ರಾಜ್ಯದಲ್ಲಿ ಈ ಬಾರಿ ರೈತರ ಪರಿಸ್ಥಿತಿ ದಯಾಹೀನವಾಗಿದೆ. ಯಾಕೆಂದರೆ ಹಿಂದೆಂದೂ ಕಂಡು ಕೇಳದಂತಹ ಮಳೆ ಕೊರತೆ ಈ ವರ್ಷ ಕಂಡು ಬಂದಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು (Drought declared Thaluk) ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ಬರ ಪರಿಹಾರ ಕೈಪಿಡಿಯ ಅನುಸಾರವಾಗಿ ಈ ಬರ ಪರಿಶೀಲನೆ ಪ್ರಕ್ರಿಯೆ ಕೂಡ ಮುಗಿದಿದ್ದು ಕೇಂದ್ರಕ್ಕೆ ವರದಿ ಸಲ್ಲಿಕೆಯಾಗಿದೆ.
ಈಗ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರದ (Drought relief fund release) ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ. ಇದರ ನಡುವೆ ರಾಜ್ಯದ ರೈತರು ಈ ಬರಗಾಲದ ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಲು ಅನುಕೂಲವಾಗುವಂತೆ, ಮೇವು ಕೊರತೆ, ಉದ್ಯೋಗದ ಕೊರತೆ ಕುಡಿಯುವ ನೀರಿನ ಸಮಸ್ಯೆ ಇವುಗಳನ್ನು ನಿವಾರಿಸಲು ಅನೇಕ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಈ ಸುದ್ದಿ ಓದಿ:- ಅಂಗನವಾಡಿಯಲ್ಲಿ ಇನ್ಮುಂದೆ ಬೆಲ್ಲ, ಸಕ್ಕರೆ, ಅಡುಗೆ ಎಣ್ಣೆ ಎಲ್ಲಾ ರೇಷನ್ ಬಂದ್.!
ಕೆಲ ತಿಂಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರವು ಬರ ಪರಿಹಾರ ನೀಡಲು ತಡ ಮಾಡುತ್ತಿದೆ. ಹೀಗಾಗಿ ರೈತ ಪರ ರಾಜ್ಯ ಸರ್ಕಾರವು ನಮ್ಮ ರಾಜ್ಯದ ರೈತರಿಗೆ ಮೊದಲ ಹಂತದಲ್ಲಿ ರೂ.2000 ಬರ ಪರಿಹಾರದ ಹಣ ವರ್ಗಾವಣೆ ಮಾಡಲಿದೆ. ನಂತರ ಮುಂದಿನ ಹಂತಗಳಲ್ಲಿ ರೈತರ ಜಮೀನುಗಳ ವಿಸ್ತೀರ್ಣ ಹಾಗೂ ಅದಕ್ಕೆ ಅನ್ವಯವಾಗುವ ಪರಿಹಾರದಂತೆ ಉಳಿದ ಹಣ ವರ್ಗಾವಣೆ ಮಾಡಲಾಗುವುದು ಎನ್ನುವ ಮಾತುಗಳು ರಾಜ್ಯ ಸರ್ಕಾರದ ಕಡೆಯಿಂದ ಕೇಳಿ ಬಂದಿತ್ತು ಈಗ ಸಚಿವರೇ ಅದರ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಕೇಂದ್ರ ಸರಕಾರದಿಂದ ಅನುದಾನ ಬಾರದೇ ಇದ್ದುದರಿಂದ ಕರ್ನಾಟಕ ಸರ್ಕಾರ ಈ ಹಿಂದೆ ನೀಡಿದ್ದ ಭರವಸೆಯಂತೆ ಒಟ್ಟು 628 ಕೋಟಿ ರೂ. ಹಣವನ್ನು 33 ಲಕ್ಷ ರೈತರ ಖಾತೆಗೆ ವರ್ಗಾವಣೆ ಮಾಡಿದೆ ಎಂದು ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರ ಅನುದಾನ ಹಣ ಬಿಡುಗಡೆಯಾಗಿರುವ ವಿಷಯವನ್ನು ಮಾನ್ಯ ಕಂದಾಯ ಸಚಿವ ಕೃಷ್ಣಬೈರೇಗೌಡ (Revenue Minister Krishna Bairegowda) ರವರೇ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿ:- ರಾಜ್ಯದಲ್ಲಿ ಮತ್ತೊಮ್ಮೆ ಶಿಕ್ಷಕರ ನೇಮಕಾತಿ, 10,000 GPSTR, HSTR ನೇಮಕಾತಿ ಆರಂಭ.!
ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಮತ್ತು ರೈತರಿಗೆ ಬರ ಪರಿಹಾರ ನೀಡುವುದಕ್ಕಾಗಿಯೇ 2000 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಈಗಾಗಲೇ ರೂ.628 ಕೋಟಿ ಮೊತ್ತದ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ. ಇನ್ನೂ 1.6 ಲಕ್ಷ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣ ತಲುಪಲಿದೆ ಎಂದು ತಿಳಿಸಿದರು.
ಈ ವಿಚಾರದಲ್ಲಿ ಮಧ್ಯವರ್ತಿ ಕಾಟ ಇಲ್ಲದೆ ಫಲಾನುಭವಿಗೆ ಹಣ ತಲುಪಿಸಲು ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಲಾಡಿದೆ. ಮತ್ತು ಈ ನಿಯಮದಂತೆ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ.
ಈ ಸುದ್ದಿ ಓದಿ:- ಆಯುಷ್ಮಾನ್ ಕಾರ್ಡ್ ಕಳೆದು ಹೋಗಿದ್ಯಾ.! ಮೊಬೈಲ್ ಮೂಲಕ ಮತ್ತೆ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ ನೋಡಿ.!
ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ. ಮತ್ತು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೇ ಪ್ರಧಾನಿಗಳನ್ನು ಭೇಟಿ ಹಾಕಿ ಕೂಡಲೇ ಬರ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಿದ್ದಾರೆ ಈಗಾಗಲೇ ನಾಲ್ಕು ತಿಂಗಳು ಕಳೆದಿದೆ ಶೀಘ್ರವಾಗಿ ಕೇಂದ್ರ ಸರ್ಕಾರದ ನೆರವು ದೊರೆತರೆ ರೈತರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಕೂಡ ಕೇಳಿಕೊಂಡಿದ್ದಾರೆ.