ಸ್ ವಿಭಾಗದಲ್ಲಿ ದ್ವಿತೀಯ PUC ಉತ್ತೀರ್ಣರಾಗಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 32 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳು
* SC / ST ವರ್ಗದ ಅಭ್ಯರ್ಥಿಗಳಿಗೆ 05 ವರ್ಷಗಳು.
ಈ ಸುದ್ದಿ ಓದಿ:- ಗಂಗಾಕಲ್ಯಾಣ ಯೋಜನೆ ಬೋರ್ವೆಲ್ ಹಾಕಿಸಲು 3.5 ಲಕ್ಷ ಉಚಿತ.!
ಅರ್ಜಿ ಸಲ್ಲಿಸುವ ವಿಧಾನ:-
* ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಡಿ
* ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕ್ ನೀಡಲಾಗಿರುತ್ತದೆ.
* ಆ ಲಿಂಕ್ ಮೇಲೆ ಕ್ಲಿಕ್ ಮಾಡಿ, ನೋಟಿಫಿಕೇಷನ್ ನಲ್ಲಿ ನೀಡಿರುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ಪೂರಕ ದಾಖಲೆಗಳ ಸಂಖ್ಯೆಗಳನ್ನು ಸರಿಯಾಗಿ ನಮೂದಿಸಿ
* ನಿಮ್ಮ ವರ್ಗಕ್ಕೆ ಸೂಚಿಸಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ, ಇ-ರಸೀದಿ ಪಡೆದು ಆ ಸಂಖ್ಯೆಯನ್ನು ಕೂಡ ನಮೂದಿಸಿ.
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ, ಭವಿಷ್ಯದಲ್ಲಿ ಇದು ಅನುಕೂಲಕ್ಕೆ ಬರುತ್ತದೆ.
ಆಯ್ಕೆ ವಿಧಾನ:-
* ಮೊದಲಿಗೆ ಅರ್ಜಿ ಸಲ್ಲಿಸಿದೆ ಎಲ್ಲಾ ಅಭ್ಯರ್ಥಿಗಳಿಗೂ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT) ನಡೆಸಲಾಗುತ್ತದೆ
* ಕನ್ನಡವು ಸೇರಿದಂತೆ ಭಾರತದ ಸುಮಾರು 13ಕ್ಕೂ ಹೆಚ್ಚು ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ
* ಇದರಲ್ಲಿ ಅರ್ಹತೆ ಹೊಂದವರಿಗೆ ನೇರ ಸಂದರ್ಶನ ನಡೆಸಿ ಅವರ ದಾಖಲೆಗಳನ್ನು ಪರಿಶೀಲನೆ ನಡೆಸಿ ಸೂಕ್ತರನ್ನು ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಯ್ದುಕೊಳ್ಳಲಾಗುತ್ತದೆ.
ಈ ಸುದ್ದಿ ಓದಿ:- ರೈತರಿಗೆ ಇನ್ಮುಂದೆ ಪ್ರತಿ ತಿಂಗಳು 3000 ಪಿಂಚಣಿ.! ಕೇಂದ್ರ ಸರ್ಕಾರದ ಹೊಸ ಯೋಜನೆ.!
ಅರ್ಜಿ ಶುಲ್ಕ:-
* SC / ST, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
* ಉಳಿದ ಎಲ್ಲಾ ಅಭ್ಯರ್ಥಿಗಳಿಗೂ ರೂ.100 ಅರ್ಜಿ ಶುಲ್ಕವನ್ನು ನಿಗಧಿ ಪಡಿಸಲಾಗಿದೆ
ಪ್ರಮುಖ ದಿನಾಂಕಗಳು:-
* ಈ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಶೀಘ್ರದಲ್ಲಿಯೇ ಭಾರತೀಯ ರೈಲ್ವೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಬಲವಾದ ಮೂಲಗಳ ಮಾಹಿತಿ ಪ್ರಕಾರ ಜೂನ್ ಮೊದಲನೇ ವಾರದಲ್ಲಿ ಅರ್ಜಿ ಸ್ವೀಕಾರ ಮಾಡಲು ಆರಂಭಿಸಲಾಗುತ್ತದೆ.