ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವು ತನ್ನಲ್ಲಿ ಖಾಲಿ ಇರುವ ವಿವಿಧ ವೃಂದದ 93 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 10ನೇ ತರಗತಿ ಮತ್ತು ದ್ವಿತೀಯ PUC ಉತ್ತೀರ್ಣರಾಗಿರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು.
ಅರ್ಜಿ ಸಲ್ಲಿಸುವುದಕ್ಕೆ ಮುನ್ನ ಸಂಬಂಧಪಟ್ಟ ಹಾಗೆ ಇರುವ ಎಲ್ಲಾ ಕಂಡಿಷನ್ ಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಿದುಕೊಂಡು ಮುಂದುವರೆಯುವುದು ಸೂಕ್ತ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನ ಮಾಡಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ನಾವು ಈ ಅಂಕಣದಲ್ಲಿ ನೋಟಿಫಿಕೇಷನ್ ನಲ್ಲಿರುವ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಿಳಿಸುತ್ತಿದ್ದೇವೆ.
ಈ ರೈತರಿಗೆ ಮಧ್ಯಂತರ ಬೆಳೆ ವಿಮೆ ಹಣ ಜಮೆ ಆಗಿದೆ.! ಎಷ್ಟು ಹಣ ಬಂದಿದೆ ಅನ್ನೋದನ್ನ ನಿಮ್ಮ ಮೊಬೈಲ್ ನಲ್ಲೇ ಈ ರೀತಿ ಚೆಕ್ ಮಾಡಿ.!
ನೇಮಕಾತಿ ಸಂಸ್ಥೆ:- ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಗಮ
ಒಟ್ಟು ಹುದ್ದೆಗಳ ಸಂಖ್ಯೆ:- 93 ಹುದ್ದೆಗಳು
ಹುದ್ದೆಗಳ ವಿವರ:-
* ಕಿರಿಯ ಸಹಾಯಕರು – 70 ಹುದ್ದೆಗಳು
* ವಾಹನ ಚಾಲಕರು – 02 ಹುದ್ದೆಗಳು
* ಅಟೆಂಡರ್ – 21 ಹುದ್ದೆಗಳು
ಉದ್ಯೋಗ ಸ್ಥಳ:- ಮಂಡ್ಯ
ವೇತನ ಶ್ರೇಣಿ:-
* ಕಿರಿಯ ಸಹಾಯಕರು – ರೂ.30,350 ದಿಂದ ರೂ.58,250
* ವಾಹನ ಚಾಲಕರು – ರೂ.27,650 ದಿಂದ ರೂ.52,650
* ಅಟೆಂಡರ್ – ರೂ.23,500 ದಿಂದ ರೂ.47,650.
ಶೈಕ್ಷಣಿಕ ವಿದ್ಯಾರ್ಹತೆ:-
1. ಕಿರಿಯ ಸಹಾಯಕರು:-
* ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ PUC ಪಾಸ್ ಮಾಡಿರಬೇಕು.
* ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು. * ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಗೃಹ ಜ್ಯೋತಿ ಯೋಜನೆಯಲ್ಲಿ ದೊಡ್ಡ ಬದಲಾವಣೆ, ಇನ್ಮುಂದೆ ಫ್ರೀ ಕರೆಂಟ್ ಇಲ್ಲ.! 10 ಯೂನಿಟ್ ಮಾತ್ರ ಫ್ರೀ, ಸಿಎಂ ಕಡೆಯಿಂದ ವಿದ್ಯುತ್ ಶಾ’ಕ್…
2. ವಾಹನ ಚಾಲಕರು:-
* SSLC ಉತ್ತೀರ್ಣರಾಗಿರಬೇಕು
* ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು
* ಕಾನೂನುಬದ್ಧ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
3. ಅಟೆಂಡರ್:-
* SSLC ಉತ್ತೀರ್ಣರಾಗಿರಬೇಕು
* ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು
ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಳೆದುಕೊಂಡಿದ್ರೆ ಈ ವಿಧಾನದ ಮೂಲಕ ಮತ್ತೆ ಪಡೆದುಕೊಳ್ಳಿ.!
ಅರ್ಜಿ ಶುಲ್ಕ:-
* ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು
* ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1500.
* SC / ST / ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.750
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಭೇಟಿ ಕೊಡಿ
* ವೆಬ್ಸೈಟ್ ವಿಳಾಸ:-
www.mandyadccbank.com
ಆಯ್ಕೆ ವಿಧಾನ:-
* ಲಿಖಿತ ರೂಪದ ಸ್ಪರ್ಧಾತ್ಮಕ ಪರೀಕ್ಷೆ
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 18 ಜನವರಿ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಫೆಬ್ರವರಿ 2024
* ಅಜ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ – 16 ಫೆಬ್ರವರಿ 2024
ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
* ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಆಧಾರ್ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಕನ್ನಡ ಮಾಧ್ಯಮ ಅಭ್ಯರ್ಥಿ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ