ಸರ್ಕಾರದಿಂದ (Government Schemes) ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಗ್ಯಾರಂಟಿಯೇತರವಾಗಿ ಹಲವಾರು ಕಲ್ಯಾಣ ಯೋಜನೆಗಳು ಘೋಷಣೆಯಾಗಿವೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗೆ ಈ ಬಗೆಯ ಹತ್ತಾರು ಯೋಜನೆಗಳನ್ನು ಘೋಷಿಸಿರುವ ಮುಖ್ಯಮಂತ್ರಿಗಳು ರಾಜ್ಯದ ನಿರುದ್ಯೋಗ ನಿರ್ವಹಣೆಗಾಗಿ ಸ್ವಯಂ ಉದ್ಯೋಗ ಮಾಡುವ ಯುವಜನತೆಗೆ ಪ್ರೇರೇಪಿಸುವ ಸಲುವಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದ್ದಾರೆ.
ಆರ್ಥಿಕವಾಗಿ ಮತ್ತು ಸಾಮಾಜಿಕ ವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಸಹಾಯಧನವನ್ನು ಕೂಡ ನೀಡಲಾಗುತ್ತಿದೆ. ಇಂತಹ ಒಂದು ವಿಶೇಷ ಯೋಜನೆ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ತಿಂಗಳ ಕೊನೆಯ ದಿನ ಅಂತಿಮ ಗಡುವಾಗಿದೆ. ಮಾಹಿತಿ ತಿಳಿದುಕೊಂಡು ನೀವು ಆಸಕ್ತಿ ಇದ್ದರೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಕುಟುಂಬದವರು ಮತ್ತು ಸ್ನೇಹಿತರಿಗೆ ಈ ಯೋಜನೆ ಬಗ್ಗೆ ತಿಳಿಸಿ ನೆರವಾಗಿ.
ಈ ಸುದ್ದಿ ಓದಿ:-ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, SSLC ಪಾಸ್ ಆಗಿದ್ದರೆ ಸಾಕು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
ಯೋಜನೆಯ ಹೆಸರು:- ಸ್ವಯಂ ಉದ್ಯೋಗ ಸಾಲ
ಯೋಜನೆಯ ಉದ್ದೇಶ:-
* ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಿಗೆ (Minority
Communities of state) ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಕಡಿಮೆ ಬಡ್ಡಿ ದರದಲ್ಲಿ ಈ ಸಾಲ ಸೌಲಭ್ಯ(Loan facility) ಒದಗಿಸುವ ಯೋಜನೆಯನ್ನು ಘೋಷಿಸಿದೆ.
* ಈ ಯೋಜನೆಯಡಿ, ಅಲ್ಪಸಂಖ್ಯಾತರಿಗೆ ವ್ಯಾಪಾರ ಗುಡಿ ಕೈಗಾರಿಕೆ, ಹೈನುಗಾರಿಕೆ, ಪಶು ಸಂಗೋಪನೆ, ಕುರಿ ಕೋಳಿ ಸಾಕಾಣಿಕೆ ಅಥವಾ ಇನ್ನಿತರ ಯಾವುದೇ ವಿವಿಧ ಉದ್ಯಮಗಳನ್ನು ಪ್ರಾರಂಭಿಸಲು ಅಗತ್ಯವಿರುವ ಹಣಕಾಸಿನ ನೆರವನ್ನು ನೀಡಲು ನಿರ್ಧರಿಸಿದೆ.
ಈ ಸುದ್ದಿ ಓದಿ:-5 ಸಾವಿರ ಹೂಡಿಕೆ ಮಾಡಿ ಕೋಟ್ಯಾಧಿಪತಿಗಳಾಗುವುದು ಹೇಗೆ ಅಂತ ನೋಡಿ.!
* ಈ ಯೋಜನೆಯ ಮೂಲಕ ನೆರವನ್ನು ಒದಗಿಸಿ ಅಲ್ಪಸಂಖ್ಯಾತ ಸಮುದಾಯಗಳ ಜನರು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ನೆರವು ಮತ್ತು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಉದ್ದೇಶವಾಗಿದೆ.
ಸಿಗುವ ನೆರವು:-
* ಯೋಜನಾ ಘಟಕದ 33% ವೆಚ್ಚ ಅಥವಾ
* ಗರಿಷ್ಠ ರೂ. 1 ಲಕ್ಷದವರೆಗೆ ಸಹಾಯಧನ
ಅರ್ಜಿ ಸಲ್ಲಿಸಲು ಅರ್ಹತೆಗಳು:-
* ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು
* ಸರ್ಕಾರದಿಂದ ಗುರುತಿಸಲ್ಪಟ್ಟ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಯುವಜನತೆ ಅರ್ಜಿ ಸಲ್ಲಿಸಬಹುದು
* ಅರ್ಜಿದಾರರು ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 55 ವರ್ಷ ಮೀರಿರಬಾರದು.
ಈ ಸುದ್ದಿ ಓದಿ:-ರಾಜ್ಯ ಸರ್ಕಾರದಿಂದ ಮತ್ತೊಂದು ಸೇವೆ.! ಇನ್ಮುಂದೆ ಕಣ್ಣಿನ ಸಮಸ್ಯೆಗೆ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಬರಲಿದ್ದಾರೆ ವೈದ್ಯರು.!
* ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಿಗೆ ರೂ. 81000 ಹಾಗೂ ನಗರ ಪ್ರದೇಶದಲ್ಲಿ ರೂ.1,30,000 ಮೀರಿರಬಾರದು.
* ಅರ್ಜಿದಾರನ ಕುಟುಂಬದಲ್ಲಿ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಿರಬಾರದು ಮತ್ತು ಯಾರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಸದ್ಯಕ್ಕಿಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ ಶೀಘ್ರದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಕಾರ್ಯರೂಪಕ್ಕೆ ಬರಲಿದೆ.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
*https://kmdconline.karnataka.gov.in/Portal/home ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
* ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಅಥವಾ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು
* ಅರ್ಜಿ ಸಲ್ಲಿಸಲು ಫೆಬ್ರವರಿ 29, 2024 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
* ಚಿಕ್ಕಮಗಳೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
* ಸಹಾಯವಾಣಿ ಸಂಖ್ಯೆ: 08262-295843