ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಜುಲೈ 19 ರಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸಿರುವ ಸೇವಾ ಕೇಂದ್ರಗಳಲ್ಲಿ ಈಗ ಯಾವುದೇ SMS ಪಡೆಯದಿದ್ದರೂ ಕೂಡ ಸೂಕ್ತ ದಾಖಲೆಗಳಾದ ರೇಷನ್ ಕಾರ್ಡ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಕೊಟ್ಟು ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರದ ಕಂಡೀಷನ್ ಗೆ ಒಳಪಟ್ಟಿರುವ ಕರ್ನಾಟಕದ ಎಲ್ಲಾ ಕುಟುಂಬಗಳ ಯಜಮಾನಿಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡುವಂತಹ ಯೋಜನೆ ಇದಾಗಿದ್ದು ಈಗಾಗಲೇ ಕರ್ನಾಟಕದಾದ್ಯಂತ ಲಕ್ಷಾಂತರ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಆದರೆ ಕೆಲವರು ಮಾತ್ರ ದಾಖಲೆಗಳಲ್ಲಿ ಹೊಂದಾಣಿಕೆ ಆಗದೆ ಸಮಸ್ಯೆ ಪಡುತ್ತಿದ್ದಾರೆ.
ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಕುಟುಂಬದ ಹಿರಿಯ ಮಹಿಳೆ ಹೆಸರು ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಇಲ್ಲವಾದಲ್ಲಿ ಅದನ್ನು ತಿದ್ದುಪಡಿ ಮಾಡಿಸಬೇಕು. ಹಾಗೆಯೇ ಆಧಾರ್ ಕಾರ್ಡ್ ನಲ್ಲಿ ಮತ್ತು ಪಡಿತರ ಚೀಟಿಯಲ್ಲಿರುವ ಹೆಸರು ಹೊಂದಾಣಿಕೆ ಆಗಬೇಕು, ಆಧಾರ್ ಕಾರ್ಡ್ ಅಲ್ಲಿರುವ ಮೊಬೈಲ್ ಸಂಖ್ಯೆಗೆ OTP ಬರುತ್ತದೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಆ OTP ಯನ್ನು ಸಹಾ ಹೇಳಬೇಕು.
ಹಾಗೂ ಆಧಾರ್ ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುತ್ತದೆ ಅದೇ ಖಾತೆಗೆ ಹಣ ವರ್ಗಾವಣೆ ಆಗುವುದರಿಂದ ಕಡ್ಡಾಯವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ Adhar Seeding and NPCI Mapping ಆಗಿರಲೇಬೇಕು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕದ ಬಗ್ಗೆ ಸರ್ಕಾರ ಇದುವರೆಗೂ ತಿಳಿಸಿಲ್ಲ, ಆದರೆ ಆಗಸ್ಟ್ 15ರಂದು ಸ್ವತಂತ್ರ ದಿನಾಚರಣೆಯ (Independence day) ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ DBT ಮೂಲಕ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ನಾಳೆಯಿಂದ ಉಚಿತ ಬಸ್ ಯೋಜನೆ ಬಂದ್.! ಸರ್ಕಾರದ ಹೊಸ ಆದೇಶ ನೋಡಿ.!
ಅಂದು ನಡೆಯುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲು ಚಾಲನೆ ನೀಡಲಿದ್ದಾರೆ ಮತ್ತು ಆಗಸ್ಟ್ 16 ಹಾಗೂ 17ರ ಒಳಗೆ ಕರ್ನಾಟಕದ ಎಲ್ಲಾ ಮಹಿಳೆಯರ ಖಾತೆಗೂ ಹಣ ವರ್ಗಾವಣೆ ಆಗಲಿದೆ ಎನ್ನುವ ಸುದ್ದಿ ಇದೆ.
ಹೀಗಾಗಿ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಸ್ವತಂತ್ರ ದಿನಾಚರಣೆ ಸಮಯದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಸಿಗುತ್ತದೆ ಎಂದು ಊಹಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಒಂದು ವೇಳೆ ದಾಖಲೆಗಳಲ್ಲಿ ಸಮಸ್ಯೆ ಇದ್ದವರು ತಿದ್ದುಪಡಿ ಮಾಡಿಸಿಕೊಂಡು ಅರ್ಜಿ ಸಲ್ಲಿಸಿದರು ಕೂಡ ಮುಂದಿನ ದಿನಗಳಲ್ಲಿ ಅವರಿಗೂ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಸಿಗಲಿದೆ.
ಬ್ಯಾಂಕ್ ನಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟವರಿಗೆ RBI ಹೊಸ ಸೂಚನೆ.! ಕೂಡಲೇ ಈ ಸುದ್ದಿ ನೋಡಿ ಎಚ್ಚೆತ್ತುಕೊಳ್ಳಿ.!
ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಅನುಮತಿ ನೀಡಿದೆ. ಹಾಗೆಯೇ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿಸಲು UIDAIನ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಆಧಾರ್ ಲಿಂಕ್ ಸ್ಟೇಟಸ್ ಬಗ್ಗೆ ಚೆಕ್ ಮಾಡಿ ಹತ್ತಿರದ ಬ್ಯಾಂಕ್ ಶಾಖೆಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಈ ಪ್ರಕ್ರಿಯೆಯನ್ನು 3-4 ದಿನದ ಒಳಗಡೆ ಪೂರ್ತಿಗೊಳಿಸಬಹುದು ಅಥವಾ ಆನ್ಲೈನಲ್ಲಿ ಕೂಡ ಅವಕಾಶವಿದ್ದು ಆಯಾ ಬ್ಯಾಂಕ್ ಆಪ್ ಗಳು, ATM ಮಿಷನ್ ಮೂಲಕ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬಹುದು.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಎಂದು ಚೆಕ್ ಮಾಡುವ ವಿಧಾನ:-
● ಆಧಾರ್ ಅಧಿಕೃತ ವೆಬ್ ಸೈಟ್ https://resident.uidai.gov.in/bank-mapper ಭೇಟಿ ನೀಡಿ.
● ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಕ್ಯಾಪ್ಚಾ ಎಂಟ್ರಿ ಮಾಡಿ.
● ನಿಮ್ಮ ಆಧಾರ್ ನಂಬರ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
● ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ, ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.