ಪೋಲಿಸ್ ಇಲಾಖೆಯಲ್ಲಿ ಉದ್ಯೋಗ ಮಾಡಬೇಕು ಎನ್ನುವುದು ಯುವಜನತೆಯ ಕನಸು. ಪೊಲೀಸ್ ಇಲಾಖೆಯಲ್ಲಿ ಖಾಕಿ ತೊಟ್ಟು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೋರಾಡಬೇಕು ಎಂದು ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಶಾಲಾ ದಿನಗಳಿಂದಲೇ ಕನಸು ಕಂಡಿರುತ್ತಾರೆ. ಇಂಥವರಿಗೆಲ್ಲ ಈಗ ಸಿಹಿ ಸುದ್ದಿ ಹೊರ ಬಿದ್ದಿದೆ.
ಕೇಂದ್ರೀಯ ಮೀಸಲು ಪೋಲಿಸ್ ಪಡೆಯಲ್ಲಿ ಈ ಬಾರಿ ಖಾಲಿ ಇರುವ ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇದಕ್ಕಾಗಿ ಈಗಾಗಲೇ ಅಧಿಸೂಚನೆ ಕೂಡ ಹೊರಡಿಸಲಾಗಿದ್ದು ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿರುವ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಮಾಡಬೇಕು ಎಂದು ಕನಸು ಕಟ್ಟಿರುವ ಎಲ್ಲ ಯುವಜನತೆ ಕೂಡ ಈ ಹುದ್ದೆಗಳಿಗೆ ಅರ್ಹರಿದ್ದಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರಿಗಾಗಿ ಅನುಕೂಲ ಮಾಡಿಕೊಡಲು ಈ ಅಂಕಣದಲ್ಲಿ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಹುದ್ದೆಗಳ ವಿವರ,
ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸಲು ಕಡೆ ದಿನಾಂಕ, ಬೇಕಾದ ಪ್ರಮುಖ ದಾಖಲೆಗಳು ಹಾಗೂ ಆಯ್ಕೆ ವಿಧಾನ ಇನ್ನು ಮುಂತಾದ ವಿಷಯಗಳ ಬಗ್ಗೆ ತಿಳಿಸಿಕೊಡುವ ಪ್ರಯತ್ನವನ್ನು ಮಾಡಲಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದವರ ಜೊತೆಗೂ ಹಂಚಿಕೊಂಡು ಈ ಉದ್ಯೋಗ ಮಾಹಿತಿ ಎಲ್ಲರಿಗೂ ತಲುಪುವಂತೆ ಮಾಡಿ.
ಸಂಸ್ಥೆ :- CRPF ಕೇಂದ್ರೀಯ ಮೀಸಲು ಪೊಲೀಸ್ ಪಡೆ
ಹುದ್ದೆಗಳ ಸಂಖ್ಯೆ :- 1,29,929
ಉದ್ಯೋಗ ಸ್ಥಳ :- ಭಾರತದಾದ್ಯಂತ
ಹುದ್ದೆ :- ಕಾನ್ಸ್ಟೇಬಲ್
ಹುದ್ದೆಗಳ ವಿವರ :-
●ಕಾನ್ಸ್ಟೇಬಲ್ ಪುರುಷರು – 1,25,262
●ಕಾನ್ಸ್ಟೇಬಲ್ ಮಹಿಳೆಯರು – 4,667
ವೇತನ ಶ್ರೇಣಿ :- 21,700 – 69,100 ಮಾಸಿಕವಾಗಿ
ವಿದ್ಯಾರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ ಹಂತದ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು.
ವಯೋಮಿತಿ :- ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ 18 ವರ್ಷ ಪೂರ್ತಿಗೊಳಿಸಬೇಕು, ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :-
●SC&ST ಅಭ್ಯರ್ಥಿಗಳಿಗೆ 5 ವರ್ಷಗಳು
●OBC ಅಭ್ಯರ್ಥಿಗಳಿಗೆ 3 ವರ್ಷಗಳು
ಅರ್ಜಿ ಶುಲ್ಕ :- ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ :-
●ದೈಹಿಕ ದಕ್ಷತೆ ಪರೀಕ್ಷೆ
●ಲಿಖಿತ ಪರೀಕ್ಷೆ
●ಸಂದರ್ಶನ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :-
●ಇತ್ತೀಚಿನ ಭಾವಚಿತ್ರ ಮತ್ತು ಸಹಿ
●ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
●ಆಧಾರ್ ಕಾರ್ಡ್
●ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
●ಜಾತಿ ಮತ್ತು ಆದಾಯ ಪ್ರಮಾಣ ಪತ್ರ
●ಕನ್ನಡ ಮತ್ತು ಗ್ರಾಮೀಣ ವಿದ್ಯಾರ್ಥಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನ :-
●ಅಧಿಸೂಚನೆಯಲ್ಲಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
●CRPF ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಫಾರಂ ತುಂಬಿಸಿ ಸಂಬಂಧ ಪಟ್ಟ ಎಲ್ಲಾ ದಾಖಲೆಗಳನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ನಿಮ್ಮ ಅನುಕೂಲತೆಗಾಗಿ ಅರ್ಜಿ ಸಂಖ್ಯೆ, ವಿನಂತಿ ಸಂಖ್ಯೆ ಬರೆದಿಟ್ಟುಕೊಳ್ಳಿ ಅಥವಾ ಅರ್ಜಿ ಸಲ್ಲಿಸಿರುವ ಫಾರಂ ಅನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಬಹುದು.
ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :-
●ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 05.04.2023
●ಅರ್ಜಿ ಸಲ್ಲಿಸಲು ಕೊನೆ ದಿನಾಂಕ :- 05.05.2023