ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಇದೆ. ಅದೇನೆಂದರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (RDWSD) ಜಲ ಜೀವನ್ ಮಿಷನ್ ಯೋಜನೆಯಡಿ (Jalajeevan Mission) ಶಿವಮೊಗ್ಗ ಜಿಲ್ಲೆ (Shimoga district) ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಕೆಲ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇಮಕಾತಿ ನಿಬಂಧನೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ (Nitification) ಹೊರಡಿಸಲಾಗಿದ್ದು, ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ, ದಿನಾಂಕ ಹಾಗೂ ಇತರ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್.
ನೇಮಕಾತಿ ಸಂಸ್ಥೆ:- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ (RDWSD)
ಒಟ್ಟು ಹುದ್ದೆಗಳು:- 1 ಹುದ್ದೆ
ಹುದ್ದೆ ವಿವರ:- ಭೂ-ವಿಜ್ಞಾನಿ
ಉದ್ಯೋಗ ಸ್ಥಳ:- ಶಿವಮೊಗ್ಗ
ವೇತನ ಶ್ರೇಣಿ:- ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಗೆ ಮಾಸಿಕವಾಗಿ ರೂ. 30,000 ರಿಂದ ರೂ. 35,000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಅರ್ಹತೆಗಳು:-
* ಕನಿಷ್ಠ 60% ಅಂಕಗಳೊಂದಿಗೆ ಎಂ.ಎಸ್ಸಿ (Geology) ಪದವಿ ಪಡೆದಿರಬೇಕು.
* ಸದರಿ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 45 ವರ್ಷಗಳು
ಆಶ್ರಯ ಯೋಜನೆ ಸ್ವಂತ ಮನೆ ಇಲ್ಲದವರಿಗೆ ಉಚಿತ ಸೈಟ್ ಹಂಚಿಕೆ ಆಸಕ್ತರು ಅರ್ಜಿ ಸಲ್ಲಿಸಿ.!
ಅರ್ಜಿ ಸಲ್ಲಿಸುವ ವಿಧಾನ:-
* ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು RDWSD ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
* ಇಲಾಖೆಯ ವೆಬ್‌ಸೈಟ್ ಗೆ ನಲ್ಲಿ ಅರ್ಜಿ ಸಲ್ಲಿಸಲು ನೀಡಿರುವ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
* ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿಗಳನ್ನು ಭರ್ತಿ ಮಾಡಿ
* ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ಪ್ರಮಾಣ ಪತ್ರಗಳ ಸಂಖ್ಯೆಯನ್ನು ನಮೂದಿಸಲು ಸೂಚಿಸಿದ್ದರೆ ಅದನ್ನು ಪಾಲಿಸಿ
* ಎಲ್ಲ ವಿವರಗಳನ್ನು ಮತ್ತೊಮ್ಮೆ ಚೆಕ್ ಮಾಡಿ Submit ಬಟನ್ ಕ್ಲಿಕ್ ಮಾಡಿ. ತಪ್ಪದೇ ಇ-ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಶುಗರ್ ಇದ್ರೂ ಅನ್ನ ತಿನ್ನಬಹುದು. ಚಪಾತಿ, ರಾಗಿ ಮುದ್ದೆ, ಯಾವುದು ಉತ್ತಮ.? ಡಾಕ್ಟರ್ ಅಂಜನಪ್ಪ ಅವರ ಸಲಹೆ ಒಮ್ಮೆ ಕೇಳಿ.!
ಆಯ್ಕೆ ವಿಧಾನ:-
* ವಿದ್ಯಾರ್ಹತೆ
* ಅನುಭವ
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:- ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು:-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 11, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 25, 2024
ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
* ಆಧಾರ್ ಕಾರ್ಡ್
* ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಪಟ್ಟ ಪ್ರಮಾಣ ಪತ್ರಗಳು ಮತ್ತು ಅಂಕಪಟ್ಟಿಗಳು
* ಕೆಲಸದ ಅನುಭವಕ್ಕೆ ಸಂಬಂಧಿಸಿದ ದಾಖಲೆಗಳು.
* ಇತ್ಯಾದಿ ಇನ್ಯಾವುದೇ ಪ್ರಮುಖ ದಾಖಲೆಗಳು.