ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನ ಜಮೆ.! ಆಸಕ್ತರು ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುಗುಣವಾಗುವಂತೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಸಮಾಜ ಕಲ್ಯಾಣ ಇಲಾಖೆ, ಬುಡಕಟ್ಟು ಕಲ್ಯಾಣ ಇಲಾಖಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದಿರುವ ವರ್ಗಗಳ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕುಟುಂಬದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಈ ವಿದ್ಯಾರ್ಥಿ ವೇತನವನ್ನು ಕೊಡಲಾಗುತ್ತಿದೆ.

1ನೇ ತರಗತಿಯಿಂದ 10ನೇ ತರಗತಿವರೆಗೆ ಪ್ರಿಮೆಟ್ರಿಕ್ ಹಾಗೂ 10ನೇ ತರಗತಿಯ ಸ್ನಾತಕೋತರ ಪದವಿ ವರೆಗೆ ಪೋಸ್ಟ್ ಮೆಟ್ರಿಕ್ SSP ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ ಪೋಸ್ಟ್ ಮೆಟ್ರಿಕ್ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಖಾತೆಗೆ ಸರ್ಕಾರದಿಂದ ಹಣ ಜಮೆ ಆಗುತ್ತಿದೆ, ಕೆಲವು ವಿದ್ಯಾರ್ಥಿಗಳು ರೂ.10,470 ವಿದ್ಯಾರ್ಥಿ ವೇತನವನ್ನು DBT ಮೂಲಕ ಪಡೆದಿದ್ದಾರೆ. ಫಲಾನುಭವಿಗಳು ತಮ್ಮ ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ವಿಧಾನ:-

* ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಮೊದಲು SSP ಅಧಿಕೃತ ವೆಬ್‌ಸೈಟ್ ssp.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ.
* ಮುಖಪುಟದಲ್ಲಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ

* ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ, ಮೊಬೈಲ್ ನಂಬರ್ ನ್ನು ಭರ್ತಿ ಮಾಡಿ ಮತ್ತು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ಹಾಕಿದ ನಂತರ ID ಮತ್ತು ಪಾಸ್‌ವರ್ಡ್ ಪಡೆಯುತ್ತೀರಿ.
* ID ಮತ್ತು Password ಬಳಸಿ ಅರ್ಜಿ ಸಲ್ಲಿಸಿ ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಆದಮೇಲೆ ತಪ್ಪದೆ ಅರ್ಜಿ ಸಲ್ಲಿಕೆ ರೆಫರೆನ್ಸ್ ನಂಬರ್ ಸೇವ್ ಮಾಡಿ ಇಟ್ಟುಕೊಳ್ಳಿ.
* ಯಾವುದೇ ಸೇವಾ ಸಿಂಧು ಕೇಂದ್ರಗಳನ್ನು ಕೂಡ ನೀವು ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-

* ಅಭ್ಯರ್ಥಿಯ SATS ID ಸಂಖ್ಯೆ ಮತ್ತು ಶಾಲಾ / ಕಾಲೇಜು ನೋಂದಣಿ ಸಂಖ್ಯೆ
* ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್ ಸಂಖ್ಯೆ
* ಮೊಬೈಲ್ ಸಂಖ್ಯೆ
* ಬ್ಯಾಂಕ್ ಖಾತೆ ವಿವರ
* ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ನಲ್ಲಿ ದಾಖಲಾತಿ ಸಂಖ್ಯೆ
( ಅಲ್ಪಸಂಖ್ಯಾತಿಯ  ವಿದ್ಯಾರ್ಥಿಗಳಗೆ ಮಾತ್ರ ಅನ್ವಯ ) ಸೂಚನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

* ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್ ಡಿ ಇಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ( ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರಮಾಣ ಪತ್ರಗಳ ಸಂಖ್ಯೆ.
* ಕಳೆದ ವರ್ಷದ ಪರೀಕ್ಷೆಗಳ ಅಂಕಪಟ್ಟಿ
* ಶುಲ್ಕ ರಶೀದಿ
* ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ.

 

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now