ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೆಚ್ಚುತ್ತಿರುವ ಈ ಮಾಲಿನ್ಯ ನಿಯಂತ್ರಿಸಲು ಕ್ರಮ ಕೈಗೊಳ್ಳಲೇ ಬೇಕು. ಇದರ ನಿಯಂತ್ರಣಕ್ಕಾಗಿ ನೂತನ ನಿಯಮಗಳನ್ನು ಜಾರಿಗೆ ತರಲೇಬೇಕು ಮತ್ತು ಮಂಡಳಿ ಕಡೆಯಿಂದ ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಇದರಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಆದರೆ ಇದರ ಬಗ್ಗೆ ಜಾಗೃತಿ ಮೂಡಿಸುವುದು ಕೂಡ ಸರ್ಕಾರದ ಕರ್ತವ್ಯ ಹೀಗಾಗಿ ಒಟ್ಟಾರೆಯಾಗಿ ಈ ಮಾಲಿನ್ಯಗಳನ್ನು ನಿಯಂತ್ರಣ ತರಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB Recruitments) ಸಹಕರಿಸಬೇಕಾಗಿದೆ ಮತ್ತು ಕಾರ್ಯಪ್ರವೃತ್ತವಾಗಬೇಕಿದೆ. ಅಗತ್ಯ ಸಿಬ್ಬಂದಿಗಳ ಕೊರತೆಯಿಂದಾಗಿ ಮಂಡಳಿಗೆ ಸಾಕಷ್ಟು ಅನಾನುಕೂಲತೆಯೂ ಆಗುತ್ತಿದೆ.
ಪತಿ ಬಾರಿ ಸರ್ಕಾರಕ್ಕೆ ಈ ಕುರಿತಾಗಿ ಮಂಡಳಿ ಕಡೆಯಿಂದ ಮನವಿ ಸಲ್ಲಿಕೆಯಾಗುತ್ತಿತ್ತು. ಈಗ ಅಂತಿಮವಾಗಿ ಈ ನೇಮಕಾತಿಗಳ ಕುರಿತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ (Minister Eshwar Khandre) ಅವರೇ ಸಿಹಿಸುದ್ದಿ ನೀಡಿದ್ದಾರೆ.
ಈ ಸುದ್ದಿ ಓದಿ:- 1 BHK 3.5 ಲಕ್ಷದಲ್ಲಿ, 2BHK 6 ಲಕ್ಷದಲ್ಲಿ ಕೇವಲ 7 ದಿನಕ್ಕೆ ರೆಡಿ ಆಗುತ್ತದೆ ನಿಮ್ಮ ಕನಸಿನ ಸ್ವಂತ ಮನೆ.! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಮತ್ತು ಆಡಳಿತ ವಿಭಾಗಗಳಲ್ಲಿ ಖಾಲಿ ಇದೆ. ಈ 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಕೊಂಡಿದ್ದೇವೆ ಎನ್ನುವ ವಿಚಾರವನ್ನು ಸ್ವತಃ ಸಚಿವರ ಮಾಧ್ಯಮ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಹಿಂದೆಯೂ 2010ರಲ್ಲಿ ಮಂಡಳಿಯಲ್ಲಿ ಖಾಲಿ ಇದ್ದ 153 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಆ ಸಮಯದಲ್ಲಿ ಉಂಟಾದ ಅನೇಕ ಸಮಸ್ಯೆಗಳ ಕಾರಣದಿಂದಾಗಿ ಹಲವು ಹುದ್ದೆಗಳು ಭರ್ತಿ ಆಗದೆ ಹಾಗೆ ಉಳಿದಿದ್ದವು.
ಈಗ ಆ ಹುದ್ದೆಗಳನ್ನು ಒಳಗೊಂಡಂತೆ ಒಟ್ಟಾರೆಯಾಗಿ ಪ್ರಸ್ತುತ, ಮಂಡಳಿಯಲ್ಲಿ ರಾಜ್ಯ ವ್ಯಾಪಿ ಉಳಿಕೆ ವೃಂದ ಹಾಗೂ ರಾಜ್ಯ ವ್ಯಾಪಿ ಸ್ಥಳೀಯ ವೃಂದದಡಿಯಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಬಹುತೇಕ ಭರ್ತಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸುದ್ದಿ ಓದಿ:- ಕೇವಲ 20 ಸಾವಿರದಲ್ಲಿ ಶುರು ಮಾಡಿ 1.5 ಕೋಟಿ ವಹಿವಾಟು ಆಗುತ್ತಿರುವ ಬಿಸಿನೆಸ್, ಮನೆಯಲ್ಲಿ ಇದ್ದುಕೊಂಡು ಕೆಲಸ ಮಾಡಲು ಬಯಸುವ ಹೆಣ್ಣು ಮಕ್ಕಳೇ ಇಲ್ಲಿ ನೋಡಿ.!
ರಾಜ್ಯವ್ಯಾಪಿ ಉಳಿಕೆ ವೃಂದದ 146 ಹುದ್ದೆಗಳು ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದದ 6 ಹುದ್ದೆಗಳು ಸೇರಿ 152 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ನೇರ ನೇಮಕಾತಿ ಮೂಲಕ ಅರ್ಹರನ್ನು ಆಯ್ದುಕೊಳ್ಳಲು ಸರ್ಕಾರ ಅನುಮತಿ ನೀಡಿಯಾಗಿದೆ ಎನ್ನುವ ವಿಚಾರವನ್ನು ಮಿನಿಸ್ಟರ್ ಈಶ್ವರ ಖಂಡ್ರೆ ಯವರು ತಿಳಿಸಿದ್ದಾರೆ.
ಪ್ರಸ್ತುತ, ಮಂಡಳಿಯಲ್ಲಿ ಒಟ್ಟಾರೆ ಖಾಲಿಯಿರುವ ಒಟ್ಟು 253 ಹುದ್ದೆಗಳ ಪೈಕಿ ಸರ್ಕಾರದಿಂದ ಅನುಮತಿಸಿರುವ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಿದರೆ ಮಂಡಳಿಯಲ್ಲಿ ಕೊರತೆ ಇರುವ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಒಟ್ಟಾರೆಯಾಗಿ 6೦% ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ.
ಇದನ್ನು ಹೊರತು ಪಡಿಸಿ ಬಾಕಿ ಉಳಿದ 23 ಹುದ್ದೆಗಳನ್ನು ಬ್ಯಾಕ್ ಲಾಗ್ ಎಂದು ಪರಿಗಣಿಸಿ ಸದರಿ 152 ಹುದ್ದೆಗಳೊಂದಿಗೆ 23 ಹುದ್ದೆಗಳು ಸಹ ಸೇರಿಸಿ ಒಟ್ಟು 175 ಹುದ್ದೆಗಳನ್ನು ಭರ್ತಿ ಮಾಡಿದರೆ 69% ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿ:- ಇಂಡಿಯನ್ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ, ವೇತನ 89,000 ಆಸಕ್ತರು ಅರ್ಜಿ ಸಲ್ಲಿಸಿ.!