ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಕೂಡಾ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಏನಿದು ಯುವನಿಧಿ ಯೋಜನೆ?
ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಉದ್ದೇಶದಿಂದ ಆರಂಭಿಸಿದ ಯೋಜನೆಯೇ ಯುವನಿಧಿ ಯೋಜನೆ. ಇದು ಕಾಂಗ್ರೆಸ್‌ನ 5ನೇ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.
ಈ ಯೋಜನೆಯ ಪ್ರಕಾರ 2022-23 ಸಾಲಿನಲ್ಲಿ ಪದವಿ ಮುಗಿಸಿದವರಿಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮುಗಿಸಿದವರಿಗೆ ತಿಂಗಳಿಗೆ 1500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ. ಈ ಯೋಜನೆಗೆ ಉದ್ಯೋಗ ದೊರೆತವರು ಹಾಗೂ ಸ್ವಂತ ಉದ್ಯಮ ಆರಂಭಿಸುವವರು ಫಲಾನುಭವಿಗಳಾಗುವುದು ಸಾಧ್ಯವಿಲ್ಲ. ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರು ಪ್ರತಿ ತಿಂಗಳ 25ನೇ ತಾರೀಕಿನ ಒಳಗೆ ಭತ್ಯೆಯನ್ನು ಪಡೆಯುತ್ತಾರೆ. ಸುಮಾರು 5.29 ಲಕ್ಷ ಮಂದಿ ಈ ಯೋಜನೆಯ ಅರ್ಹತೆ ಪಡೆಯುವ ಸಾಧ್ಯತೆ ಇದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ.
ಏನಿದು ದಾಖಲೆ?
ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ ಯುವ ನಿಧಿ ಯೋಜನೆಯಾಗಿದೆ. ಇದರಿಂದಾಗಿಯೇ ಯುವನಿಧಿ ಯೋಜನೆಯ ಫಲಾನುಭವಿಗಳು ತಾವು ನಿರುದ್ಯೋಗಿಗಳು ಎಂದು ಖಚಿತಪಡಿಸುವುದು ಅತೀ ಮುಖ್ಯವಾಗುತ್ತದೆ. ಹೌದು, ನೀವು ಪ್ರತಿ ತಿಂಗಳು ಈ ಯೋಜನೆಯ ಮೊತ್ತವನ್ನು ಪಡೆಯಬೇಕಾದರೆ, ಪ್ರತಿ ತಿಂಗಳು ಕೂಡಾ ತಮಗೆ ಹಣ ಲಭ್ಯವಾಗಿಲ್ಲ ಎಂದು ತಿಳಿಸಬೇಕಾಗುತ್ತದೆ. ಹೌದು, ನಮಗೆ ಉದ್ಯೋಗ ಸಿಕ್ಕಿಲ್ಲ ಅಥವಾ ನಾವು ಉನ್ನತ ಶಿಕ್ಷಣವನ್ನು ಮಾಡುತ್ತಿಲ್ಲ ಎಂದು ಸ್ವಯಂ ಘೋಷಿತ ಪ್ರಮಾಣಪತ್ರವನ್ನು ಅಪ್ಲೋಡ್ ಮಾಡಬೇಕು.
ನೀವು ಪ್ರತಿ ತಿಂಗಳು ಕೂಡಾ ಈ ದಾಖಲೆಗಳನ್ನು ಅಪ್‌ಲೋಡ್ ಮಾಡದಿದ್ದರೆ ಯುವನಿಧಿ ಹಣ ಖಾತೆಗೆ ಮೊತ್ತವು ಜಮೆ ಆಗುವುದಿಲ್ಲ. ಆದ್ದರಿಂದಾಗಿ, ನೀವು ಪ್ರತಿ ತಿಂಗಳು ಕೂಡಾ ಈ ದಾಖಲೆಯನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ.
ಈ ಸುದ್ದಿ ಓದಿ:- HSRP Number Plate: ಹೆಚ್.ಎಸ್.ಆರ್.ಪಿ ನೋಂದಣಿಗೆ ಪಾವತಿಸಬೇಕಾದ ಶುಲ್ಕ ವಿವರದ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.!
2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಪಡೆಯದವರು ಮತ್ತು ಉನ್ನತ ವಿದ್ಯಾಭ್ಯಾಸ ಮಾಡದವರು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ https://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ನೀವು ಅರ್ಹರೇ ಎಂದು ಹೀಗೆ ತಿಳಿಯಿರಿ
* ಅರ್ಜಿದಾರರು ಕರ್ನಾಟಕದ ನಿವಾಸಿಗಳು ಆಗಿರಬೇಕು.
* ಡಿಪ್ಲೋಮಾ ಅಥವಾ ಪದವಿ ಪಡೆದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಯಲ್ಲಿ ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡಿಕೊಳ್ಳಬೇಕು.
* ಇಂತಹ ಇತರೆ ಯೋಜನೆಗಳ ಪ್ರಯೋಜನ ಪಡೆಯುತ್ತಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
* ಇದರ ಅಡಿಯಲ್ಲಿ 2023 ರಲ್ಲಿ ಪದವಿ ಮತ್ತು ಡಿಪ್ಲೋಮಾ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 12 ರಂದು ಶಿವಮೊಗ್ಗದಲ್ಲಿ ಆರಂಭ ಮಾಡಲಾಗಿದೆ. ಯುವನಿಧಿ ಯೋಜನೆಗೆ ಅಂದಾಜು 5.29 ಲಕ್ಷ ಪದವೀಧರರು ಮತ್ತು ಡಿಪ್ಲೋಮಾದಾರರು ಅರ್ಹರಾಗಿದ್ದಾರೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
20222-23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿ 180 ದಿನಗಳು ಕಳೆದರೂ ಉದ್ಯೋಗ ದೊರೆಯದೇ ಇರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಬಯಸುವವರು ಸೇವಾಸಿಂಧು ವೆಬ್‌ಸೈಟ್ ಮೂಲಕ ಸಲ್ಲಿಕೆ ಮಾಡಬಹುದು. ಇದಲ್ಲದೇ ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆಧಾರ ನಂಬರ್ ಹಾಗೂ ಬ್ಯಾಂಕ್ ಖಾತೆಯ ವಿವರವನ್ನು ನೀಡುವುದು ಕಡ್ಡಾಯವಾಗಿದೆ. ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಮೊತ್ತ ಜಮಾ ಆಗುತ್ತದೆ. ಅರ್ಜಿ ಸಲ್ಲಿಸ ಬಯಸುವವರು https://sevasindhuservices.karnataka.gov.in/ ಈ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳು
* ಆಧಾರ್ ಕಾರ್ಡ್
* ವಿಳಾಸ ದೃಢೀಕರಣ ಪತ್ರ
* ಆದಾಯ ದೃಢೀಕರಣ ಪತ್ರ
* ಶೈಕ್ಷಣಿಕ ಅರ್ಹತೆಯ ದಾಖಲೆಗಳು
* ಬ್ಯಾಂಕ್ ಖಾತೆಯ ವಿವರ
ಯುವನಿಧಿಗೆ ಅರ್ಜಿ ಸಲ್ಲಿಸಲು ಅವಶ್ಯ ಮಾನದಂಡಗಳು
* ಅರ್ಜಿದಾರರು ಕರ್ನಾಟಕದ ನಿವಾಸಿಯಾಗಿರಬೇಕು.
* 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿರಬೇಕು.
* ಪದವಿ ಮುಗಿಸಿ 180 ದಿನಗಳವರೆಗೆ ಯಾವುದೇ ಉದ್ಯೋಗ ದೊರೆತಿರಬಾರದು ಹಾಗೂ ಸ್ವಂತ ಉದ್ಯೋಗ ಮಾಡಿರಬಾರದು.
* ಉನ್ನತ ಶಿಕ್ಷಣ ಮಾಡಲು ದಾಖಲಾತಿ ಮಾಡಿರುವವರು, ಅಪ್ರೆಂಟಿಸ್ ಆಗಿ ಸಂಬಳ ಪಡೆಯುವವರು ಹಾಗೂ ಖಾಸಗಿ ಅಥವಾ ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರು ಈ ಯೋಜನೆಯ ಲಾಭ ಪಡೆಯಲು ಅರ್ಹರಲ್ಲ.
ಯುವನಿಧಿಯಂತಹ ಯೋಜನೆ ಯಾವೆಲ್ಲಾ ರಾಜ್ಯದಲ್ಲಿ ಜಾರಿಯಲ್ಲಿದೆ?
ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿಯಂತಹ ಯೋಜನೆ ಜಾರಿಯಲ್ಲಿರುವುದು ಕರ್ನಾಟಕದಲ್ಲಿ ಮಾತ್ರವಲ್ಲ. ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಇಂತಹ ಯೋಜನೆಗಳು ಜಾರಿಯಲ್ಲಿವೆ.
ಈ ಸುದ್ದಿ ಓದಿ:- ಹೊಸದಾಗಿ ಮದುವೆಯಾಗುವ ದಂಪತಿಗಳಿಗೆ ಸರ್ಕಾರದಿಂದ ಸಿಗಲಿದೆ 50,000 ಸಹಾಯಧನ.!
ಕೇರಳದಲ್ಲಿ ಮೊದಲ ಬಾರಿಗೆ ಅಂದರೆ 1982ರಲ್ಲೇ ಈ ರೀತಿಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ ಕಾಲದಲ್ಲಿ ನಿರುದ್ಯೋಗಿಗಳಿಗೆ ತಿಂಗಳಿಗೆ 120 ರೂ. ನೀಡುವ ಯೋಜನೆಯನ್ನು ಜಾರಿಗೊಳಿಸಿತ್ತು. ರಾಜಸ್ಥಾನದಲ್ಲೂ ಈ ಯೋಜನೆ ಜಾರಿಯಲ್ಲಿದೆ. ಇದು ನಿರುದ್ಯೋಗಿ ಪುರುಷರಿಗೆ 3000 ರೂ ಹಾಗೂ ಮಹಿಳೆಯರಿಗೆ 3500 ರೂ ನೀಡುವ ಯೋಜನೆಯಾಗಿದೆ.