ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಈಗಷ್ಟೇ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಸುಮಾರು 600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದೆ ಮತ್ತು ವಿವಿಧ ಇಲಾಖೆಗಳಿಂದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.
ಆದರೆ ಅತಿ ಕಡಿಮೆ ಸಂಖ್ಯೆಯಲ್ಲಿ ಉದ್ಯೋಗವಕಾಶ ನೀಡಲಾಗುತ್ತಿದೆ ಎಂದು ವಿರೋಧ ವ್ಯಕ್ತವಾಗುತ್ತಿತ್ತು ಈಗ ಇದರ ಬಗ್ಗೆ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡಾ ನ್ಯೂಸ್ ಸಿಗುತ್ತಿದೆ. ಈ ಬಾರಿ ಬರೋಬ್ಬರಿ 5,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಬಗ್ಗೆ ಸರ್ಕಾರ ಘೋಷಿಸಿದೆ.
ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದಲೇ ಹಲವು ವರ್ಷಗಳಿಂದ ಖಾಲಿ ಇರುವ ಚಾಲಕ ಮತ್ತು ನಿರ್ವಾಹಕ ಹುದ್ದೆ ಸೇರಿದಂತೆ ಕಚೇರಿಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯು ಕೂಡ ಆರಂಭವಾಗುತ್ತಿದೆ. ಕಳೆದ ವಾರವಷ್ಟೇ ಈ ಬಗ್ಗೆ ಸರ್ಕಾರದಿಂದ ಪ್ರಸ್ತಾಪವಾಗಿದ್ದು, ಈಗಾಗಲೇ ಇದರ ಕುರಿತಂತೆ ಎಲ್ಲೆಡೆ ಚರ್ಚೆ ಜೋರಾಗಿದೆ.
ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಸಿಗಲಿದೆ 1500/- ವಿದ್ಯಾರ್ಥಿ ವೇತನ ಆಸಕ್ತರು ಅರ್ಜಿ ಸಲ್ಲಿಸಿ.!
ಹಾಗಾಗಿ ಇದರ ಸಂಬಂಧ ಈ ಅಂಕಣದಲ್ಲಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಬೃಹತ್ ಸಂಖ್ಯೆಯಲ್ಲಿ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವುದರಿಂದ ಈ ಹುದ್ದೆಗಳಿಗೆ ವಿದ್ಯಾರ್ಹತೆ ಎಷ್ಟಿರಬೇಕು, ಇವುಗಳ ನೇಮಕಾತಿ ಪ್ರಕ್ರಿಯೆ ಹೇಗೆ ಆರಂಭ ಆಗುತ್ತದೆ? ವಯೋಮಿತಿ ಹಾಗೂ ವಿದ್ಯಾರ್ಹತೆ ಮಾನದಂಡಗಳೇನು ಎನ್ನುವುದರ ಕುರಿತು ಕೆಲ ಪ್ರಮುಖ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ.
ಸರ್ಕಾರದಿಂದ ಅಧಿಕೃತ ಪ್ರಕಟಣೆ, ಹೊರ ಬಿದ್ದಾಗ ನೋಟಿಫಿಕೇಶನ್ ಅಲ್ಲಿ ಕೂಡ ಸವಿವರವಾಗಿ ಇದರ ಬಗ್ಗೆ ತಿಳಿಸಲಾಗಿರುತ್ತದೆ. ಸದ್ಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚು ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತದೆ ಎನ್ನುವುದನ್ನು ನಿಖರವಾದ ಮಾಹಿತಿ ಇದೆ.
* ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ (KKRTC) 1,737 ಹುದ್ದೆಗಳು
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ(BMTC) 2,500 ಹುದ್ದೆಗಳು.
ಕೇಳಲಾಗುವ ಶೈಕ್ಷಣಿಕ ವಿದ್ಯಾರ್ಹತೆ:-
* ಇದುವರೆಗೂ ಕೂಡ ನಿರ್ವಾಹಕ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! ಮೊಬೈಲ್ ಮೂಲಕವೇ ಈ ರೀತಿ ಅರ್ಜಿ ಸಲ್ಲಿಸಿ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು
* OBC ಅಭ್ಯರ್ಥಿಗಳಿಗೆ 3 ವರ್ಷಗಳು
ವೇತನಶ್ರೇಣಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ ರೂ.30,000 ವೇತನ ಇರುತ್ತದೆ, ಇದರೊಂದಿಗೆ ಇನ್ನಿತರ ಸೌಲಭ್ಯಗಳು ಕೂಡ ಇರುತ್ತವೆ. ನೋಟಿಫಿಕೇಶನ್ ನಲ್ಲಿ ವಿವರವಾಗಿ ತಿಳಿಸಿರುತ್ತಾರೆ.
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಇದು ಲಿಖಿತ ರೂಪದ ಬಹು ಆಯ್ಕೆಯ ಪ್ರಶ್ನೆಗಳನ್ನೊಳಕೊಂಡ ಪರೀಕ್ಷೆ ಆಗಿರುತ್ತದೆ.
* ಆಯ್ಕೆ ಆದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ
* ಅಂತಿಮ ಸುತ್ತಿನಲ್ಲಿ ನೇರ ಸಂದರ್ಶನ ನಡೆಸಿ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದಾಡ ಇಲಾಖೆಗಳ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ನೇರವಿಡಿ ಅರ್ಜಿ ಸಲ್ಲಿಸಲು ಅವಕಾಶಗಳಿರುತ್ತವೆ. ಆಗ ಅರ್ಜಿ ಸಲ್ಲಿಸಬಹುದು. ಸರ್ಕಾರದಿಂದ ಶೀಘ್ರವಾಗಿ ನೇಮಕಾತಿ ನಡೆದು ಕರ್ನಾಟಕದ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರಕಲಿ ಎಂದು ನಾವು ಕೂಡ ಆಶಿಸುತ್ತೇವೆ. ನಿಮ್ಮ ಅಭ್ಯಾಸವನ್ನು ಚುರುಕುಗೊಳಿಸಿಕೊಳ್ಳಿ…