ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC Recruitment) ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಅಧಿಸೂಚನೆ ಹೊರಡಿಸಿದೆ.
ಈ ಹುದ್ದೆಗಳಿಗೆ ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಯು ಕೂಡ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರವಾಗಿ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಸರಿಯಾದ ವಿಧಾನದಲ್ಲಿ ಅರ್ಜಿ ಸಲ್ಲಿಸಿ ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಕರ್ನಾಟಕ ಸರ್ಕಾರದ ಹೆಮ್ಮೆಯ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ ಮಾಡುವ ಅವಕಾಶ ಸಿಗುತ್ತದೆ.
ಈ ಸುದ್ದಿ ಓದಿ:- ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಬಸ್ ನಲ್ಲಿ ಓಡಾಡುತ್ತಿರುವ ಮಹಿಳೆಯರಿಗೆ ಹೊಸ ರೂಲ್ಸ್ ತಂದ ಸರ್ಕಾರ.!
ಈ ಬಗ್ಗೆ ಆಸಕ್ತಿ ಇರುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಈ ಬಗ್ಗೆ ಪ್ರಮುಖ ಸಂಗತಿಗಳನ್ನು ಹಂಚಿಕೊಳ್ಳುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಉದ್ಯೋಗ ಸಂಸ್ಥೆ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)
ಹುದ್ದೆ ಹೆಸರು:- ನಿರ್ವಾಹಕ ಹುದ್ದೆಗಳು (Conductor)
ಒಟ್ಟು ಹುದ್ದೆಗಳ ಸಂಖ್ಯೆ:- 2,500 ಹುದ್ದೆಗಳು
ಹುದ್ದೆಗಳ ವಿವರ:-
HK – 214 ಹುದ್ದೆಗಳು
Non HK – 2286 ಹುದ್ದೆಗಳು
ಉದ್ಯೋಗ ಸ್ಥಳ:- ಬೆಂಗಳೂರು
ಈ ಸುದ್ದಿ ಓದಿ:- PUC ಆದವರಿಗೂ ಸಿಗುತ್ತೆ 50,000 ಸಂಬಳ, 500 ದೊಡ್ಡ ದೊಡ್ಡ ಕಂಪನಿಗಳಲ್ಲಿ ತಕ್ಷಣ ಕೆಲಸಕ್ಕೆ ಬೇಕಾಗಿದ್ದರೆ ಆಸಕ್ತರು, ನೋಡಿ.!
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18,000 ದಿಂದ ರೂ.25,300 ವೇತನ ಮತ್ತು ಇದರೊಂದಿಗೆ ಇನ್ನಿತರ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಆದ ನಂತರ PUC / ITI / ಡಿಪ್ಲಮೋ ಪಾಸ್ ಆಗಿರಬೇಕು
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಲಿಕೆ:-
* SC / ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 05 ವರ್ಷಗಳು
* OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 03 ವರ್ಷಗಳು
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಈ ಸುದ್ದಿ ಓದಿ:- ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್, ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಇದ್ದರೆ ತಿಂಗಳಿಗೆ 5000 ಹಣ ಸಿಗಲಿದೆ.!
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಅಧಿಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
* ಮೊಬೈಲ್ ನಂಬರ್ ಮೂಲಕ ಮೊದಲಿಗೆ ರಿಜಿಸ್ಟರ್ ಆಗಬೇಕು ಆನಂತರ ಅರ್ಜಿ ಸಲ್ಲಿಸಲು ನೀಡಿರುವ ಲಿಂಕ್ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
* ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿರಬೇಕು
* ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿ ಮಾಡಿ ಇ-ರಸೀದಿ ಪಡೆಯಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದ ನಂತರ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು.
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:-
* SC / ST, ಪ್ರವರ್ಗ -1ರ ಅಭ್ಯರ್ಥಿಗಳಿಗೆ ರೂ.750
* ಉಳಿದ ಎಲ್ಲಾ ಅಭ್ಯರ್ಥಿಗಳಿಗೂ ರೂ.500
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 19 ಏಪ್ರಿಲ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18 ಮೇ, 2024.