ದೇಶದಾದ್ಯಂತ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗ ಆಕಾಂಕ್ಷಿಗಳು, ನಿರುದ್ಯೋಗಿಗಳು ಹಾಗೂ ಉದ್ಯೋಗ ಬದಲಾಯಿಸಬೇಕು ಎಂದು ಅಂದುಕೊಂಡಿರುವ ಉದ್ಯೋಗಿಗಳಿಗೆ ಸಿಹಿ ಸುದ್ದಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಖ್ಯಾತಿ ಹೊಂದಿರುವ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ತನ್ನ ಮುಖ್ಯಶಾಖೆ ಹಾಗೂ ಇತರ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 400ಕ್ಕೂ ಹೆಚ್ಚು ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.
ಈ ಹುದ್ದೆಗಳಿಗೆ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಹತೆ ಹೊಂದಿರುವ ದೇಶದ ಎಲ್ಲಾ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷೆಗಳನ್ನು ಎದುರಿಸಿ ಹುದ್ದೆ ಪಡೆಯಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಈ ಅಂಕಣದಲ್ಲಿ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಸಂಪೂರ್ಣ ವಿವರಗಳನ್ನು ತಿಳಿಸಿ ಕೊಡುತ್ತಿದ್ದೇವೆ.
ಉದ್ಯೋಗ ಸಂಸ್ಥೆ:- ಬ್ಯಾಂಕ್ ಆಫ್ ಮಹಾರಾಷ್ಟ್ರ.
ಹುದ್ದೆ:- ಆಫೀಸರ್ ಹುದ್ದೆಗಳು.
ಒಟ್ಟು ಹುದ್ದೆಗಳ ಸಂಖ್ಯೆ:- 400
ಹುದ್ದೆಗಳ ವಿವರ:-
● ಆಫೀಸರ್ (ಗ್ರೇಡ್ 2) – 100
● ಆಫೀಸರ್ (ಗ್ರೇಡ್ 3) – 300
ಉದ್ಯೋಗ ಸ್ಥಳ:- ಬ್ಯಾಂಕ್ ಆಫ್ ಮಹಾರಾಷ್ಟ್ರದ ವಿವಿಧ ಶಾಖೆಗಳಲ್ಲಿ…
ವೇತನ ಶ್ರೇಣಿ:-
● ಆಫೀಸರ್ (ಗ್ರೇಡ್ 2) – 48,170 ರಿಂದ 69,810.
● ಆಫೀಸರ್ (ಗ್ರೇಡ್ 3) – 63,840 ರಿಂದ 78,230.
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇತರೆ ಅರ್ಹತಾ ಮಾನದಂಡಗಳು:-
● ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಪಾಸ್ ಮಾಡಿರಬೇಕು.
● SC / ST / OBC / PWD ಅಭ್ಯರ್ಥಿಗಳು 55% ಕನಿಷ್ಠ ಅಂಕ ಗಳಿಸಿರಬೇಕು.
● JAIIB / CAIIB ಪಾಸ್ ಆದ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ಇರುತ್ತದೆ.
● CA / CMA / CFA ಪಾಸ್ ಮಾಡಿರಬೇಕು.
● ಗ್ರೇಡ್ 2 ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
● ಗ್ರೇಡ್ 3 ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 5 ವರ್ಷ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ:-
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು.
● ಗ್ರೇಡ್ 2 ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು.
● ಗ್ರೇಡ್ 3 ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 38 ವರ್ಷಗಳು.
ಅರ್ಜಿ ಶುಲ್ಕ:-
● SC / ST / PWD ಅಭ್ಯರ್ಥಿಗಳಿಗೆ 118ರೂ.
● ಉಳಿದ ವರ್ಗದ ಅಭ್ಯರ್ಥಿಗಳಿಗೆ 1180ರೂ.
ಆಯ್ಕೆ ವಿಧಾನ:-
● ಆನ್ಲೈನ್ ಪರೀಕ್ಷೆ
● ಸಂದರ್ಶನ.
ಅರ್ಜಿ ಸಲ್ಲಿಸುವ ವಿಧಾನ:-
ಬ್ಯಾಂಕ್ ಆಫ್ ಮಹಾರಾಷ್ಟ್ರ ಅಧಿಕೃತ ವೆಬ್ಸೈಟ್ ಆದ bankofmaharashtra.in ಗೆ ಭೇಟಿ ನೀಡಿ.
● Career Section ಎನ್ನುವುದನ್ನು ಸೆಲೆಕ್ಟ್ ಮಾಡಿ Current opening ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ
● ಈ ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಲಿಂಕ್ ಇರುತ್ತದೆ, ಅದನ್ನು ಕ್ಲಿಕ್ ಮಾಡಿ
● Apply Online ಮೇಲೆ ಕ್ಲಿಕ್ ಮಾಡಿ.
● ಅರ್ಜಿ ಫಾರಂ ಅಲ್ಲಿ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಕೇಳಲಾದ ಎಲ್ಲಾ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು:-
ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 13.07.2023.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25.07.2023.