ರಾಜ್ಯದಾದ್ಯಂತ ಇರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಭಾರತೀಯ ಜೀವ ವಿಮಾ ನಿಗಮದ (Life Insurance Corporation of India) ಕಡೆಯಿಂದ ಸಿಹಿ ಸುದ್ದಿ ಇದೆ. LIC ಸಂಸ್ಥೆಯು ತನ್ನ ಕಚೇರಿಯಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ (AAO) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಹಾಯಕ ಆಡಳಿತ ಹುದ್ದೆಗಳ (LIC AAO EXAM) ಪರೀಕ್ಷೆ ನಡೆಸುತ್ತದೆ.
ಈ ಪರೀಕ್ಷೆಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಚಾರ್ಟೆಡ್ ಅಕೌಂಟೆಡ್, ಆಕ್ಚುರಿಯಲ್, ಲೀಗಲ್, ರಾಜಭಾಷಾ ಮತ್ತು IT ಮುಂತಾದ ವಿವಿಧ ವಿಭಾಗಗಳಲ್ಲಿ ಅವಕಾಶವನ್ನು ನೀಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಪಟ್ಟ ಹಾಗೆ ಇರುವ ಪ್ರಮುಖ ಮಾಹಿತಿಗಳನ್ನು ಈ ಲೇಖನದ ಮೂಲಕ ವಿವರಿಸುತ್ತಿದ್ದೇವೆ. ಆಸಕ್ತರು ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದಾಗಿದೆ.
ಈ ಸುದ್ದಿ ಓದಿ:- ರೈತರಿಗೆ ಉಚಿತ ಮೇವಿನ ಬಿತ್ತನೆ ಬೀಜ ಕಿಟ್ ವಿತರಣೆ.!
ನೇಮಕಾತಿ ಸಂಸ್ಥೆ:- ಭಾರತೀಯ ಜೀವ ವಿಮಾ ನಿಗಮ (LIC)
ಉದ್ಯೋಗ ಸಂಸ್ಥೆ:- ಭಾರತೀಯ ಜೀವ ವಿಮಾ ನಿಗಮ (LIC)
ಹುದ್ದೆ ಹೆಸರು:- ಸಹಾಯಕ ಆಡಳಿತ ಅಧಿಕಾರಿ (AAO)
ಉದ್ಯೋಗ ಸ್ಥಳ:- ಭಾರತದಾದ್ಯಂತ ಇರುವ ವಿವಿಧ LIC ಶಾಖೆಗಳಲ್ಲಿ
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.53,600 ರಿಂದ ರೂ.88,667 ರ ವರೆಗೆ ವೇತನ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಸುದ್ದಿ ಓದಿ:- SBI ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷಗಳು
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 30 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 03 ವರ್ಷಗಳು
* SC/ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 05 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* LIC ಶೀಘ್ರದಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆಗೊಳಿಸುತ್ತದೆ. ನಂತರ LIC ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
LIC ವೆಬ್ ಸೈಟ್ – www.licindia.com
* ಸ್ಕ್ರೀನ್ ನಲ್ಲಿ ಕಾಣುವ ಕೆರಿಯರ್ ವಿಭಾಗಕ್ಕೆ (Carrier) ಹೋಗಿ
* LIC AAO 2024 ನೇಮಕಾತಿಯ ಅಧಿಸೂಚನೆ ಮೇಲೆ ಕ್ಲಿಕ್ ಮಾಡಿ, ಡೆಸ್ಕ್ ಟಾಪ್ ಸೆಟ್ಟಿಂಗ್ ಗಳು ಪಾಪ್ – ಆಪ್ ಗಳನ್ನು ಅನುಮತಿಸುತ್ತವೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.
* ನೋಟಿಫಿಕೇಶನ್ ಅಲ್ಲಿ ನೀವು ಓದಿದಂತೆ ಅದರಲ್ಲಿ ತಿಳಿಸಿರುವ ಕೈಪಿಡಿಯ ಪ್ರಕಾರವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಿ
* ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಲಾಗುವ ಪೂರಕ ದಾಖಲೆಗಳ ವಿವರಗಳನ್ನು ಸ್ಕ್ಯಾನ್ ಮಾಡಿ ಆಯಾ ಗಾತ್ರ ಮತ್ತು ಆಯಾಮಗಳ ನಿಯಮಗಳಂತೆ ಪರಿಶೀಲಿಸಿ.
* ಎಲ್ಲವು ಪೂರ್ತಿಯಾದ ಮೇಲೆ ಮತ್ತೊಮ್ಮೆ ಪರಿಶೀಲಿಸಿ, ಕೊನೆಯಲ್ಲಿ ಸಲ್ಲಿಸು ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ.
* ಭವಿಷ್ಯದ ಬಳಕೆಗಾಗಿ ಅರ್ಜಿ ಸಲ್ಲಿಕೆ ಪೂರ್ತಿಯಾದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ಮಾಡಿ ಇಟ್ಟುಕೊಳ್ಳಿ.
ಈ ಸುದ್ದಿ ಓದಿ:- ಸ್ವಂತ ಮನೆ ಕಟ್ಟಬೇಕು ಅನ್ನುವವರಿಗೆ ಸಿಹಿ ಸುದ್ದಿ.! ಈ ಬ್ಯಾಂಕ್ ನಲ್ಲಿ ಸಿಗಲಿದೆ ಅತಿ ಕಡಿಮೆ ಬಡ್ಡಿಗೆ ಸಾಲ.!
ಆಯ್ಕೆ ವಿಧಾನ:-
* ಮೂರು ಹಂತಗಳಲ್ಲಿ ಪರೀಕ್ಷೆ ನಡೆಯುತ್ತದೆ
1. ಪೂರ್ವಭಾವಿ ಹಂತ
2. ಮುಖ್ಯ ಪರೀಕ್ಷೆ
3. ಸಂದರ್ಶನ
* ಇದಾದ ಮೇಲೆ ಜನರಲ್ ಮೆಡಿಕಲ್ ಟೆಸ್ಟ್ ನಡೆಸಿ ಅರ್ಹ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ತಯಾರಿಸಿ ಆಯ್ದುಕೊಳ್ಳಲಾಗುತ್ತದೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಅನುಮತಿ ನೀಡುವ ದಿನಾಂಕವನ್ನು ಶೀಘ್ರದಲ್ಲಿಯೇ LIC ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.